ಬೆಂಗಳೂರು: ಕೋವಿಡ್-19 ವೈರಸ್ ನಿಯಂತ್ರಿಸುವ ಉದ್ದೇಶದಿಂದ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಗೊಳಪಡುವ ವಿಶ್ವವಿದ್ಯಾಲಯಗಳ ವಸತಿ ನಿಲಯಗಳಿಗೆ ಸೋಮವಾರ ದಿಂದ ಮಾಸಾಂತ್ಯದವರೆಗೆ ರಜೆ ಘೋಷಿಸಲಾಗಿದೆ.
ಹೀಗಾಗಿ ಭಾನುವಾರ ಸಂಜೆಯೊಳಗಾಗಿ ವಸತಿ ನಿಲಯ ಗಳನ್ನು ತೊರೆಯಬೇಕು. ಮತ್ತೆ ಏಪ್ರಿಲ್ 1 ರಿಂದ ವಸತಿ ನಿಲಯಕ್ಕೆ ವಾಪಸ್ ಅಗುವಾಗ ತಮಗೆ ಕೋವಿಡ್ -19 ಸೋಂಕು ವ್ಯಾಪಿಸಿಲ್ಲ ಎಂಬ ಪ್ರಮಾಣಪತ್ರ ಸಲ್ಲಿಸುವುದು ಕಡ್ಡಾಯ ವಾಗಿದೆ ಎಂದು ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ವೈರಸ್ ನಿಯಂತ್ರಿಸುವ ದೃಷ್ಟಿಯಿಂದ ಶನಿವಾರದಿಂದ ಜಾರಿಗೆ ಬರುವಂತೆ ಉನ್ನತ ಶಿಕ್ಷಣ ಇಲಾಖೆಯ ವ್ಯಾಪ್ತಿಗೊಳಪಟ್ಟ ವಿಶ್ವವಿದ್ಯಾಲಯ ಮತ್ತು ಈ ವ್ಯಾಪ್ತಿಗೆ ಒಳಪಟ್ಟ ಕಾಲೇಜುಗಳ ವಿದ್ಯಾರ್ಥಿಗಳಿಗೆ 15 ದಿನಗಳ ಕಾಲ ರಜೆ ಘೋಷಿಸಲಾಗಿದೆ. ಜತೆಗೆ ವಿಶ್ವವಿದ್ಯಾಲಯದ ಎಲ್ಲಾ ಸ್ನಾತಕೋತ್ತರ ವಿಭಾಗಗಳು ಹಾಗೂ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸೋಮವಾರದಿಂದ ಮಾಸಾಂತ್ಯದ ವರೆಗೆ ರಜೆ ಘೋಷಿಸಲಾಗಿದೆ. ಜತೆಗೆ ಸೋಮವಾರದಿಂದಲೇ ವಸತಿ ನಿಲಯಗಳನ್ನು ಮುಚ್ಚಲು ಆದೇಶಿಸಲಾಗಿದ್ದು, ಭಾನು ವಾರ ಸಂಜೆ ವೇಳೆಗೆ ಎಲ್ಲರೂ ವಸತಿ ನಿಲಯಗಳನ್ನು ತೆರವು ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ.
ಸೋಮವಾರದಿಂದ ಯಾವ ವಿದ್ಯಾರ್ಥಿಗಳು ವಸತಿ ನಿಲಯ ಗಳಲ್ಲಿ ವಾಸಮಾಡತಕ್ಕದ್ದಲ್ಲ. ಈ ಅವಧಿಯಲ್ಲಿ ಊಟೋ ಪಚಾರ ವ್ಯವಸ್ಥೆಯನ್ನು ಸಹ ನಿರ್ಬಂಧಿಸಲಾಗಿದೆ. ರಜಾ ಅವಧಿ ಮುಗಿದ ನಂತರ ಹಾಸ್ಟೆಲ್ ವಿದ್ಯಾರ್ಥಿಗಳು ಕೋವಿಡ್-19 (ಕೊರೊನಾ ವೈರಸ್) ಸೋಂಕು ಇರದ ಬಗ್ಗೆ ವೈದ್ಯಕೀಯ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಹೇಳಿದೆ.
ರಜಾ ಅವಧಿ ಮುಗಿದ ನಂತರ ಎಲ್ಲಾ ವಿದ್ಯಾರ್ಥಿಗಳಿಗೆ ವಿಶ್ವ ವಿದ್ಯಾಲಯದಿಂದಲೂ ವೈದ್ಯಕೀಯ ತಪಾಸಣೆ ನಡೆಸಲಾಗು ವುದು. ಬೆಂಗಳೂರು ವಿಶ್ವವಿದ್ಯಾಲಯದ ಎಲ್ಲಾ ವಿಭಾಗಗಳಲ್ಲಿ, ಕಚೆÉೀರಿಗಳಲ್ಲಿ ಬೋಧಕ/ಬೋಧಕೇತರ ಸಿಬ್ಬಂದಿ ಎಂದಿನಂತೆ ಕೆಲಸ ಕಾರ್ಯ ನಿರ್ವಹಿಸುತ್ತಾರೆ ಎಂದು ವಿಶ್ವವಿದ್ಯಾಲಯದ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.