ಮೈಸೂರು ನಗರದ ವಿವಿಧ 22 ಸ್ಥಳಗಳಲ್ಲಿ ಕೋವಿಡ್ ಪರೀಕ್ಷೆ

ಮೈಸೂರು, ಅ.20- ನಾಡಹಬ್ಬ ದಸರಾ ಸಂದರ್ಭದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆ ಯಲ್ಲಿ ಆಗಮಿಸುವ ಹಿನ್ನೆಲೆ ಮುನ್ನೆಚ್ಚರಿಕಾ ಕ್ರಮವಾಗಿ ಕೋವಿಡ್-19 ಹರಡು ವುದನ್ನು ನಿಯಂತ್ರಿಸಲು ನಗರ ಪಾಲಿಕೆ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿ ಯಿಂದ ನಗರದ ವಿವಿಧ 22 ಸ್ಥಳಗಳಲ್ಲಿ ಕೋವಿಡ್ ಪರೀಕ್ಷೆ ಗಳನ್ನು ನಡೆಸಲಾಗುತ್ತಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಗುರುದತ್ ಹೆಗಡೆ ತಿಳಿಸಿದ್ದಾರೆ.

ಕೋವಿಡ್ ಪರೀಕ್ಷೆಗಳನ್ನು ನಡೆಸುವ ಸಲುವಾಗಿ ಪಾಲಿಕೆ ವತಿಯಿಂದ ಮೊಬೈಲ್ ತಂಡಗಳನ್ನು ಸಹ ರಚಿಸಲಾಗಿದೆ. ನಗರದ ವಿವಿಧ ಫ್ಯಾಕ್ಟರಿಗಳು, ವಾಣಿಜ್ಯ, ಕೈಗಾರಿಕೆ ಉದ್ಯಮಗಳು, ಶಾಲಾ-ಕಾಲೇಜು ಶಿಕ್ಷಣ ಸಂಸ್ಥೆಗಳು, ಸರ್ಕಾರಿ-ಸರ್ಕಾರೇತರ ಸಂಸ್ಥೆಗಳು ತಮ್ಮ ಸಿಬ್ಬಂದಿಗಳಿಗೆ ಕೋವಿಡ್ ಪರೀಕ್ಷೆಗೆ ಒಳಪಡಿಸಲು ಇಚ್ಛಿಸಿದ್ದಲ್ಲಿ ಕೂಡಲೇ ನಗರ ಪಾಲಿಕೆ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ 9449841196 ಹಾಗೂ 0821-2440890 ಗೆ ಕರೆ ಮಾಡಿ ಹೆಸರು ನೋಂದಾಯಿಸಿಕೊಂಡಲ್ಲಿ ನಮ್ಮ ಮೊಬೈಲ್ ತಂಡ ನೀವು ಇರುವ ಸ್ಥಳಕ್ಕೆ ಭೇಟಿ ನೀಡಿ ಉಚಿತವಾಗಿ ಕೋವಿಡ್-19 ಪರೀಕ್ಷೆ ಮಾಡಲಾಗುತ್ತದೆ ಎಂದು ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.