24 ಗಂಟೆಗಳಲ್ಲಿ ದೇಶಾದ್ಯಂತ 19,459 ಮಂದಿಗೆ ಕೊರೊನಾ ಸೋಂಕು
ಮೈಸೂರು

24 ಗಂಟೆಗಳಲ್ಲಿ ದೇಶಾದ್ಯಂತ 19,459 ಮಂದಿಗೆ ಕೊರೊನಾ ಸೋಂಕು

June 30, 2020

ನವದೆಹಲಿ: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ ದೇಶಾ ದ್ಯಂತ 19,459 ಸೋಂಕು ತಗುಲಿದೆ. ದೇಶದಲ್ಲಿ ಒಟ್ಟಾರೆ ಸೋಂಕಿ ತರ ಸಂಖ್ಯೆ 5,48,318ಕ್ಕೆ ಏರಿಕೆಯಾಗಿದ್ದು, ಈ ಪೈಕಿ 3,21,723 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ ಪ್ರಸ್ತುತ 2,10,120 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಇನ್ನು ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 380 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ದೇಶದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 16,475ಕ್ಕೆ ಏರಿಕೆಯಾಗಿದೆ. ದೆಹಲಿ ಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 83 ಸಾವಿರ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲಿ ದೆಹಲಿಯಲ್ಲಿ 2889 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ರಾಜಧಾನಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 83077ಕ್ಕೆ ಏರಿಕೆಯಾಗಿದೆ. ಇನ್ನು ಕೊರೊನಾ ಸೋಂಕಿತರ ಗರಿಷ್ಠ ಸಂಖ್ಯೆ ಪಟ್ಟಿಯಲ್ಲಿ ಅಗ್ರಸ್ಥಾನಿ ಯಾಗಿರುವ ಮಹಾರಾಷ್ಟ್ರದಲ್ಲಿ ಕಳೆದ 24 ಗಂಟೆಗಳಲ್ಲಿ 5493 ಹೊಸ ಸೋಂಕು ಪ್ರಕರಣಗಳು ದಾಖಲಾಗಿದ್ದು, ಆ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 1,64,626ಕ್ಕೆ ಏರಿಕೆಯಾಗಿದೆ. ಅಂತೆಯೇ ನಿನ್ನೆ ಒಂದೇ ದಿನ ಮಹಾರಾಷ್ಟ್ರದಲ್ಲಿ 156 ಸೋಂಕಿತರು ಸಾವನ್ನಪ್ಪಿದ್ದು, ಆ ಮೂಲಕ ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್‍ಗೆ ಬಲಿಯಾದವರ ಸಂಖ್ಯೆ 7,429ಕ್ಕೆ ಏರಿಕೆಯಾಗಿದೆ.

Translate »