ದೇಶದಲ್ಲಿ ಮತ್ತೆ ಕೊರೊನಾ ಹೆಚ್ಚಳ ಬುಧವಾರ ಎಲ್ಲಾ ಸಿಎಂಗಳೊAದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ
ಮೈಸೂರು

ದೇಶದಲ್ಲಿ ಮತ್ತೆ ಕೊರೊನಾ ಹೆಚ್ಚಳ ಬುಧವಾರ ಎಲ್ಲಾ ಸಿಎಂಗಳೊAದಿಗೆ ಪ್ರಧಾನಿ ನರೇಂದ್ರ ಮೋದಿ ಸಭೆ

April 24, 2022

ನವದೆಹಲಿ, ಏ. ೨೩- ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಪರಿಸ್ಥಿತಿ ಕುರಿತು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊAದಿಗೆ ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಸಿಎಂಗಳ ಮಹತ್ವದ ಸಭೆ ನಡೆಸಲಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯಲಿರುವ ಈ ಸಭೆಯಲ್ಲಿ ದೇಶದ ಕೊರೊನಾ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳೊAದಿಗೆ ಚರ್ಚಿಸಲಿದ್ದಾರೆ ಎಂದು ಅಧಿಕೃತ ಮೂಲಗಳು ಮಾಹಿತಿ ನೀಡಿವೆ. ಪ್ರಧಾನಿ ಮೋದಿ ನೇತೃತ್ವದ ಸಭೆಯಲ್ಲಿ ಇತ್ತೀಚೆಗೆ ಉದ್ಭವವಾಗಿರುವ ಹೊಸ ಸಮಸ್ಯೆಗಳ ಕುರಿತು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಕೂಡ ಮಾಹಿತಿ ನೀಡಲಿದ್ದಾರೆ. ದೇಶದಲ್ಲಿ ಕೊರೋನಾ ಪ್ರಕರಣಗಳು ಮತ್ತೊಮ್ಮೆ ಹೆಚ್ಚಾಗುತ್ತಿರುವ ಸಂದರ್ಭದಲ್ಲಿ ಈ ಸಭೆ ನಡೆಯುತ್ತಿದೆ. ಕೇಂದ್ರ ಆರೋಗ್ಯ ಸಚಿವಾಲಯ ಶನಿವಾರ ಬಿಡುಗಡೆ ಮಾಡಿದ ಅಂಕಿಅAಶಗಳ ಪ್ರಕಾರ, ಕಳೆದ ೨೪ ಗಂಟೆಯಲ್ಲಿ ದೇಶದಲ್ಲಿ ೨,೫೨೭ ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಇದರೊಂದಿಗೆ ಭಾರತದಲ್ಲಿ ಒಟ್ಟು ಸಾಂಕ್ರಾಮಿಕ ಪ್ರಕರಣಗಳ ಸಂಖ್ಯೆ ೪,೩೦,೫೪,೯೫೨ ಕ್ಕೆ ಏರಿದೆ.

Translate »