ಕೋವಿಡ್-19: ಪರಿಸ್ಥಿತಿ ಕುರಿತಂತೆ ಸೋನಿಯಾ, ಸಿಂಗ್ ಮತ್ತಿತರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಮೈಸೂರು

ಕೋವಿಡ್-19: ಪರಿಸ್ಥಿತಿ ಕುರಿತಂತೆ ಸೋನಿಯಾ, ಸಿಂಗ್ ಮತ್ತಿತರೊಂದಿಗೆ ಪ್ರಧಾನಿ ಮೋದಿ ಮಾತುಕತೆ

April 6, 2020

ನವದೆಹಲಿ,ಏ.5-ಕೊರೊನಾ ವೈರಸ್ ಸಾಂಕ್ರಾಮಿಕ ರೋಗದಿಂದ ದೇಶದಲ್ಲಿ ಎದುರಾಗಿರುವ ಪರಿಸ್ಥಿತಿ ಕುರಿತಂತೆ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಮನ್‍ಮೋಹನ್ ಸಿಂಗ್ ಸೇರಿದಂತೆ ಹಲವು ರಾಜ ಕೀಯ ಮುಖಂಡರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಇಂದು ಮಾತುಕತೆ ನಡೆಸಿ ದ್ದಾರೆ. ಮುಲಾಯಂ ಸಿಂಗ್ ಯಾದವ್, ಅಖಿಲೇಶ್ ಯಾದವ್, ಮಮತಾ ಬ್ಯಾನರ್ಜಿ, ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಮತ್ತಿತರರೊಂದಿಗೂ ಪ್ರಧಾನಿ ಮಾತುಕತೆ ನಡೆಸಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. ಮಾರಕ ಸಾಂಕ್ರಾಮಿಕ ರೋಗದ ವಿಚಾರವಾಗಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರೊಂದಿಗೂ ಮೋದಿ ಚರ್ಚಿಸಿದ್ದಾರೆ. ಬುಧವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಲೋಕಸಭೆ ಹಾಗೂ ರಾಜ್ಯಸಭೆಯ ವಿವಿಧ ಪಕ್ಷಗಳ ನಾಯಕರೊಂದಿಗೆ ಪ್ರಧಾನಿ ಸಂವಾದ ನಡೆಸಲಿದ್ದಾರೆ.

 

 

Translate »