ತಿರುವನಂತಪುರಂ: ಶಬರಿ ಮಲೆ ಅಯ್ಯಪ್ಪಸ್ವಾಮಿ ದೇವ ಸ್ಥಾನ ಪ್ರವೇಶಿಸಲು ಭಕ್ತರಿಗೆ ಕೋವಿಡ್ ನೆಗೆಟಿವ್ ಪ್ರಮಾಣ ಪತ್ರ ಕಡ್ಡಾಯ ಮಾಡ ಬೇಕು ಎಂದು ತಜ್ಞರ ಸಮಿತಿ ಕೇರಳ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಎರಡು ತಿಂಗಳ ವಾರ್ಷಿಕ ಮಂಡಲ ಪೂಜೆ ಮಹೋತ್ಸವ ಮತ್ತು ಮಕರವಿಳಕ್ಕು ಉತ್ಸವ ನ.16ರಿಂದ ಆರಂಭವಾಗಲಿದ್ದು, ದೇವಾಲಯ ತೆರೆದ ನಂತರ ಅನುಸರಿ ಸಬೇಕಾದ ಮಾರ್ಗಸೂಚಿಗಳ ಕುರಿತು ತಜ್ಞರ ಸಮಿತಿ ಸರ್ಕಾರಕ್ಕೆ ವರದಿ ನೀಡಿದ್ದು, ಅದರಲ್ಲಿ ಕೋವಿಡ್-19 ನೆಗೆಟಿವ್ ವರದಿ ಕಡ್ಡಾಯಗೊಳಿಸು ವಂತೆಯೂ ಶಿಫಾರಸು ಮಾಡಲಾಗಿದೆ.
