ಏ.26ರಂದು ಎನ್‍ಆರ್ ಕ್ಷೇತ್ರದಲ್ಲಿ ಕೋವಿಡ್ ಕೇರ್ ಕೇಂದ್ರ ಆರಂಭ
ಮೈಸೂರು

ಏ.26ರಂದು ಎನ್‍ಆರ್ ಕ್ಷೇತ್ರದಲ್ಲಿ ಕೋವಿಡ್ ಕೇರ್ ಕೇಂದ್ರ ಆರಂಭ

April 24, 2021

ಶಾಂತಿನಗರದ ಬೀಡಿ ಕಾರ್ಮಿಕ ಆಸ್ಪತ್ರೆಯಲ್ಲಿ ವ್ಯವಸ್ಥೆ
ಶಾಸಕ ತನ್ವೀರ್ ಸೇಠ್, ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಪರಿಶೀಲನೆ
ಕೋವಿಡ್ ವ್ಯಾಕ್ಸಿನ್ ತೆಗೆದುಕೊಂಡರೆ ತೊಂದರೆಯಾಗುತ್ತದೆ ಎಂದು ಜನರಲ್ಲಿ ತಪ್ಪು ಕಲ್ಪನೆ ಇದೆ. ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ಜನ ಲಸಿಕೆ ಪಡೆದಿದ್ದು, ಅವರಿಗೆ ಯಾವ ಸಮಸ್ಯೆಯೂ ಆಗಿಲ್ಲ. ಕೋವಿಡ್ ಸೋಂಕಿನಿಂದ ಮುಕ್ತವಾಗಲು ಈ ಲಸಿಕೆ ಸಹಕಾರಿಯಾಗಲಿದೆ. ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಲಸಿಕೆ ಕೊರತೆಯಾದಾಗ ಪರದಾಡುವ ಬದಲು ಸರ್ಕಾರ ಉಚಿತವಾಗಿ ನೀಡುತ್ತಿರುವುದನ್ನು ಸದುಪಯೋಗಪಡಿಸಿಕೊಳ್ಳಬೇಕು. ರಂಜಾನ್ ಮಾಸದಲ್ಲಿ ಜನರಿಗೆ ತೊಂದರೆಯಾಗಬಾರದೆಂದು ಜಿಲ್ಲಾಡಳಿತ ನರಸಿಂಹರಾಜ ಕ್ಷೇತ್ರದಲ್ಲಿ ಲಸಿಕೆ ನೀಡುವ ಸಮಯವನ್ನು ವಿಸ್ತರಿಸಿದೆ. ನಾನೂ ಲಸಿಕೆ ಪಡೆದಿದ್ದೇನೆ. 45 ವರ್ಷಕ್ಕಿಂತ ಮೇಲ್ಪಟ್ಟವರು ಕೂಡಲೇ ನಿರ್ಭೀತಿಯಿಂದ ಲಸಿಕೆ ಪಡೆಯಿರಿ. -ಶಾಸಕ ತನ್ವೀರ್ ಸೇಠ್

ಮೈಸೂರು, ಏ.23(ಎಸ್‍ಬಿಡಿ)- ಮೈಸೂರಿನ ಶಾಂತಿನಗರದ ಬೀಡಿ ಕಾರ್ಮಿಕರ ಆಸ್ಪತ್ರೆ ಏ.26ರಿಂದ `ಕೋವಿಡ್ ಕೇರ್ ಕೇಂದ್ರ’ವಾಗಿಯೂ ಕಾರ್ಯನಿರ್ವಹಿಸಲಿದೆ.

