ಮೈಸೂರು

ಕಲಬುರಗಿಯಲ್ಲಿ 500 ಗಡಿ ದಾಟಿದ ಕೊರೊನಾ, ರಾಜ್ಯದಲ್ಲಿ ಹೊಸದಾಗಿ 267 ಪ್ರಕರಣ, ಸೋಂಕಿತರ ಸಂಖ್ಯೆ 4063ಕ್ಕೆ ಏರಿಕೆ

June 4, 2020

ಬೆಂಗಳೂರು, ಜೂ. 3- ಲಾಕ್‍ಡೌನ್ ಸಡಿಲಗೊಳಿಸಿದ ನಂತರ ನೆರೆಯ ಮಹಾ ರಾಷ್ಟ್ರ ಕರುನಾಡಿಗೆ ಕಂಟಕವಾಗಿ ಕಾಡುತ್ತಿದ್ದು, ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಭಾರಿ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ಬುಧವಾರ ಒಂದೇ ದಿನ 267 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 4063ಕ್ಕೆ ಏರಿಕೆಯಾಗಿದೆ. ಕಲಬುರಗಿಯಲ್ಲಿ ಬುಧವಾರ ಬರೋ ಬ್ಬರಿ 105 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 500 ಗಡಿ ದಾಟಿದೆ. ಇನ್ನು ದಾವಣಗೆರೆಯಲ್ಲಿ ಕೊರೊನಾಗೆ ಮತ್ತೊಂದು ಬಲಿಯಾಗಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 53ಕ್ಕೆ ಏರಿಕೆಯಾಗಿದೆ.

Translate »