ವರ್ಷಾರಂಭಕ್ಕೆ ಲಸಿಕೆ
ಮೈಸೂರು

ವರ್ಷಾರಂಭಕ್ಕೆ ಲಸಿಕೆ

October 28, 2020

ಬೆಂಗಳೂರು,ಅ.27(ಕೆಎಂಶಿ)- ಕೊರೊನಾ ಮಹಾಮಾರಿಗೆ ಹೊಸ ವರ್ಷದ ಆರಂಭ ದಲ್ಲೇ ಕೋವಿಡ್ ಲಸಿಕೆ ದೊರೆಯಲಿದೆ. ರಾಜ್ಯದ ಎಲ್ಲರಿಗೂ ಲಸಿಕೆ ನೀಡಲಾಗುವುದು. ಉಚಿತವಾಗಿ ನೀಡುವ ಬಗ್ಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಆಸ್ಟ್ರಾಜನಿಕಾ ಸಂಸ್ಥೆಯ ಪ್ರತಿನಿಧಿಗಳೊಂ ದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಪುಣೆಯ ಸೇರಂ ಸಂಸ್ಥೆ ಜೊತೆ ಆಸ್ಟ್ರಾಜನಿಕಾ ಸಂಸ್ಥೆಯು ಒಡಂಬಡಿಕೆ ಮಾಡಿಕೊಂಡು ಲಸಿಕೆಯ ಪ್ರಾಯೋಗಿಕ ಪರೀಕ್ಷೆ ನಡೆಸುತ್ತಿದೆ ಎಂದರು.

ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಕ್ಸ್‍ಫರ್ಡ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಪ್ರಯೋಗ ಮಾಡಲಾಗುತ್ತಿದೆ. ಮೈಸೂರಿನ ಜೆಎಸ್‍ಎಸ್ ಸಂಸ್ಥೆ ಜೊತೆಗೂ ಒಪ್ಪಂದವಾಗಿದೆ. 56 ದಿನ ಗಳ ಹಿಂದಷ್ಟೇ ಒಂದನೇ ಹಂತದ ಪ್ರಯೋಗ ವನ್ನು ಯಶಸ್ವಿಯಾಗಿ ಮಾಡಲಾಗಿದೆ. ಇನ್ನು 3ನೇ ಹಾಗೂ ಕೊನೆಯ ಹಂತದಲ್ಲಿ ದೇಶದ 1,600 ಜನರ ಮೇಲೆ ಲಸಿಕೆ ಪ್ರಯೋಗ ಮಾಡಲಾಗುತ್ತದೆ.
ಇನ್ನಷ್ಟು ಹೆಚ್ಚು ಜನರನ್ನು ಲಸಿಕೆ ಪ್ರಯೋಗಕ್ಕೆ ಒಳಪಡಿಸಬೇಕು ಎಂದು ಸಂಸ್ಥೆಗೆ ಕೋರಲಾಗಿದೆ. ಜೊತೆಗೆ ರಾಜ್ಯದಲ್ಲಿ ಲಸಿಕೆ ವಿತರಣೆ ಸಿದ್ಧತೆ ಕುರಿತು ಚರ್ಚಿಸಲಾಯಿತು ಎಂದರು. ಪ್ರಥಮ ಹಂತದಲ್ಲಿ ಕೊರೊನಾ ವಾರಿಯರ್ಸ್, ವಿವಿಧ ರೋಗಗಳಿಂದ ಬಳಲು ತ್ತಿರುವವರು, ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಮೊದಲ ಆದ್ಯತೆ ಕಲ್ಪಿಸಲಾಗು ವುದು. ರಾಜ್ಯಕ್ಕೆ ಅಗತ್ಯ ಇರುವಷ್ಟು ಲಸಿಕೆ ಯನ್ನು ಪೂರೈಸುವುದಾಗಿ ಸಂಸ್ಥೆ ತಿಳಿ ಸಿದೆ. ಲಸಿಕೆಯ ದರ ನಿಗದಿಯಾಗಿಲ್ಲ. ಲಸಿಕೆಯನ್ನು ಉಚಿತವಾಗಿ ನೀಡುವ ಸಂಬಂಧ ಕೇಂದ್ರದೊಂದಿಗೆ ಚರ್ಚಿಸಿ, ತೀರ್ಮಾನ ಕೈಗೊಳ್ಳಲಾಗುವುದು.

