ಕೋವಿಡ್, ಡೆಂಗ್ಯೂ ಹೆಚ್ಚಳ ಮುನ್ನೆಚ್ಚರಿಕೆ ಕ್ರಮ ಪಾಲಿಸಿ
ಮೈಸೂರು

ಕೋವಿಡ್, ಡೆಂಗ್ಯೂ ಹೆಚ್ಚಳ ಮುನ್ನೆಚ್ಚರಿಕೆ ಕ್ರಮ ಪಾಲಿಸಿ

June 14, 2022

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ

ಹಿರಿಯ ನಾಗರಿಕರು ಬೂಸ್ಟರ್ ಡೋಸ್; ಮಕ್ಕಳು ಲಸಿಕೆ ಪಡೆಯುವುದು ಅವಶ್ಯ

ಬಿಎಂಸಿಐನಲ್ಲಿ ಸೀಕ್ವೆನ್ಸಿಂಗ್ ಲ್ಯಾಬ್ ಆರಂಭಕ್ಕೆ ಸೂಚನೆ

ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಇತರೆ ಕಾಯಿಲೆಗಳಿಂದ ಬಳಲುತ್ತಿರುವ

ಹಿರಿಯ ನಾಗರಿಕರು ಬೂಸ್ಟರ್ ಡೋಸ್ ಪಡೆದುಕೊಳ್ಳಬೇಕು. ಮಕ್ಕಳು ಕೂಡ ಲಸಿಕೆ ಹಾಕಿಸಿಕೊಳ್ಳಬೇಕು. ಜತೆಗೆ ಕೋವಿಡ್ ನಿಯಂ ತ್ರಣ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಿ, ಭೌತಿಕ ಅಂತರ ಕಾಯ್ದುಕೊಳ್ಳಬೇಕು. ಆ ಮೂಲಕ ಸೋಂಕು ನಿಯಂತ್ರಣದಲ್ಲಿಡಲು ಸಾಧ್ಯವಿದೆ. -ಡಾ.ಕೆ.ಸುಧಾಕರ್

ಬೆಂಗಳೂರು: ಕೋವಿಡ್ ಮತ್ತು ಡೆಂಗ್ಯೂ ಪ್ರಕರಣ ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಮುನ್ನೆಚ್ಚರಿಕಾ ಕ್ರಮ ಗಳನ್ನು ಕೈಗೊಳ್ಳಲಾಗಿದ್ದು, ಸಾರ್ವ ಜನಿಕರು ಆತಂಕಪಡುವ ಅಗತ್ಯ ವಿಲ್ಲ. ಆದರೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತಪ್ಪದೇ ಅನುಸರಿಸ ಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಕೋವಿಡ್ ಸೋಂಕು ಪ್ರಕರಣ ಹೆಚ್ಚಳದ ಹಿನ್ನೆಲೆ ಯಲ್ಲಿ ತಾಂತ್ರಿಕ ಸಲಹಾ ಸಮಿತಿ ಹಾಗೂ ಹಿರಿಯ ಅಧಿಕಾರಿಗಳ ಜತೆ ಸೋಮವಾರ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಿವೆ. ಆದರೆ ರೋಗದ ತೀವ್ರತೆ ಅಥವಾ ಸಾವಿನ ಪ್ರಮಾಣದಲ್ಲಿ ಏರಿಕೆ ಕಂಡು ಬಂದಿಲ್ಲ. ಪರಿಸ್ಥಿತಿಯನ್ನು ಗಂಭೀರವಾಗಿ ಅವಲೋಕಿಸಲಾಗುತ್ತಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಯಾರೂ
ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು. ಇಲಾಖೆಯು ಟೆಸ್ಟ್ಗಳ ಸಂಖ್ಯೆ ಯನ್ನು ಹೆಚ್ಚಿಸಿದೆ. ಇದು ಸಹ ಬೆಂಗಳೂರಿನಲ್ಲಿ ಪ್ರಕರಣಗಳ ಸಂಖ್ಯೆ ಹೆಚ್ಚಾ ಗಲು ಕಾರಣವಿರಬಹುದು. ಆದರೆ ರೋಗ ಲಕ್ಷಣ ಉಲ್ಬಣಗೊಂಡು ಆಸ್ಪತ್ರೆಗೆ ದಾಖಲು ಆಗುವ ಪ್ರಕರಣಗಳು ತೀರಾ ಕಡಿಮೆ. ಇದನ್ನು ೪ನೇ ಅಲೆ ಎಂದು ಹೇಳಲು ಆಗುವುದಿಲ್ಲ, ಸದ್ಯ ಅಲೆಗಳ ಪ್ರಶ್ನೆ ಉದ್ಭವಿ ಸಿಲ್ಲ ಎಂದರು. ರಾಜ್ಯದ ಇತರೆ
ಭಾಗಗಳಿಗೆ ಹೋಲಿಸಿದರೆ ಬೆಂಗಳೂರಿನಲ್ಲಿ ಮಾತ್ರ ಸೋಂಕಿನ ಪ್ರಮಾಣ ಹೆಚ್ಚಿದೆ. ಅದರ ಜತೆ ಡೆಂಗಿ ಪ್ರಕರಣಗಳ ಸಂಖ್ಯೆ ಕೂಡ ಉಲ್ಬಣ ಸಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳ ಪ್ರತ್ಯೇಕ ಸಭೆ ನಡೆಸಲಾಗುವುದು ಎಂದು ತಿಳಿಸಿದರು.

ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಜಿನೋಮಿಕ್ ಸಿಕ್ವೆನ್ಸಿಂಗ್ ಲ್ಯಾಬ್ ಆರಂಭಿಸಲು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಹೊಸ ರೂಪಾಂತರಿ ತಳಿಗಳ ಪತ್ತೆಗೆ ಲ್ಯಾಬ್‌ನಿಂದ ಸಹಾಯವಾಗುತ್ತದೆ. ಉಳಿದಂತೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಇಲಾಖೆ ತೆಗೆದುಕೊಂಡಿದೆ ಎಂದು ವಿವರಿಸಿದರು. ತಾಂತ್ರಿಕ ಸಲಹಾ ಸಮಿತಿ ಸಭೆ ನಂತರ ಇಲಾಖೆಯ ಪರಿಶೀಲನಾ ಸಭೆಯನ್ನೂ ನಡೆಸಲಾಗಿದೆ. ವಿಶೇಷವಾಗಿ ನಮ್ಮ ಕ್ಲಿನಿಕ್‌ಗಳ ಆರಂಭಕ್ಕೆ ಕಾಲಮಿತಿಯಲ್ಲಿ ತ್ವರಿತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಮಂಗಳವಾರ ತಾವು ಮೈಸೂರಿಗೆ ಭೇಟಿ ನೀಡುತ್ತಿರುವುದಾಗಿ ತಿಳಿಸಿದ ಸಚಿವರು, ಯೋಗಾ ದಿನದಂದು ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಸಿದ್ಧತಾ ಕ್ರಮಗಳ ಬಗ್ಗೆ ಉಸ್ತುವಾರಿ ಸಚಿವ ಸೋಮಶೇಖರ್ ಅವರ ಜತೆ ಪರಿಶೀಲನೆ ನಡೆಸುವುದಾಗಿಯೂ ಸಚಿವ ಸುಧಾಕರ್ ತಿಳಿಸಿದರು.

