ದೇಶವ್ಯಾಪಿ ಬಂದ್: ವಿವಿಧ ಸಂಘಟನೆಗಳ ಬೆಂಬಲ
ಚಾಮರಾಜನಗರ

ದೇಶವ್ಯಾಪಿ ಬಂದ್: ವಿವಿಧ ಸಂಘಟನೆಗಳ ಬೆಂಬಲ

January 8, 2019

ಚಾಮರಾಜನಗರ: ಕಾರ್ಮಿಕ ಸಂಘಟನೆಗಳ ಬಂದ್ ಕರೆ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಜ.8 ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಆದೇಶ ಹೊರಡಿಸಿದ್ದಾರೆ.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕ ಸಂಘಟನೆಗಳು ಜ.8, 9ರಂದು ದೇಶವ್ಯಾಪಿ ಬಂದ್‍ಗೆ ಕರೆ ನೀಡಿದ್ದು, ಮುನ್ನೆಚ್ಚರಿಕಾ ದೃಷ್ಟಿಯಿಂದ ಜಿಲ್ಲೆಯಲ್ಲಿ ಎಲ್ಲಾ ಶಾಲಾ-ಕಾಲೇಜುಗಳಿಗೆ ಜ.8 ರಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ರಜೆ ಘೋಷಿಸಿದ್ದಾರೆ. ದೇಶವ್ಯಾಪಿ ಬಂದ್ ಹಿನ್ನೆಲೆ ಜಿಲ್ಲೆಯಲ್ಲೂ ಸಹ ಕಾರ್ಮಿಕ ಸಂಘ ಟನೆಗಳು ಬಂದ್ಗೆ ಕರೆ ನೀಡಿದ್ದು, ಸಾರಿಗೆ ನೌಕರರು ಬೆಂಬಲ ಸೂಚಿಸಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಬಸ್ ಸಂಚಾರ ಅನುಮಾನ ಎನ್ನಲಾಗಿದೆ. ಅಂದು ಪರಿಸ್ಥಿತಿ ನೋಡಿಕೊಂಡು ಬಸ್ ಸಂಚರಿಸುವ ಬಗ್ಗೆ ತೀರ್ಮಾನಿಸ ಲಾಗುವುದು ಎಂದು ಸಾರಿಗೆ ನಿಗಮದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Translate »