ಮೈಸೂರಲ್ಲಿ ವೈದ್ಯಕೀಯ ಸಿಬ್ಬಂದಿ, ಪೊಲೀಸರಿಗೆ ಬೆಂಬಿಡದೆ ಕಾಡುತ್ತಿರುವ ಕೊರೊನಾ ಸೋಂಕು
ಮೈಸೂರು

ಮೈಸೂರಲ್ಲಿ ವೈದ್ಯಕೀಯ ಸಿಬ್ಬಂದಿ, ಪೊಲೀಸರಿಗೆ ಬೆಂಬಿಡದೆ ಕಾಡುತ್ತಿರುವ ಕೊರೊನಾ ಸೋಂಕು

January 23, 2022

ಮೈಸೂರು, ಜ.22(ಎಂಕೆ)- ಮೈಸೂರಿನಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗಿದ್ದು, ಲಸಿಕೆ ಪಡೆದಿರುವ ಫ್ರಂಟ್ ಲೈನ್ ವಾರಿಯರ್ಸ್‍ಗಳಾದ ವೈದ್ಯಕೀಯ ಸಿಬ್ಬಂದಿ ಹಾಗೂ ಪೊಲೀಸರನ್ನು ಬೆಂಬಿಡದೆ ಕಾಡುತ್ತಿದೆ.

ಕೊರೊನಾ 2ನೇ ಅಲೆಯಂತೆಯೇ 3ನೇ ಅಲೆಯಲ್ಲೂ ಕೊರೊನಾ ವಾರಿ ಯರ್ಸ್‍ಗಳಾದ ಪೊಲೀಸರಿಗೆ ಹಾಗೂ ವೈದ್ಯರಿಗೆ ಕೊರೊನಾ ಸೋಂಕು ಕಾಡು ತ್ತಿದ್ದು, ಮೈಸೂರು ಜಿಲ್ಲೆಯಲ್ಲಿ 117 ಹಾಗೂ ನಗರದಲ್ಲಿ 290 ಸೇರಿ ಒಟ್ಟು 407 ಮಂದಿ ಪೊಲೀಸ್ ಅಧಿಕಾರಿ ಸಿಬ್ಬಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಹಾಗೆಯೇ ಜಿಲ್ಲಾ ಆರೋಗ್ಯ ಇಲಾಖೆಯಡಿ ವಿವಿಧ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ 55 ಹಾಗೂ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 28 ಮಂದಿ ಸೇರಿ 83 ವೈದ್ಯಕೀಯ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ತಗುಲಿದೆ.

ಹೋಂ ಐಸೋಲೇಷನ್: ಸೋಂಕಿತರಾಗಿರುವ ಎಲ್ಲಾ ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಗೂ ವೈದ್ಯಕೀಯ ಸಿಬ್ಬಂದಿ ಕೊರೊನಾ ಚಿಕಿತ್ಸೆ ಗಾಗಿ ಆಸ್ಪತ್ರೆಗೆ ದಾಖಲಾಗದೆ ಹೋಂ ಐಸೋಲೇಷನ್‍ನಲ್ಲಿಯೇ ಇದ್ದು, ಗುಣಮುಖರಾಗಿದ್ದಾರೆ. ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿ ದ್ದರೂ ಸೋಂಕಿನ ತೀವ್ರತೆ ಕಡಿಮೆ ಇರುವುದರಿಂದಾಗಿ ಬೇಗ ಗುಣಮುಖರಾಗುತ್ತಿದ್ದಾರೆ. ಕೊರೊನಾ 3ನೇ ಅಲೆ ಆರಂಭವಾ ದಾಗಿನಿಂದ ಇಲ್ಲಿಯವರೆಗೆ ಯಾವುದೇ ಸಾವು ಸಂಭವಿಸಿಲ್ಲ.

ಪ್ರತ್ಯೇಕ ಐಸೋಲೇಷನ್ ವಾರ್ಡ್: ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಕೊರೊನಾ ಸೋಂಕಿತ ಪಿಜಿ, ನರ್ಸಿಂಗ್ ವಿದ್ಯಾರ್ಥಿಗಳನ್ನು ಹಾಸ್ಟೆಲ್‍ನಿಂದ ಕರೆತಂದು ಪ್ರತ್ಯೇಕ ಐಸೋಲೇಷನ್ ವಾರ್ಡ್‍ನಲ್ಲಿ ಇರಿಸಲಾಗಿದೆ. ಹಾಸ್ಟೆಲ್ ಗಳಲ್ಲಿ ಸೋಂಕು ಹರಡದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ನಿರ್ದೇಶಕ ಡಾ.ದಿನೇಶ್ ‘ಮೈಸೂರು ಮಿತ್ರ’ನಿಗೆ ಮಾಹಿತಿ ನೀಡಿದರು. ಕೊರೊನಾ 3ನೇ ಅಲೆಯಲ್ಲಿ ಪಿಜಿ, ನರ್ಸಿಂಗ್ ವಿದ್ಯಾರ್ಥಿಗಳು ಹಾಗೂ ವೈದ್ಯರು ಸೇರಿ ಇಲ್ಲಿಯವರೆಗೆ 85 ಮಂದಿಗೆ ಸೋಂಕು ತಗುಲಿದ್ದು, ಹಲವರು ಗುಣಮುಖರಾಗಿ ಕರ್ತವ್ಯಕ್ಕೆ ವಾಪಸ್ ಆಗಿದ್ದಾರೆ. ಸದ್ಯಕ್ಕೆ 28 ಮಂದಿ ಮಾತ್ರ ಐಸೋ ಲೇಷನ್‍ನಲ್ಲಿದ್ದಾರೆ. 7-10 ದಿನಗಳ ನಂತರವೂ ಕೊರೊನಾ ಸೋಂಕಿನ ಲಕ್ಷಣಗಳಿದ್ದವರಿಗೆ ಇನ್ನಷ್ಟು ದಿನಗಳು ಪ್ರತ್ಯೇಕವಾಗಿ ಇರುವಂತೆ ಸೂಚಿಸಲಾಗಿದೆ ಎಂದು ತಿಳಿಸಿದರು.

42 ಮಂದಿ ಗುಣಮುಖ: ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆಯ ಭದ್ರತೆ ನಿಯೋಜನೆಗೊಂಡಿದ್ದ ಕೆಎಸ್‍ಆರ್‍ಪಿ 5ನೇ ಬೇಟಾಲಿ ಯನ್‍ನ 200 ಮಂದಿ ಸಿಬ್ಬಂದಿ ಪೈಕಿ ಕೊರೊನಾ ಸೋಂಕಿಗೆ ಒಳಗಾಗಿದ್ದ 42 ಮಂದಿಯೂ ಸಂಪೂರ್ಣ ಗುಣವಾಗಿ ಗುಣಮುಖ ರಾಗಿದ್ದು, ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ ಎಂದು ಕೆಎಸ್‍ಆರ್‍ಪಿ 5ನೇ ಬೆಟಾಲಿಯನ್ ಕಮಾಂಡೆಂಟ್ ಜನಾರ್ಧನ್ ತಿಳಿಸಿದರು.

Translate »