ಕೋವಿಡ್ ನಿರ್ವಹಣೆ ನಿಟ್ಟಿನಲ್ಲಿ ನರಸಿಂಹರಾಜ(ಎನ್‍ಆರ್) ವಿಧಾನಸಭಾ ಕ್ಷೇತ್ರದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿ ಸುವ ಅಗತ್ಯತೆಯನ್ನು ಜಿಲ್ಲಾಡಳಿತದ ಗಮನಕ್ಕೆ ತಂದಿದ್ದ ಶಾಸಕ ತನ್ವೀರ್ ಸೇಠ್, ಇತ್ತೀಚೆಗೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವ ದಲ್ಲಿ ನಡೆದ ಸಭೆಯಲ್ಲೂ ಪ್ರಸ್ತಾಪಿಸಿ, ಕೇಂದ್ರವನ್ನು ಶೀಘ್ರ ಆರಂಭಿಸುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಇಂದು ಶಾಸಕ ತನ್ವೀರ್ ಸೇಠ್ ಹಾಗೂ ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಅಧಿಕಾರಿಗಳೊಂದಿಗೆ ಬೀಡಿ ಕಾರ್ಮಿಕರ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ, ಅಲ್ಲಿ 200 ಹಾಸಿಗೆ ಸಾಮಥ್ರ್ಯದ ಕೋವಿಡ್ ಕೇರ್ ಕೇಂದ್ರ ಆರಂಭಿಸುವುದಾಗಿ ಸ್ಪಷ್ಟ ಪಡಿಸಿದರು. ಈ ವೇಳೆ ಶಾಸಕ ತನ್ವೀರ್ ಸೇಠ್ ಮಾತನಾಡಿ, ನರಸಿಂಹರಾಜ ಕ್ಷೇತ್ರದಲ್ಲಿ ಕೂಲಿಕಾರ್ಮಿಕರು, ಬಡವರು ಹೆಚ್ಚಿನ ಸಂಖ್ಯೆಯಲ್ಲಿದ್ದು, ಅವರೆಲ್ಲಾ ವಠಾರ ದಂತಹ ಸಣ್ಣ ಸ್ಥಳಗಳಲ್ಲಿ ವಾಸಿಸುತ್ತಿದ್ದಾರೆ. ಈ ಭಾಗದಲ್ಲಿ ಕೋವಿಡ್ ನಿಬಾಯಿಸುವ ನಿಟ್ಟಿನಲ್ಲಿ ಅಗತ್ಯ ವ್ಯವಸ್ಥೆಯಾಗಬೇಕು ಎಂಬುದು ನಮ್ಮ ನಿರಂತರ ಬೇಡಿಕೆಯಾ ಗಿತ್ತು. ಕಳೆದ ವರ್ಷ ನಗರ ಪಾಲಿಕೆ ಹಾಗೂ ಜಿಲ್ಲಾಡಳಿತದ ಸಹಕಾರದೊಂದಿಗೆ ಫಾರುಕಿಯಾ ಕಾಲೇಜಿನಲ್ಲಿ ಖಾಸಗಿ ಕೋವಿಡ್ ಕೇರ್ ಸೆಂಟರ್ ನಿರ್ವಹಣೆ ಮಾಡಲಾಗಿತ್ತು. ಆದರೆ ಈ ಬಾರಿ ತರ ಗತಿ ಹಾಗೂ ಪರೀಕ್ಷೆಗಳು ನಡೆಯುತ್ತಿ ರುವ ಕಾರಣ ಅಲ್ಲಿ ಮತ್ತೆ ಕೇಂದ್ರ ನಡೆಸು ವುದು ಕಷ್ಟ. ಹಾಗಾಗಿ ಬೀಡಿ ಕಾರ್ಮಿಕರ ಆಸ್ಪತ್ರೆಯಲ್ಲಿ ಮತ್ತೆ ಕೋವಿಡ್ ಕೇರ್ ಸೆಂಟರ್ ಆರಂಭಿಸುವಂತೆ 3 ತಿಂಗಳ ಹಿಂದೆಯೇ ಒತ್ತಾಯಿಸಿದ್ದೆ. ನಿನ್ನೆ ಆರೋಗ್ಯ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ನಮ್ಮ ಆಗ್ರಹವನ್ನು ಮನ್ನಿಸಿ, ಸೂಕ್ತ ಕ್ರಮಕ್ಕೆ ನಿರ್ದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ಪಾಲಿಕೆ ಆಯುಕ್ತರು ಹಾಗೂ ಅಧಿಕಾರಿಗಳು, ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಲಾಗಿದೆ ಎಂದು ತಿಳಿಸಿದರು.

