ಕೋವಿಡ್ ಸುರಕ್ಷತಾ ಕ್ರಮವಾಗಿ ಮದುವೆಗಳಲ್ಲಿ ಮಾರ್ಷಲ್ ನೇಮಕ
ಮೈಸೂರು

ಕೋವಿಡ್ ಸುರಕ್ಷತಾ ಕ್ರಮವಾಗಿ ಮದುವೆಗಳಲ್ಲಿ ಮಾರ್ಷಲ್ ನೇಮಕ

February 23, 2021

ಬೆಂಗಳೂರು, ಫೆ.22 (ಕೆಎಂಶಿ)-ಮದುವೆ ಸಮಾರಂಭಗಳಲ್ಲಿ ಕೋವಿಡ್ ಸುರಕ್ಷತಾ ಕ್ರಮ ಪಾಲಿಸಲು ಮಾರ್ಷಲ್ ನಿಯೋ ಜಿಸಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ತಿಳಿಸಿದರು.

ಎಲ್ಲ ಜಿಲ್ಲೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದುವೆ ಸಮಾ ರಂಭಗಳಲ್ಲಿ ಅಂತರ ಕಾಯ್ದುಕೊಳ್ಳುತ್ತಿಲ್ಲ. ನಾನೇ ಸಮಾರಂಭಕ್ಕೆ ಹೋದರೆ ಮಾಸ್ಕ್ ತೆಗೆಯಿರಿ ಎಂದು ಹೇಳುತ್ತಾರೆ. ಹೀಗಾಗಿ ಮದುವೆ ಸಮಾರಂಭಗಳಲ್ಲಿ ಒಬ್ಬ ಮಾಷರ್Àಲ್ ನೇಮಿಸಲು ತೀರ್ಮಾನ ಕೈಗೊಳ್ಳಲಾಗಿದೆ. 500ಕ್ಕಿಂತ ಹೆಚ್ಚು ಜನರಿರಬಾರದು, ಎಲ್ಲರೂ ಮಾಸ್ಕ್ ಧರಿಸುವ ನಿಯಮವನ್ನು ಪಾಲಿ ಸಲು ಈ ಕ್ರಮ ವಹಿಸಲಾಗುವುದು. ಆಹಾರ ಪೂರೈಕೆ ಮಾಡುವವರಿಗೂ ಪರೀಕ್ಷೆ ಮಾಡಿಸಲು ಸೂಚಿಸಲಾಗಿದೆ ಎಂದರು.

ಕೋವಿಡ್ ಮಾರ್ಗಸೂಚಿಗೆ ವಿರುದ್ಧ ವಾಗಿ ಸಭೆ, ಸಮಾರಂಭ, ಹೋರಾಟ ನಡೆ ಯುತ್ತಿದೆ. ಇದನ್ನು ಪಾಲಿಸದೇ ಕೋವಿಡ್ ಸೋಂಕು ಹೆಚ್ಚಾದರೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ. ಮಹಾರಾಷ್ಟ್ರದ ಕೆಲ ಜಿಲ್ಲೆಗಳಲ್ಲಿ ಲಾಕ್‍ಡೌನ್ ಆಗಿದ್ದು, ಆ ಪರಿಸ್ಥಿತಿ ರಾಜ್ಯಕ್ಕೆ ಬರಬೇಕೆ ಎಂದು ಆಲೋಚಿಸ ಬೇಕು ಎಂದು ಕಿವಿ ಮಾತು ಹೇಳಿದರು.

