ನಾಳೆಯಿಂದ ಟ್ರಾಮಾ ಕೇರ್ ಸೆಂಟರ್‍ನಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ
ಮೈಸೂರು

ನಾಳೆಯಿಂದ ಟ್ರಾಮಾ ಕೇರ್ ಸೆಂಟರ್‍ನಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ

April 20, 2021

ಮೈಸೂರು,ಏ.19(ಆರ್‍ಕೆ)- ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಹೆಚ್ಚು ತ್ತಿರುವುದರಿಂದ ಏಪ್ರಿಲ್ 21ರಿಂದ ಮೈಸೂರಿನ ಕೆಆರ್‍ಎಸ್ ರಸ್ತೆಯ ಪಿಕೆ ಟಿಬಿ ಆಸ್ಪತ್ರೆ ಆವರಣದಲ್ಲಿ ರುವ ಟ್ರಾಮಾ ಕೇರ್ ಸೆಂಟರ್‍ನಲ್ಲಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

ಸೋಂಕಿತರಿಗೆ ಚಿಕಿತ್ಸೆ ನೀಡಲು ಹಾಸಿಗೆ ಕೊರತೆ ಉಂಟಾಗದಂತೆ ಮುಂಜಾಗ್ರತೆ ಯಾಗಿ ಪ್ರಸ್ತುತ ಕೊರೊನಾ ಲಸಿಕೆ ನೀಡು ತ್ತಿರುವ ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಅಧೀನ ದಲ್ಲಿರುವ ಕೇರ್ ಸೆಂಟರ್ ಹೊಸ ಟ್ರಾಮಾ ಕಟ್ಟಡವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಬಳಸಿಕೊಳ್ಳಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಕಟ್ಟಡದಲ್ಲಿ ವಾರ್ಡ್‍ಗಳು, ಐಸಿಯು ವ್ಯವಸ್ಥೆಗೆ ಹಾಸಿಗೆ, ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಿ ವೈದ್ಯರು, ನರ್ಸ್ ಗಳು, ಸಿಬ್ಬಂದಿ, ಆಕ್ಸಿಜನ್ ಸರಬರಾಜು ಸೇರಿದಂತೆ ಸೋಂಕಿತರ ಚಿಕಿತ್ಸೆಗೆ ಸರ್ವ ರೀತಿಯಲ್ಲಿ ತಯಾರಿ ಮಾಡಲಾಗಿದೆ. ಪ್ರಸ್ತುತ ನಡೆಯುತ್ತಿರುವ ಕೋವಿಡ್ ಲಸಿಕೆ ಪ್ರಕ್ರಿಯೆ ಯನ್ನು ಎದುರುಗಡೆ ಬೃಂದಾವನ ಬಡಾವಣೆ ಯಲ್ಲಿರುವ ಜಿಲ್ಲಾ ಸರ್ಕಾರಿ ಆಯುರ್ವೇದ ಪಂಚಕರ್ಮ ಹೈಟೆಕ್ ಆಸ್ಪತ್ರೆಗೆ ಸ್ಥಳಾಂತರಿಸ ಲಾಗಿದೆ ಎಂದಿರುವ ಜಿಲ್ಲಾಧಿಕಾರಿಗಳು, ಸಾರ್ವಜನಿಕರು ಆತಂಕಗೊಳ್ಳದೇ ಈ ಸೌಲಭ್ಯ ಗಳನ್ನು ಬಳಸಿಕೊಳ್ಳಬೇಕೆಂದು ತಿಳಿಸಿದ್ದಾರೆ.

ದಿನದಿಂದ ದಿನಕ್ಕೆ ಕೊರೊನಾ ಪಾಸಿ ಟಿವ್ ಪ್ರಕರಣಗಳು ವ್ಯಾಪಕವಾಗಿ ಹರಡು ತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಆರೋಗ್ಯಾಧಿಕಾರಿಗಳು, ಮೈಸೂರು ಮಹಾ ನಗರ ಪಾಲಿಕೆ ಸಮನ್ವಯತೆ ಸಾಧಿಸಿ ಸೋಂಕು ಹರಡದಂತೆ ತಡೆಯಲು ಅಗತ್ಯ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳ ಲಾಗಿದ್ದು, ಸಾರ್ವಜನಿಕರು ಸಹಕರಿಸು ವಂತೆಯೂ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ.

Translate »