100 ಕೋಟಿ ಜನರಿಗೆ ಲಸಿಕೆ ನೀಡುವ ಸಾಮಥ್ರ್ಯವಿದೆ ಎಂದು ಸಂಸ್ಥೆಯವರು ತಿಳಿಸಿ ದ್ದಾರೆ ಎಂದು ಸಚಿವರು ವಿವರಿಸಿದರು. ಕೇಂದ್ರ ಆರೋಗ್ಯ ಸಚಿವಾಲಯದ ಸಹ ಯೋಗದೊಂದಿಗೆ ಆರೋಗ್ಯ ತಜ್ಞರು, ತಾಂತ್ರಿಕ ಪರಿಣತರು, ಪೂರೈಕೆದಾರರನ್ನು ಒಳಗೊಂಡಂತೆ ತಾಂತ್ರಿಕ ಸಮಿತಿ ರಚಿಸಿದ್ದು, ಲಸಿಕೆಯ ಪೂರೈಕೆ, ಸಂಗ್ರಹಣೆ, ವಿತರಣೆ ಕುರಿತು ಸಮಿತಿ ಸಲಹೆ ನೀಡಲಿದೆ. ಮೊದಲ ಹಂತದಲ್ಲಿ ರಾಜ್ಯದ ಎಲ್ಲಾ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲು ಸಿದ್ಧತೆ ನಡೆಸಲಾಗುತ್ತಿದ್ದು, ಮುಂದಿನ ಹಂತದಲ್ಲಿ ವಯೋವೃದ್ಧರು, ಇತರೆ ಅಸ್ವಸ್ಥತೆಗಳನ್ನು ಹೊಂದಿರುವವರಿಗೆ, ಗರ್ಭಿಣಿ ಮತ್ತು ಬಾಣಂತಿ ಮಹಿಳೆಯರಿಗೆ ಲಸಿಕೆ ನೀಡಲಾಗುತ್ತದೆ. ಮುಂದುವರೆದು ಲಸಿಕೆಯ ದರದ ಬಗ್ಗೆ ಈಗ ಚರ್ಚೆಯಾಗುತ್ತಿದೆ. ನಮ್ಮ ಸರ್ಕಾರ ಕೋವಿಡ್ ಪರೀಕ್ಷೆ, ಚಿಕಿತ್ಸೆ ಮೊದಲಾದ ವೆಚ್ಚಗಳನ್ನು ಭರಿಸಿದೆ. ಅದೇ ರೀತಿ ರಾಜ್ಯದ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವ ಸಂಬಂಧ ವಿಚಾರ ಮಾಡಲಾಗುವುದು ಎಂದು ತಿಳಿಸಿದರು.

ಒಂದನೇ ಹಂತದ ಪ್ರಯೋಗದಲ್ಲಿ ಲಸಿಕೆ ನೀಡಿದಾಗ 28 ದಿನಗಳಲ್ಲಿ ಆಂಟಿಬಾಡಿ ಉತ್ಪಾದನೆ ಆಗಿದೆ. 1ನೇ ಹಂತದಲ್ಲಿ ಕೊರೊನಾ ಸೋಂಕು ಇಲ್ಲದ ವ್ಯಕ್ತಿಗಳಿಗೆ ಲಸಿಕೆ ನೀಡಲಾಗಿದೆ. 2, 3 ನೇ ಹಂತಗಳಲ್ಲಿ ಕೊರೊನಾ ಸೋಂಕು ಬಂದಿರುವವ ರಿಗೂ ಲಸಿಕೆ ನೀಡಲಾಗುತ್ತದೆ. ಪ್ರಯೋಗ ಯಶಸ್ವಿಯಾಗಿ ಕೇಂದ್ರ ಸರ್ಕಾರ ಅನುಮತಿ ನೀಡಿದ ನಂತರ ಕೇಂದ್ರದೊಂದಿಗೆ ಮಾತುಕತೆ ನಡೆಸಿ, ರಾಜ್ಯದಲ್ಲಿ ಲಸಿಕೆ ವಿತರಿಸಲಾಗುವುದು ಎಂದು ತಿಳಿಸಿದರು. ನಾನು ಆರೋಗ್ಯ ಖಾತೆ ವಹಿಸಿಕೊಂಡ ಬಳಿಕ ಕಳೆದ ಹತ್ತು ದಿನಗಳಿಂದ ಈಚೆಗೆ ಕೊರೊನಾ ಸೋಂಕು ಮತ್ತು ಕೋವಿಡ್ ಸಾವಿನ ಪ್ರಮಾಣದಲ್ಲಿ ಗಣನೀಯ ಇಳಿಕೆ ಉಂಟಾಗಿದೆ. ಇದಕ್ಕೆ ಕೆಲವರು ಸಂಶಯದಿಂದಲೂ ನೋಡು ತ್ತಿದ್ದಾರೆ. ಯಾವುದೇ ಅಂಕಿ- ಸಂಖ್ಯೆಯನ್ನು ನಾವು ವ್ಯತ್ಯಾಸ ಮಾಡುವ ಕೆಲಸ ಮಾಡಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯೇ ಕರ್ನಾಟಕ ಸರ್ಕಾರ ಅತ್ಯಂತ ಪಾರ ದರ್ಶಕವಾಗಿ ನಡೆದುಕೊಂಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದೆ ಎಂದರು.