ಕೋವಿಡ್‌ನಿಂದ ಆಸ್ಪತ್ರೆ ಸೇರುವವರ ಸಂಖ್ಯೆ ಏರಿಕೆ

ನವದೆಹಲಿ: ಕೊರೊನಾ ವೈರಸ್ ಪ್ರಕರಣ ದಿನ ದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಭಾರತದಲ್ಲಿ ಇದೀಗ ಪ್ರತಿದಿನ ಸರಾಸರಿ ೮ ಸಾವಿರ ಕೋವಿಡ್ ಪ್ರಕರಣ ದಾಖಲಾಗುತ್ತಿದೆ. ಮುಂಬೈನಲ್ಲಿ ಕೋವಿಡ್‌ನಿಂದ
ಆಸ್ಪತ್ರೆ ದಾಖಲಾಗುವವರ ಸಂಖ್ಯೆ ಗಣನೀಯವಾಗಿ ಏರಿಕೆಯಾಗಿದೆ. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಮಹತ್ವದ ಸೂಚನೆ ನೀಡಿದ್ದು, ಎಲ್ಲರೂ ಬೂಸ್ಟರ್ ಡೋಸ್ ಪಡೆದುಕೊಳ್ಳಲು ಸೂಚಿಸಿದ್ದಾರೆ. ಮುಂಬೈನಲ್ಲಿ ಇದೀಗ ಕೋವಿಡ್ ಕಾರಣ ದಿಂದ ಪ್ರತಿ ದಿನ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ೧೦೦ರ ಗಡಿ ದಾಟಿದೆ. ಇದು ಆತಂಕ ಹೆಚ್ಚಾಗುವಂತೆ ಮಾಡಿದೆ. ಭಾರತದಲ್ಲಿ ೨ನೇ ಅಲೆ ಬಳಿಕ ೩ನೇ ಅಲೆಯಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚಾಗಿತ್ತು. ಆದರೆ ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಏರಿಕೆಯಾಗಿರಲಿಲ್ಲ. ಹೀಗಾಗಿ ತಜ್ಞ ವೈದ್ಯರು ಯಾವುದೇ ಆತಂಕ ಪಡಬೇಕಿಲ್ಲ ಎಂದು ಅಭಯ ನೀಡಿದ್ದರು. ಆದರೆ ಇದೀಗ ೪ನೇ ಅಲೆ ಭೀತಿ ಹೆಚ್ಚಾಗುತ್ತಿದ್ದಂತೆ ಆಸ್ಪತ್ರೆ ದಾಖಲಾಗುವ ಸಂಖ್ಯೆ ಗಣನೀಯ ಏರಿಕೆಯಾಗುತ್ತಿರುವುದು ಕಳವಳಕ್ಕೆ ಕಾರಣವಾಗಿದೆ.

೪ ತಿಂಗಳ ಬಳಿಕ ಮುಂಬೈನಲ್ಲಿ ೧೦೦ಕ್ಕಿಂತ ಹೆಚ್ಚು ಮಂದಿ ಕೋವಿಡ್ ಕಾರಣದಿಂದ ಒಂದೇ ದಿನ ಆಸ್ಪತ್ರೆ ದಾಖಲಾಗಿದ್ದಾರೆ. ಕೋವಿಡ್ ವಿಚಾರದಲ್ಲಿ ಮುಂಬೈ ಭಾರತಕ್ಕೆ ಎಚ್ಚರಿಕೆ ಗಂಟೆಯಾಗಿದೆ. ಕಳೆದ ಎರಡು ಅಲೆಗಳಲ್ಲಿ ಮುಂಬೈನಲ್ಲೇ ಕೋವಿಡ್ ಸ್ಫೋಟಗೊಂಡು ಇತರೆಡೆ ಹಬ್ಬಿತ್ತು. ಮುಂಬೈನಲ್ಲಿ ಮತ್ತೆ ಕೋವಿಡ್ ಹೆಚ್ಚಳದಿಂದ ಮಹಾರಾಷ್ಟçದಲ್ಲಿ ಕಳೆದ ೨೪ ಗಂಟೆಯಲ್ಲಿ ೨,೯೪೬ ಕೋವಿಡ್ ಪ್ರಕರಣ ಪತ್ತೆಯಾಗಿದೆ.

ಮುಂಬೈನಲ್ಲಿ ಆಸ್ಪತ್ರೆ ದಾಖಲಾಗುವವರ ಸಂಖ್ಯೆ, ಭಾರತದಲ್ಲಿ ಕೋವಿಡ್ ಪ್ರಕರಣ ಏರಿಕೆ ಬೆನ್ನಲ್ಲೇ ಕೇಂದ್ರ ಆರೋಗ್ಯ ಸಚಿವ ಮನ್ಸೂಕ್ ಮಾಂಡವಿಯಾ ಮಹತ್ವದ ಸೂಚನೆ ನೀಡಿದ್ದಾರೆ. ಕೊರೊನಾ ಇನ್ನೂ ಮುಗಿದಿಲ್ಲ, ಕೋವಿಡ್ ಮಾರ್ಗಸೂಚಿಗಳನ್ನು ಅಗತ್ಯವಾಗಿ ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಿ ಎಂದಿದ್ದಾರೆ. ಮಕ್ಕಳಿಗೆ ಲಸಿಕೆ ಹಾಕಿಸಲು ಪೋಷಕರಿಗೆ ಸೂಚನೆ ನೀಡಿದ್ದಾರೆ. ಇದೇ ವೇಳೆ ವಯಸ್ಕರು ಬೂಸ್ಟರ್ ಡೋಸ್ ಪಡೆದುಕೊಳ್ಳಲು ಸೂಚಿಸಿದ್ದಾರೆ.

Translate »