ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಚಿತ್ರ ನಿರ್ಮಾಪಕ ಮುನಿರತ್ನಗೆ ಕೊರೊನಾ ದೃಢ
ಮೈಸೂರು

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ಚಿತ್ರ ನಿರ್ಮಾಪಕ ಮುನಿರತ್ನಗೆ ಕೊರೊನಾ ದೃಢ

August 31, 2020

ತಮ್ಮ ಟ್ವಿಟರ್‍ನಲ್ಲಿ ಮಾಹಿತಿ ಹಂಚಿಕೊಂಡ ನಾಯಕರು
ಮೈಸೂರು, ಆ.30(ಪಿಎಂ)- ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಹಾಗೂ ಬೆಂಗಳೂರು ರಾಜರಾಜೇಶ್ವರಿ ವಿಧಾನ ಸಭಾ ಕ್ಷೇತ್ರದ ಅನರ್ಹ ಶಾಸಕ ಮುನಿರತ್ನ ಅವರಿಗೂ ಕೊರೊನಾ ದೃಢಪಟ್ಟಿದೆ.

ಈ ಸಂಬಂಧ ಇಬ್ಬರು ನಾಯಕರೂ ತಮ್ಮ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿ ದ್ದಾರೆ. `ನಾನು ಕೋವಿಡ್-19′ ಪರೀಕ್ಷೆಗೆ ಒಳ ಗಾಗಿದ್ದೆ. ವರದಿಯು ಪಾಸಿಟಿವ್ ಎಂದು ಬಂದಿದೆ. ನಿಮ್ಮ ಆಶೀರ್ವಾದಗಳೊಂದಿಗೆ ಶೀಘ್ರದಲ್ಲೇ ಗುಣಮುಖನಾಗುವ ವಿಶ್ವಾಸ ಹೊಂದಿದ್ದೇನೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಜಾಗರೂಕರಾಗಿರಿ’ ಎಂದು ನಳಿನ್‍ಕುಮಾರ್ ಕಟೀಲ್ ಮನವಿ ಮಾಡಿದ್ದಾರೆ.

ಅಂತೆಯೇ ಅನರ್ಹ ಶಾಸಕ ಮುನಿರತ್ನ ಅವರೂ ಟ್ವಿಟ್ ಮಾಡಿದ್ದಾರೆ. `ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ನನ್ನ ಎಲ್ಲಾ ಮತದಾರ ದೇವರುಗಳಿಗೆ ವಂದನೆಗಳು. 57 ವರ್ಷ ವಯಸ್ಸಿನವನಾದ ನಾನು ಇಂದು ಕೋವಿಡ್ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದೆ. ಕ್ಷೇಮವಾಗಿ ಬಂದರೆ ನಿಮ್ಮ ಸೇವೆ. ಇಲ್ಲದಿದ್ದರೆ ಕ್ಷಮಿಸಿಬಿಡಿ’ ಎಂದು ಬೇಸರ ವ್ಯಕ್ತಪಡಿಸಿದ್ದು, ಇದು ಹಲವು ರೀತಿಯ ಚರ್ಚೆಗೆ ಗ್ರಾಸವಾಗಿದೆ.

Translate »