ರಾಜ್ಯದಲ್ಲಿ ಕೊರೊನಾ ಹೆಚ್ಚಳ: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ
News

ರಾಜ್ಯದಲ್ಲಿ ಕೊರೊನಾ ಹೆಚ್ಚಳ: ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ

June 11, 2022

ಬೆಂಗಳೂರು, ಜೂ.10- ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶುಕ್ರವಾರ ಹೊಸ ಮಾರ್ಗಸೂಚಿ ಹೊರಡಿಸಿ, ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದೆ.

ರಾಜ್ಯದಲ್ಲಿ ಕಳೆದ 10 ದಿನಗಳಿಂದ ದೈನಂದಿನ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ನಿಧಾನಗತಿಯಲ್ಲಿ ಏರಿಕೆಯಾಗಿರುವು ದನ್ನು ಪರಿಗಣಿಸಿ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸುವುದು ಅಗತ್ಯವಾ ಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಹೊಸ ಮಾರ್ಗಸೂಚಿ:ಸಾರ್ವಜನಿಕ ಪ್ರದೇಶ ಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿ ಸಲಾಗಿದೆ. ಶಾಪಿಂಗ್ ಮಾಲ್‍ಗಳು, ರೆಸ್ಟೋ ರೆಂಟ್‍ಗಳು, ಪಬ್‍ಗಳು, ಕೆಫೆಟೀರಿಯಾ, ಹೊಟೇಲ್ ಗಳು, ಶೈಕ್ಷಣಿಕ ಸಂಸ್ಥೆಗಳು, ಹಾಸ್ಟೆಲ್‍ಗಳು, ಕಛೇರಿಗಳು, ಕಾರ್ಖಾನೆ ಇತ್ಯಾದಿ ಪ್ರದೇಶ ಗಳಲ್ಲಿ ಸಿಬ್ಬಂದಿಗಳು ಮಾಸ್ಕ್ ಕಡ್ಡಾಯ. ಸ್ವಂತ ವಾಹನಗಳು ಹಾಗೂ ಸಾರ್ವಜನಿಕ ಸಾರಿಗೆ ವಾಹನಗಳಲ್ಲಿ (ಬಸ್ ಹಾಗೂ ರೈಲು) ಪ್ರಯಾಣಿಸುವ ಸಂದರ್ಭದಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯ. IಐI & SಂಖI ಲಕ್ಷಣಗಳನ್ನು ಹೊಂದಿದ ವರು, ಹೈರಿಸ್ ಗುಂಪಿನವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿ ರುವವರನ್ನು ಆದ್ಯತೆಯ ಮೇಲೆ ಪರೀಕ್ಷೆಗೆ ಒಳಪಡು ವುದು ಹಾಗೂ ಫಲಿತಾಂಶ ಲಭ್ಯವಾಗುವವರೆಗೂ ಮನೆಯಲ್ಲಿಯೇ ಪ್ರತ್ಯೇಕವಾಗಿ ರುವುದು. ಎಲ್ಲರೂ ಕೋವಿಡ್ 19 ಲಸಿಕೆಯನ್ನು ಪಡೆಯುವುದು.

Translate »