12 ಮಂದಿಗೆ ಕೊರೊನಾ ವೈರಸ್ ಪತ್ತೆ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 711
ಮೈಸೂರು

12 ಮಂದಿಗೆ ಕೊರೊನಾ ವೈರಸ್ ಪತ್ತೆ: ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 711

May 8, 2020

ಬೆಂಗಳೂರು, ಮೇ 7-ರಾಜ್ಯದಲ್ಲಿ ಗುರುವಾರ ಒಟ್ಟು 18 ಮಂದಿಯಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 711ಕ್ಕೆ ಏರಿದೆ. ದಾವಣಗೆರೆಯಲ್ಲಿ 55 ವರ್ಷದ ಮಹಿಳೆ ಸಾವನ್ನಪ್ಪಿದ್ದು, ಮೃತರ ಸಂಖ್ಯೆ 30ಕ್ಕೇರಿದೆ. ದಾವಣಗೆರೆ, ಕಲಬುರಗಿ ಮತ್ತು ಬಾಗಲಕೋಟೆಯಲ್ಲಿ ತಲಾ 3, ಬೆಂಗಳೂರು, ಬೆಳಗಾವಿ ಮತ್ತು ಧಾರವಾಡದಲ್ಲಿ ತಲಾ 1 ಹಾಗೂ ಸಂಜೆ ವೇಳೆಗೆ ಮತ್ತೆ 6 ಪ್ರಕರಣ ಪತ್ತೆಯಾಗಿದ್ದು, 12 ಮಂದಿ ಗುಣ ಮುಖರಾಗಿ ವಿವಿಧ ಜಿಲ್ಲೆಗಳ ಕೋವಿಡ್ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, ಒಟ್ಟಾರೆ 366 ಮಂದಿ ಗುಣಮುಖರಾಗಿದ್ದು, 308 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Translate »