ಕೆಆರ್ ಕ್ಷೇತ್ರದಲ್ಲಿ ಕೋವಿಡ್ ಪರೀಕ್ಷೆ, ಲಸಿಕೆ  ನೋಂದಣಿ ಮೆಗಾ ಅಭಿಯಾನಕ್ಕೆ ಚಾಲನೆ
ಮೈಸೂರು

ಕೆಆರ್ ಕ್ಷೇತ್ರದಲ್ಲಿ ಕೋವಿಡ್ ಪರೀಕ್ಷೆ, ಲಸಿಕೆ ನೋಂದಣಿ ಮೆಗಾ ಅಭಿಯಾನಕ್ಕೆ ಚಾಲನೆ

June 17, 2021

ಮೈಸೂರು,ಜೂ.16(ಪಿಎಂ)-ಮೈಸೂ ರಿನ ಕೆಆರ್ ಕ್ಷೇತ್ರದ 270 ಮತಗಟ್ಟೆಗಳಲ್ಲಿ ಸಂಪೂರ್ಣ ಕೋವಿಡ್ ಪರೀಕ್ಷೆ ಮತ್ತು ಲಸಿಕೆ ನೋಂದಣಿ ಅಭಿಯಾನಕ್ಕೆ ಬುಧ ವಾರ ಚಾಲನೆ ದೊರೆಯಿತು. ಮೈಸೂರು ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣದ ಪೈಲಟ್ ಪ್ರಾಜೆಕ್ಟ್ (ಪ್ರಾಯೋಗಿಕ ಯೋಜನೆ) ಆಗಿ ಆಯೋಜಿಸಿರುವ ಈ ಅಭಿಯಾನ, ಜೂ.17ರವೆಗೆ ನಡೆಯಲಿದೆ.

ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್ ನೇತೃತ್ವದಲ್ಲಿ `ನಿಮ್ಮ ಆರೋಗ್ಯದ ಕಡೆ, ನಮ್ಮ ಹೆಜ್ಜೆ’ ಶೀರ್ಷಿಕೆಯಡಿ ನಡೆಯಲಿರುವ ಈ ಅಭಿಯಾನದ ಸಾಧಕ-ಬಾಧಕ ಅವಲೋ ಕಿಸಿ, ಕೋವಿಡ್ ಪಾಸಿಟಿವಿಟಿ ದರ ಹೆಚ್ಚಿರುವ ಜಿಲ್ಲೆಯ ಇನ್ನಿತರ ವಿಧಾನಸಭಾ ಕ್ಷೇತ್ರಗ ಳಲ್ಲೂ ಇದೇ ಮಾದರಿ ಅಭಿಯಾನ ಆಯೋಜಿಸಲು ಜಿಲ್ಲಾಡಳಿತ ಉದ್ದೇಶಿಸಿದೆ.

ಮೈಸೂರು ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ ಹಾಗೂ ವಿವಿಧ ಸಂಘ -ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿ ಕೊಂಡಿರುವ ಈ ಅಭಿಯಾನಕ್ಕೆ ಮೈಸೂ ರಿನ ಜೆಪಿ ನಗರದ ಜೆಎಸ್‍ಎಸ್ ಪಬ್ಲಿಕ್ ಶಾಲೆ ಆವರಣದಲ್ಲಿ ಚಾಲನೆ ನೀಡಲಾ ಯಿತು. ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಮತ್ತು ಕೃಷಿ ಸಚಿವ ಬಿ.ಸಿ.ಪಾಟೀಲ್ ಅಭಿಯಾನ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಎಸ್.ಟಿ.ಸೋಮ ಶೇಖರ್, ಸಾರ್ವಜನಿಕರಿಗೆ ಅನುಕೂಲ ಕಲ್ಪಿ ಸುವ ನಿಟ್ಟಿನಲ್ಲಿ ಶಾಸಕ ಎಸ್.ಎ.ರಾಮ ದಾಸ್ ನಿರಂತರವಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ. ಜೊತೆಗೆ ಯಾವುದೇ ಕಾರ್ಯಕ್ರಮ ಆಯೋಜಿಸಿದರೂ ಅಚ್ಚು ಕಟ್ಟಾಗಿ ನಡೆಸಿ, ಜನತೆಗೆ ಪ್ರಯೋಜನ ದೊರೆಯುವಂತೆ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇನ್ನೊಂದು ವಾರ ವಿಸ್ತರಣೆ: ಗ್ರಾಮೀಣ ಪ್ರದೇಶದಲ್ಲಿ ಕೋವಿಡ್ ಸೋಂಕು ನಿಯಂ ತ್ರಣಕ್ಕಾಗಿ ರಾಜ್ಯ ಸರ್ಕಾರ ರೂಪಿಸಿರುವ `ವೈದ್ಯರ ನಡೆ ಹಳ್ಳಿ ಕಡೆ’ ಆರೋಗ್ಯ ತಪಾ ಸಣೆ ಕಾರ್ಯಕ್ರಮದ ಅವಧಿಯನ್ನು ಇನ್ನೊಂದು ವಾರ ವಿಸ್ತರಣೆ ಮಾಡಲಾಗಿದೆ. ಹೀಗಾಗಿ ಜಿಲ್ಲೆಯಲ್ಲಿಯೂ ಗ್ರಾಮಾಂತರ ಪ್ರದೇಶದಲ್ಲಿ ಪ್ರತಿ ಮನೆಗೆ ವೈದ್ಯರು ಭೇಟಿ ನೀಡಿ ತಪಾಸಣೆ ನಡೆಸುವುದು ಮುಂದು ವರೆಯಲಿದೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಿಸಲು ಪರಿಣಾಮಕಾರಿಯಾಗಿ ಚಟುವಟಿಕೆಗಳನ್ನು ನಡೆಸಲಾಗುತ್ತಿದೆ. ಆ ಮೂಲಕ ಸೋಂಕಿತ ರನ್ನು ಪತ್ತೆ ಹಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆ ಯಲ್ಲಿ ಪಾಸಿಟಿವಿಟಿ ದರ ಸ್ವಲ್ಪ ಹೆಚ್ಚಿದೆ. ಇಂದು ಕೆಆರ್ ಕ್ಷೇತ್ರದಲ್ಲಿ ಈ ಅಭಿಯಾನ ಪ್ರಾಯೋಗಿಕವಾಗಿ ಆರಂಭಗೊಂಡಿದೆ. ಇಂತಹ ಅಭಿಯಾನ ಆಯೋಜಿಸಲು ಕಳೆದ 15 ದಿನಗಳಿಂದ ರಾಮದಾಸ್ ಮತ್ತು ಅವರ ತಂಡ ