ಮೈಸೂರು

231ಕ್ಕಿಳಿದ ಕೊರೊನಾ ಸೋಂಕಿತರ ಸಂಖ್ಯೆ

February 14, 2021

ಮೈಸೂರು,ಫೆ.13(ವೈಡಿಎಸ್)-ಮೈಸೂರು ಜಿಲ್ಲೆಯಲ್ಲಿ ಶನಿವಾರ 22 ಮಂದಿಗೆ ಕೊರೊನಾ ಸೋಂಕು ತಗುಲಿದೆ. 14 ಸೋಂಕಿ ತರು ಗುಣವಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಕೊರೊನಾದಿಂದ ಒಂದೂ ಸಾವಿನ ಪ್ರಕರಣ ವರದಿ ಯಾಗಿಲ್ಲ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 53,762 ಮಂದಿಗೆ ಸೋಂಕು ತಗುಲಿದಂತಾಗಿದೆ. 52,504 ಸೋಂಕಿತರು ಗುಣಮುಖರಾಗಿದ್ದಾರೆ. ಒಟ್ಟು 1,027 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ. ಜಿಲ್ಲೆಯ ಲ್ಲಿನ್ನೂ 231 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ 82 ಮಂದಿ ಮನೆಯಲ್ಲೇ ಶುಶ್ರೂಷೆ ಪಡೆಯುತ್ತಿದ್ದಾರೆ. ಸರ್ಕಾರಿ ಆಸ್ಪತ್ರೆ-ನಿಗಾ ಕೇಂದ್ರಗಳಲ್ಲಿ 25, ಖಾಸಗಿ ಆಸ್ಪತ್ರೆಗಳು-ನಿಗಾ ಕೇಂದ್ರಗಳಲ್ಲಿ 124 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಖಾಸಗಿ ಲ್ಯಾಬ್‍ಗಳಲ್ಲಿ ಪರೀಕ್ಷೆ ಮಾಡಿಸಿರುವ 64,212 ಮಂದಿ ಸೇರಿ, ಒಟ್ಟು 8,42,053 ಮಂದಿ ಕೋವಿಡ್ ಪರೀಕ್ಷೆ ಗೊಳಗಾಗಿದ್ದಾರೆ.

 

Translate »