ಸರ್ಕಾರಿ ಇಲಾಖೆ ಗಳಲ್ಲಿ 2,90,000 ಮಂದಿ ಇದ್ದು, ಆರೋಗ್ಯ ಇಲಾಖೆಯ 4,24, 573 ಮಂದಿಗೆ ಮೊದಲ ಕೋವಿಡ್ ಡೋಸ್ ನೀಡಲಾಗಿದೆ. 1,20, 176 ಮುಂಚೂಣಿ ಸಿಬ್ಬಂದಿಗೆ ಲಸಿಕೆ ನೀಡ ಲಾಗಿದೆ. ಆರೋಗ್ಯ ಕ್ಷೇತ್ರದಲ್ಲಿ ಕೆಲಸ ಮಾಡು ವವರು ಎರಡು ಬಾರಿ ನೋಂದಣಿ ಮಾಡಿಸಿಕೊಂಡಿದ್ದು, ಅದನ್ನು ತೆಗೆದು ಹಾಕಲಾಗುತ್ತಿದೆ. ಇದರಿಂದಾಗಿ ನಾವು ಮುಟ್ಟಿದ ಗುರಿ ಇನ್ನೂ ಹೆಚ್ಚಾಗಲಿದೆ. ಆರೋಗ್ಯ ಸಿಬ್ಬಂದಿ ಮತ್ತು ಮುಂಚೂಣಿ ಸಿಬ್ಬಂದಿಯಲ್ಲಿ ಶೇ.80ರಿಂದ ಶೇ.90 ಮಂದಿಗೆ ಫೆ.28ರೊಳಗೆ ಲಸಿಕೆ ನೀಡ ಬೇಕು ಎಂದು ಸೂಚಿಸಲಾಗಿದೆ. ಮುಂಚೂಣಿ ಸಿಬ್ಬಂದಿಗೆ ಫೆ.22, 23, 24 ಲಸಿಕೆ ಅಭಿ ಯಾನ ಮಾಡಲಾಗುತ್ತಿದೆ. ಎಲ್ಲ ಅಧಿಕಾರಿ ಗಳಿಗೆ ಲಸಿಕೆ ಪಡೆಯಲು ತಾಕೀತು ಮಾಡಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಲಸಿಕೆ ಅಭಿಯಾನ ಕುರಿತು ಮಾಹಿತಿ ಪಡೆಯುತ್ತಿದ್ದು, ವಾರದೊಳಗೆ ಈ ಕುರಿತು ಎಲ್ಲ ಅಧಿಕಾರಿಗಳೊಂದಿಗೆ ವೀಡಿಯೋ ಸಂವಾದ ನಡೆಸಲಿದ್ದಾರೆ. ಆರೋಗ್ಯ ಸಿಬ್ಬಂದಿಯ ಲಸಿಕೆ ಅಭಿಯಾನದಲ್ಲಿ ಬೆಂಗ ಳೂರು ಹಿಂದುಳಿದಿದೆ. ಬಾಗಲಕೋಟೆ, ದಾವಣಗೆರೆ, ಬೆಂಗಳೂರು ನಗರ, ಧಾರ ವಾಡ ಜಿಲ್ಲೆಗಳು ಶೇ.50ಕ್ಕಿಂತ ಕಡಿಮೆ ಇದೆ. ಚಿಕ್ಕಬಳ್ಳಾಪುರ (79%), ತುಮಕೂರು (78%), ಉತ್ತರ ಕನ್ನಡ (73%), ಗದಗ (71%), ಚಿಕ್ಕಮಗಳೂರು (70%), ಚಾಮರಾಜ ನಗರ (70%) ಜಿಲ್ಲೆಗಳಲ್ಲಿ ಶೇ.70ಕ್ಕಿಂತ ಹೆಚ್ಚು ಸಾಧನೆಯಾಗಿದೆ. ಮುಂಚೂಣಿ ಸಿಬ್ಬಂದಿಗೆ ಲಸಿಕೆ ನೀಡುವಲ್ಲಿ ಗದಗ (84%) ತುಮಕೂರು (71%) ಮುಂದಿದೆ. ಬಾಗಲಕೋಟೆ (23%), ಬೆಂಗಳೂರು ನಗರ (26%), ಚಾಮರಾಜನಗರ (27%) ಹಿಂದುಳಿದಿದ್ದು, 80% ಗುರಿ ಸಾಧಿಸಬೇಕು ಎಂದು ಸೂಚಿಸಲಾಗಿದೆ ಎಂದರು.

 

 

Translate »