ಕಾನೂನು ಸೇವೆಗಳ ಪ್ರಾಧಿಕಾರದಿಂದ ಕೊರೊನಾ ವೈರಸ್ ಜಾಗೃತಿ
ಮೈಸೂರು

ಕಾನೂನು ಸೇವೆಗಳ ಪ್ರಾಧಿಕಾರದಿಂದ ಕೊರೊನಾ ವೈರಸ್ ಜಾಗೃತಿ

April 5, 2020

ಮೈಸೂರು, ಏ.4 (ಆರ್‍ಕೆ)-ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಿಂದ ಮೈಸೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕೊರೊನಾ ವೈರಸ್ ಸೋಂಕು ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಅಭಿಯಾನ ನಡೆಯುತ್ತಿದೆ.

ಮಾರ್ಚ್ 31ರಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಎಸ್.ಕೆ. ಒಂಟಿಗೋಡಿ ಅವರು ಜಾಗೃತಿ ಅಭಿಯಾನಕ್ಕೆ ಹಸಿರು ನಿಶಾನೆ ತೋರಿಸಿದ್ದರು. ಕೋವಿಡ್-19 ಸೋಂಕು ಹರಡದಂತೆ ನಿಯಂತ್ರಿಸುವ ಬಗ್ಗೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಆಟೋರಿಕ್ಷಾದಲ್ಲಿ ಧ್ವನಿವರ್ಧಕದ ಮೂಲಕ ಅರಿವು ಮೂಡಿಸಲಾಗುತ್ತಿದೆ. ತಾಲೂಕು ಕಾನೂನು ಸೇವಾ ಸಮಿತಿಗಳ ಮೂಲಕ ಗ್ರಾಮಾಂತರ ಪ್ರದೇಶಗಳಲ್ಲಿ ಸ್ವಯಂ ಸೇವಕರು ಹಾಗೂ ಪ್ಯಾನಲ್ ವಕೀಲರು ಜಾಗೃತಿ ಅಭಿಯಾನದಲ್ಲಿ ಪಾಲ್ಗೊಳ್ಳುತ್ತಿದ್ದಾರೆ.

Translate »