ಅಂಬೇಡ್ಕರ್ ಭವನದಲ್ಲಿ ವಿಶೇಷ ನಿಗಾ ಘಟಕ ಸ್ಥಾಪನೆ

ಚಾಮರಾಜನಗರ, ಮಾ.15(ಎಸ್‍ಎಸ್)- ಕೊರೊನಾ ವೈರಸ್ ಜಿಲ್ಲೆಗೆ ಕಾಲಿಡದಂತೆ ತಡೆಯಲು ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಎಲ್ಲಾ ರೀತಿಯ ಮುಂಜಾ ಗ್ರತಾ ಕ್ರಮಗಳನ್ನು ಕೈಗೊಂಡಿದ್ದು, ನಗರದ ಅಂಬೇಡ್ಕರ್ ಭವನದಲ್ಲಿ ವಿಶೇಷ ನಿಗಾ ಘಟಕ ಸ್ಥಾಪಿಸಲಾಗಿದೆ.

ಕೊರೊನಾ ವೈರಸ್ ಪೀಡಿತರಿಗಾಗಿ ಜಿಲ್ಲಾಡಳಿತ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ 20 ಹಾಸಿಗೆಯುಳ್ಳ ವಿಶೇಷ ನಿಗಾ ಘಟಕ ಸ್ಥಾಪಿಸಿದೆ. ಅಲ್ಲದೇ, ಜಿಲ್ಲಾಸ್ಪತ್ರೆ ಮತ್ತು ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಜಿಲ್ಲೆಯ ಪ್ರಮುಖ ಖಾಸಗಿ ಆಸ್ಪತ್ರೆ ಗಳಲ್ಲೂ ಸಹ ಪ್ರತ್ಯೇಕ ಕೊಠಡಿ ಕಾಯ್ದಿರಿಸಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾ ಧಿಕಾರಿ ಡಾ.ಎಂ.ಸಿ.ರವಿ `ಮೈಸೂರು ಮಿತ್ರ’ನಿಗೆ ತಿಳಿಸಿದರು.

ಕೊರೊನಾ ವೈರಸ್ ಪೀಡಿತರ ಮೇಲೆ ವಿಶೇಷ ಗಮನ ಹರಿಸುವ ಸಲುವಾಗಿ ಹಾಗೂ ಚಿಕಿತ್ಸೆ ನೀಡಲು ಅನುಕೂಲ ವಾಗಲಿ ಎಂಬ ಉದ್ದೇಶದಿಂದ ವಿಶೇಷ ನಿಗಾ ಘಟಕ ಹಾಗೂ ಪ್ರತ್ಯೇಕ ಕೊಠಡಿಗಳನ್ನು ಕಾಯ್ದಿರಿಸಲಾಗಿದೆ ಎಂದರು.

ಜಿಲ್ಲೆಗೆ ವಿದೇಶದಿಂದ ಬರುವವರ ಬಗ್ಗೆ ಹಾಗೂ ಈಗಾಗಲೇ ಕೊರೊನಾ ವೈರಸ್ ಪೀಡಿತ ಪ್ರದೇಶದಿಂದ ಬರುವವರ ಬಗ್ಗೆ ತೀವ್ರ ನಿಗಾ ವಹಿಸಲು ಕ್ರಮ ಕೈಗೊಳ್ಳಲಾಗಿದೆ. ಕೊರೊನಾ ವೈರಸ್ ಜಿಲ್ಲೆಗೆ ಕಾಲಿಡ ದಂತೆ ಎಲ್ಲಾ ರೀತಿಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಜಿಲ್ಲೆಯ ಗಡಿ ಭಾಗದಲ್ಲಿ ಜಿಲ್ಲೆಗೆ ಪ್ರವೇಶಿಸುವವರನ್ನು ತಪಾಸಣೆ ನಡೆಸಲಾಗುತ್ತಿದೆ ಎಂದರು.

ಕೊರೊನಾ ವೈರಸ್ ಬಗ್ಗೆ ನಾಗರಿಕರು ಎಚ್ಚರಿಕೆಯಿಂದ ಇರಲು ಅನುಸರಿಸಬೇಕಾದ ಕ್ರಮಗಳ ಬಗ್ಗೆ ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ಭಿತ್ತಿಪತ್ರಗಳನ್ನು ಬ್ಯಾನರ್‍ಗಳನ್ನು ಹಾಕಲಾಗಿದೆ. ಸಹಾಯವಾಣಿಯನ್ನು ಸಹ ಆರಂಭಿಸಲಾಗಿದೆ ಎಂದರು.