ದೀಪಾವಳಿ ವೇಳೆಗೆ ಕೊರೊನಾ ನಿಯಂತ್ರಣ
ಮೈಸೂರು

ದೀಪಾವಳಿ ವೇಳೆಗೆ ಕೊರೊನಾ ನಿಯಂತ್ರಣ

August 31, 2020

ಬೆಂಗಳೂರು,ಆ.30-ದೀಪಾವಳಿ ಹಬ್ಬದ ವೇಳೆಗೆ ದೇಶದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬರುವ ವಿಶ್ವಾಸ ಹೊಂದಿ ದ್ದೇವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಹರ್ಷವರ್ಧನ್ ತಿಳಿಸಿದ್ದಾರೆ. ಅನಂತಕುಮಾರ್ ಪ್ರತಿಷ್ಠಾನ ನಗರ ದಲ್ಲಿ ಆಯೋಜಿಸಿದ್ದ ದೇಶ ಮೊದಲು ವೆಬಿನಾರ್ ಸಂವಾದ ಉದ್ಘಾಟಿಸಿ ಮಾತನಾಡಿದ ಅವರು, ದೇಶ ಕೋವಿಡ್ ಸೋಂಕನ್ನು ಅತ್ಯಂತ ವ್ಯವಸ್ಥಿತವಾಗಿ ನಿಭಾಯಿಸುತ್ತಾ ಬಂದಿದೆ. ಸೋಂಕು ದೇಶಕ್ಕೆ ಕಾಲಿ ಡುವ ಮುನ್ನವೇ ಪ್ರಧಾನಿ ಮೋದಿ ಅವರು ಸೂಕ್ತ ನಿಯಂತ್ರಣ ಕ್ರಮಗಳನ್ನು ಕೈಗೊಂಡಿದ್ದರು. ಫೆಬ್ರವರಿ ಮೊದಲ ವಾರದಲ್ಲಿ ಕೇವಲ ಪುಣೆಯಲ್ಲಿ 1 ಪ್ರಯೋ ಗಾಲಯ ಇದ್ದದ್ದು ಇಂದು 1582ಕ್ಕೆ ಹೆಚ್ಚಾಗಿದೆ. 1000ಕ್ಕೂ ಹೆಚ್ಚು ಸರಕಾರಿ ಪ್ರಯೋಗಾಲಯಗಳನ್ನು ಸ್ಥಾಪಿ ಸಿದ್ದು, ಇದೀಗ ಪ್ರತಿದಿನ ದೇಶದಲ್ಲಿ 10 ಲಕ್ಷಕ್ಕೂ ಹೆಚ್ಚು ಪರೀಕ್ಷೆಗಳನ್ನು ನಡೆಸಲಾಗುತ್ತಿದೆ ಎಂದರು.

Translate »