ಶ್ರೀರಾಮುಲುಗೆ ಕೊರೊನಾ ಪಾಸಿಟಿವ್
ಮೈಸೂರು

ಶ್ರೀರಾಮುಲುಗೆ ಕೊರೊನಾ ಪಾಸಿಟಿವ್

August 10, 2020

ಬೆಂಗಳೂರು, ಆ.9- ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇಂದು ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿಸಿದಾಗ ಕೊರೊನಾ ಪಾಸಿಟಿವ್ ಬಂದಿದೆ ಎಂದು ಶ್ರೀರಾಮುಲು ಅವರೇ ಸರಣಿ ಟ್ವೀಟ್ ಮಾಡಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ ಎಂದರು. ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗ ವಂತನಲ್ಲಿ ಪ್ರಾರ್ಥಿಸುತ್ತೇನೆ. ಇತ್ತೀಚೆಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದು ಟ್ವೀಟಿಸಿದ್ದಾರೆ. ಶ್ರೀರಾಮುಲು ಅವರು ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯ ಕೋವಿಡ್ ವಾರ್ಡ್‍ನಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Translate »