ಕೊರೊನಾ: ಭಾರತದಲ್ಲಿ ಮತ್ತೆ 1463 ಹೊಸ ಪಾಸಿಟಿವ್ ಪ್ರಕರಣ
ಮೈಸೂರು

ಕೊರೊನಾ: ಭಾರತದಲ್ಲಿ ಮತ್ತೆ 1463 ಹೊಸ ಪಾಸಿಟಿವ್ ಪ್ರಕರಣ

April 28, 2020
  •   28,380ಕ್ಕೇರಿದ ಸೋಂಕಿತರ ಸಂಖ್ಯೆ
  • ಸೋಂಕಿತರ ಸಾವಿನ ಸಂಖ್ಯೆ 886

ನವದೆಹಲಿ,ಏ.27-ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಮತ್ತೆ 1463 ಹೊಸ ವೈರಸ್ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 28,380ಕ್ಕೇರಿದೆ. ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 1463 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ದೇಶದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 28,380ಕ್ಕೇರಿದೆ. ಈ ಪೈಕಿ 6362 ಮಂದಿ ಸೋಂಕಿತರು ಗುಣಮುಖರಾಗಿದ್ದು, 886 ಸೋಂಕಿತರು ಸಾವನ್ನಪ್ಪಿ ದ್ದಾರೆ. 21132 ಮಂದಿ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ 24 ಗಂಟೆಗಳ ಅವಧಿ ಯಲ್ಲಿ 381 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ ಎಂದು ಹೇಳಿದೆ.

ಇನ್ನು ರಾಜ್ಯಗಳ ಪಟ್ಟಿಯಲ್ಲಿ ಮಹಾರಾಷ್ಟ್ರ ಅಗ್ರ ಸ್ಥಾನದಲ್ಲಿ ಮುಂದುವರೆದಿದ್ದು, ಇಲ್ಲಿ ಈವರೆಗೂ ಸೋಂಕಿತರ ಸಂಖ್ಯೆ 8068ಕ್ಕೆ ಏರಿಕೆಯಾಗಿದೆ. ಅಂತೆಯೇ 342 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಈವರೆಗೂ 1076 ಮಂದಿ ಸೋಂಕಿತರು ಗುಣಮುಖ ರಾಗಿದ್ದಾರೆ. ಇನ್ನು ದೆಹಲಿಯಲ್ಲಿ ಸೋಂಕಿತರ ಸಂಖ್ಯೆ 2918ಕ್ಕೆ ಏರಿಕೆಯಾಗಿದ್ದು, 54 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 877 ಮಂದಿ ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಗುಜರಾತ್‍ನಲ್ಲಿ ಸೋಂಕಿತರ ಸಂಖ್ಯೆ 3301ಕ್ಕೆ ಏರಿಕೆಯಾಗಿದ್ದು, 151 ಮಂದಿ ಸಾವನ್ನಪ್ಪಿದ್ದಾರೆ. ಅಂತೆಯೇ 313 ಮಂದಿ ಗುಣಮುಖರಾಗಿದ್ದಾರೆ.

Translate »