ಕೊರೊನಾ ಭೀತಿ; ಮಾಸ್ಕ್ ಧರಿಸಿ ದ್ವಿತೀಯ ಪಿಯು ಪರೀಕ್ಷೆ ಬರೆಯಲು ಅವಕಾಶ
ಮೈಸೂರು

ಕೊರೊನಾ ಭೀತಿ; ಮಾಸ್ಕ್ ಧರಿಸಿ ದ್ವಿತೀಯ ಪಿಯು ಪರೀಕ್ಷೆ ಬರೆಯಲು ಅವಕಾಶ

March 4, 2020

ಬೆಂಗಳೂರು, ಮಾ.3- ದ್ವಿತೀಯ ಪಿಯು ಪಬ್ಲಿಕ್ ಪರೀಕ್ಷೆ ಬುಧವಾರ ಆರಂಭವಾಗಲಿದೆ. ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರ ಗಳಿಗೆ `ಮಾಸ್ಕ್’ಗಳನ್ನು ಧರಿಸಿ ಬರಬಹುದಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದ್ದಾರೆ.

ಜ್ವರ, ಕೆಮ್ಮು, ಶೀತ, ನೆಗಡಿ ಮೊದ ಲಾದ ರೋಗ ಲಕ್ಷಣಗಳಿರುವ ವಿದ್ಯಾರ್ಥಿ ಗಳು ಮುನ್ನೆಚ್ಚರಿಕೆ ಕ್ರಮವಾಗಿ ಮಾಸ್ಕ್ ಧರಿಸಿ ಪರೀಕ್ಷಾ ಕೇಂದ್ರಗಳಿಗೆ ಹಾಜರಾಗ ಬಹುದು. ಇದರಿಂದ ಬೇರೆ ವಿದ್ಯಾರ್ಥಿ ಗಳಿಗೆ ಸೋಂಕು ಹರಡುವುದನ್ನು ತಡೆಯಲು ಸಾಧ್ಯ ಎಂದರು.

ಈ ಬಾರಿ ರಾಜ್ಯಾದ್ಯಂತ ಒಟ್ಟು 6.80 ಲಕ್ಷ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ. ಪ್ರತಿ ಪರೀಕ್ಷಾ ಕೊಠಡಿಯಲ್ಲಿ ಕನಿಷ್ಠ 20 ರಿಂದ 25 ವಿದ್ಯಾರ್ಥಿಗಳಿಗೆ ಸ್ಥಳಾವಕಾಶ ಮಾಡಿಕೊಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಸರಕಾರದ ವತಿಯಿಂದಲೇ ಎಲ್ಲಾ ಪರೀಕ್ಷಾರ್ಥಿಗಳಿಗೂ ಮಾಸ್ಕ್‍ಗಳನ್ನು ವಿತರಿ ಸಲು ಚಿಂತನೆ ನಡೆಸಲಾಗಿದೆ ಎಂದರು.

Translate »