ನವದೆಹಲಿ, ಜು.2- ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ದಾಖಲೆಯ 19,148 ಮಂದಿಯಲ್ಲಿ ವೈರಸ್ ಪತ್ತೆಯಾಗಿದೆ. ಇದ ರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,04,641ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಗುರುವಾರ ಮಾಹಿತಿ ನೀಡಿದೆ. ಇನ್ನು ಒಂದೇ ದಿನ 434 ಮಂದಿ ಬಲಿ ಯಾಗಿದ್ದು, ಸಾವಿನ ಸಂಖ್ಯೆ ಕೂಡ 17834ಕ್ಕೆ ಏರಿಕೆ ಯಾಗಿದೆ. ಈ ನಡುವೆ 6,04,641 ಸೋಂಕಿತರ ಪೈಕಿ 3,59,860 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇನ್ನೂ ದೇಶದಲ್ಲಿ 2,26,947 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. ಮಹಾ ರಾಷ್ಟ್ರದಲ್ಲಿ ಒಂದೇ ದಿನ ದಾಖಲೆಯ 5537 ಹೊಸ ಕೊರೊನಾ ಪ್ರಕರಣಗಳು ದೃಢವಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,80,298ಕ್ಕೆ ಏರಿಕೆ ಯಾಗಿದೆ. ತಮಿಳುನಾಡು ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 94,049, ದೆಹಲಿ ಯಲ್ಲಿ 89,802ಕ್ಕೆ ತಲುಪಿದೆ.
