ದೀಪಾವಳಿ ಪಟಾಕಿ ಮಾರಾಟಕ್ಕೂ ಕೋವಿಡ್ ಮಾರ್ಗಸೂಚಿ
ಮೈಸೂರು

ದೀಪಾವಳಿ ಪಟಾಕಿ ಮಾರಾಟಕ್ಕೂ ಕೋವಿಡ್ ಮಾರ್ಗಸೂಚಿ

October 15, 2020

ಬೆಂಗಳೂರು, ಅ.14- ಕೋವಿಡ್ ಹರಡುವಿಕೆ ತಡೆಯುವ ಕ್ರಮವಾಗಿ ಉತ್ಸವಗಳು, ಹಬ್ಬಗಳ ಆಚರಣೆ ಮೇಲೆ ನಿಯಂ ತ್ರಣ ಹೇರಿರುವ ರಾಜ್ಯ ಸರ್ಕಾರ, ಈಗ ಮುಂಬರುವ ಬೆಳಕಿನ ಹಬ್ಬ ದೀಪಾವಳಿಯ ಪಟಾಕಿಗಳ ಮಾರಾಟಕ್ಕೂ ಹಲವು ಮಾರ್ಗ ಸೂಚಿಗಳನ್ನು ಬಿಡುಗಡೆಗೊಳಿಸಿದೆ.

ಪಟಾಕಿ ಮಾರಾಟ ಮಾಡುವವರು ಸಂಬಂಧ ಪಟ್ಟ ಇಲಾಖೆ, ಪ್ರಾಧಿಕಾರಗಳಿಂದ ಅಧಿಕೃತ ಪರವಾನಗಿ ಪಡೆದಿರಬೇಕು. ನ.1ರಿಂದ 17ರವರೆಗೆ ಮಾತ್ರ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಪರವಾನಗಿಯಲ್ಲಿ ನಮೂದಿಸುವ ಸ್ಥಳದಲ್ಲಿಯೇ ಮಾರಾಟಗಾರರು ಅಂಗಡಿ ಇಡಬೇಕು. ಸಾರ್ವಜನಿಕ ವಸತಿ ಸ್ಥಳಗಳಿಂದ ದೂರವಿರುವ ಮೈದಾನ ಅಥವಾ ಬಯಲು ಪ್ರದೇಶ ಗಳಲ್ಲಿ ಪಟಾಕಿ ಮಳಿಗೆ ಸ್ಥಾಪಿಸಬೇಕು. ಮಳಿಗೆಗಳ ಎರಡೂ ಕಡೆಗಳಿಂದ ಸರಾಗವಾಗಿ ಗಾಳಿಯಾಡುವಂತಿರ ಬೇಕು. ಮಳಿಗೆಗಳ ನಡುವೆ 6 ಮೀಟರ್ ಅಂತರ ವಿರಬೇಕು ಎಂದು ಮಾರ್ಗಸೂಚಿ ತಿಳಿಸಿದೆ. ಪಟಾಕಿ ಸಿಡಿಮದ್ದುಗಳನ್ನು ಮಾರಾಟ ಮಾಡುವ ಮಳಿಗೆಗಳ ಸುತ್ತಮುತ್ತ ದಿನನಿತ್ಯ ಸ್ಯಾನಿಟೈ ಸೇಷನ್ ಮಾಡುವುದು ಹಾಗೂ ಪಟಾಕಿಗಳ ಖರೀದಿಗೆ ಬರುವ ಸಾರ್ವಜನಿಕರಿಗೆ ಸ್ಯಾನಿ ಟೈಸರ್ ಹಾಗೂ ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆಯನ್ನು ಕಲ್ಪಿಸುವುದರ ಜೊತೆಗೆ ಕನಿಷ್ಠ ಆರು ಅಡಿ ಸಾಮಾಜಿಕ ಅಂತರವನ್ನು ಗುರುತಿ ಸುವುದು ಹಾಗೂ ಅದನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳತಕ್ಕದ್ದು. ಪಟಾಕಿ ಮಾರುವ ವ್ಯಾಪಾರಸ್ಥರು ಮತ್ತು ಖರೀದಿಗೆ ಇರುವ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರತಕ್ಕದ್ದು. ಪಟಾಕಿ ಖರೀದಿ ಸಂದರ್ಭದಲ್ಲಿ ಯಾವುದೇ ರೀತಿಯ ಜನದಟ್ಟಣೆ ಆಗದಂತೆ ಕಟ್ಟುನಿಟ್ಟಾಗಿ ನೋಡಿಕೊಳ್ಳುವುದು. ಕೋವಿಡ್-19 ಸಾಂಕ್ರಾಮಿಕ ಸೋಂಕು ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ರಾಷ್ಟ್ರೀಯ ನಿರ್ದೇಶನಗಳನ್ನು ಹಾಗೂ ರಾಜ್ಯ ಸರ್ಕಾರ ಹೊರಡಿಸಿದ ಮಾರ್ಗ ಸೂಚಿಗಳನ್ನು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸತಕ್ಕದ್ದು. ಅಲ್ಲದೇ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆ, ಪೆÇಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ, ಜಿಲ್ಲಾಡಳಿತ ಹಾಗೂ ಇತರೆ ಇಲಾಖೆ/ ಕಾಪೆರ್Çರೇಷನ್/ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗ ಸೂಚಿಗಳನ್ನು ಸಹ ಕಡ್ಡಾಯವಾಗಿ ಪಾಲಿಸತಕ್ಕದ್ದು ಎಂದು ಸೂಚಿಸಲಾಗಿದೆ.

Translate »