ಸಾವು, ಸೋಂಕು ಮತ್ತು ಗುಣಮುಖರಾದವರ ಅಂಕಿ-ಅಂಶಗಳನ್ನು ಅತ್ಯಂತ ಪಾರದರ್ಶಕವಾಗಿ ನೀಡುತ್ತಿದ್ದೇವೆ. ಇಳಿಮುಖವಾಗಲು ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಯೊಬ್ಬ ಕೊರೊನಾ ಯೋಧರ ಪ್ರಯತ್ನ ಕಾರಣವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಆಸ್ಟ್ರಾಜನಿಕಾ ವ್ಯವಸ್ಥಾಪಕ ನಿರ್ದೇಶಕ ಗಗನ್ ದೀಪ್ ಸಿಂಗ್, ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಡಾ.ಸುದರ್ಶನ್ ಸಭೆಯಲ್ಲಿದ್ದರು. ಲಸಿಕೆ ಇನ್ನೂ ಪ್ರಯೋಗದ ಹಂತದಲ್ಲಿದೆ. ಆದ್ದರಿಂದ ಲಸಿಕೆಯ ದರದ ಬಗ್ಗೆ ಚರ್ಚಿಸಿಲ್ಲ. ಲಾಭಕ್ಕಾಗಿ ಲಸಿಕೆ ಮಾಡುತ್ತಿಲ್ಲ ಎಂದು ಆಸ್ಟ್ರಾಜನಿಕಾ ಕಂಪನಿಯವರು ಹೇಳಿದ್ದಾರೆ. ಕೋವಿಡ್ ಅಂಕಿ-ಅಂಶದಲ್ಲಿ ಯಾವುದೇ ತಪ್ಪು ಮಾಹಿತಿ ನೀಡಿಲ್ಲ. ವಿಶ್ವ ಆರೋಗ್ಯ ಸಂಸ್ಥೆಯವರು ಕೂಡ ನಮ್ಮ ಸರ್ಕಾರ ನೀಡುವ ಮಾಹಿತಿ ಪಾರದರ್ಶಕತೆಯಿಂದ ಕೂಡಿದೆ ಎಂದು ಶ್ಲಾಘಿಸಿದೆ ಎಂದರು

ವಾರಾಂತ್ಯದೊಳಗೆ ಆರೋಗ್ಯ ಇಲಾಖೆ ಕಾರ್ಯಕರ್ತರ ಬಗ್ಗೆ ಮಾಹಿತಿ ನೀಡಿ
ಬೆಂಗಳೂರು, ಅ.27-ಇಡೀ ಪ್ರಪಂಚ ವನ್ನೇ ತತ್ತರಿಸುವಂತೆ ಮಾಡಿರುವ ಕೊರೊನಾಗೆ ಲಸಿಕೆ ತಯಾರಿಸುವು ದನ್ನು ಎಲ್ಲರೂ ಎದುರು ನೋಡುತ್ತಿದ್ದಾರೆ. ಇದೇ ವೇಳೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಎಲ್ಲಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಆರೋಗ್ಯ ಕಾರ್ಯಕರ್ತರ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದೆ. ಖಾಸಗಿ ಮತ್ತು ಸರ್ಕಾರಿ ಖಾಸಗಿ ಆಸ್ಪತ್ರೆಗಳಲ್ಲಿ ಮುಂಚೂಣಿಯಲ್ಲಿರುವ ಆರೋಗ್ಯ ಕಾರ್ಯಕರ್ತರ ಬಗ್ಗೆ ಮಾಹಿತಿ ಕೇಳಿದೆ. ರಾಜ್ಯಕ್ಕೆ ಕಳೆದ ವಾರವೇ ಸುತ್ತೋಲೆ ದೊರ ಕಿದ್ದು, ಎಲ್ಲಾ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳಿಗೆ ರವಾನಿಸಲಾಗಿದೆ. ಡಿ ಗ್ರೂಪ್ ಸಿಬ್ಬಂದಿಯಿಂದ ಹಿಡಿದು ಟಾಪ್ ವೈದ್ಯರವರೆಗೂ ಕೊರೊನಾ ವಿರುದ್ಧ ಹೋರಾಡುತ್ತಿರುವ ಆರೋಗ್ಯ ಕಾರ್ಯಕರ್ತರ ಬಗ್ಗೆ ಮಾಹಿತಿ ನೀಡುವಂತೆ ಸೂಚಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

Translate »