ಸೋಮವಾರ ಆರಂಭ: ಕೋವಿಡ್ ಕೇರ್ ಯೂನಿಟ್ ಕಂ ಆಸ್ಪತ್ರೆ ಬರುವ ಸೋಮವಾರದಿಂದ ಕಾರ್ಯಾರಂಭ ವಾಗಲಿದೆ. ಅಗತ್ಯ ಮೂಲ ಸೌಕರ್ಯ ಗಳನ್ನು ನಗರ ಪಾಲಿಕೆ, ಮಾನವ ಸಂಪನ್ಮೂಲ ವನ್ನು ಜಿಲ್ಲಾಡಳಿತ ಹಾಗೂ ಔಷಧಿ ಇನ್ನಿತರ ವೈದ್ಯಕೀಯ ಸಹಕಾರವನ್ನು ಆರೋಗ್ಯ ಇಲಾಖೆ ನೀಡಲಿದೆ. 50 ಆಕ್ಸಿಜನ್ ಬೆಡ್ ಸೇರಿದಂತೆ ಒಟ್ಟು 200 ಹಾಸಿಗೆ ಸಾಮಥ್ರ್ಯದ ಕೇಂದ್ರದಲ್ಲಿ ಕೋವಿಡ್ ಪರೀಕ್ಷೆ ಹಾಗೂ ಲಸಿಕೆ ನೀಡುವಿಕೆಗೂ ವ್ಯವಸ್ಥೆಂ iÀiÁಗಲಿದೆ. ಈ ಮೂಲಕ ತುರ್ತು ಪರಿಸ್ಥಿತಿ ನಿಬಾಯಿಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳ ಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ಕ್ಷೇತ್ರಕ್ಕೊಂದು ಸೆಂಟರ್: ನಗರ ಪಾಲಿಕೆ ಆಯುಕ್ತೆ ಶಿಲ್ಪಾ ನಾಗ್ ಮಾತನಾಡಿ, ಮೈಸೂರಲ್ಲಿ ನಿತ್ಯ 800ರಷ್ಟು ಪಾಸಿಟಿವ್ ಪ್ರಕರಣ ವರದಿಯಾಗುತ್ತಿದ್ದು ಕಳೆದ ವರ್ಷಕ್ಕಿಂತ ಪರಿಸ್ಥಿತಿ ಗಂಭೀರವಾಗಿದೆ. ಸಮರ್ಥ ನಿರ್ವಹಣೆಗೆ ಜಿಲ್ಲಾಡಳಿತ ಅಗತ್ಯ ಕ್ರಮ ವಹಿಸುತ್ತಿದೆ. ಈ ನಿಟ್ಟಿನಲ್ಲಿ ಈ ಭಾಗದ ಶಾಸಕರು ಇನ್ನಿತರ ಜನಪ್ರತಿ ನಿಧಿಗಳು ಆಸಕ್ತಿ ವಹಿಸಿ, ಕೋವಿಡ್ ಕೇರ್ ಸೆಂಟರ್‍ಗೆ ಆಗ್ರಹಿಸಿದ್ದರು. ಆರೋಗ್ಯ ಸಿಬ್ಬಂದಿ ಕೊರತೆಯಿದ್ದರೂ ಹೊಂದಾಣಿಕೆ ಮಾಡಿಕೊಂಡು ಸೇವೆ ನೀಡಬೇಕಿದೆ. ಬೀಡಿ ಕಾರ್ಮಿಕರ ಆಸ್ಪತ್ರೆಯಲ್ಲಿ ಸೋಮ ವಾರದಿಂದ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುವುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ, ಆರೋಗ್ಯ ಇಲಾಖೆ ಅಧಿಕಾರಿಗಳು, ಅಬ್ದುಲ್ ಖಾದರ್ ಶಾಹಿದ್ ಸೇರಿದಂತೆ ಅನೇಕ ಸ್ಥಳೀಯ ಮುಖಂಡರು ಉಪಸ್ಥಿತರಿದ್ದರು.

Translate »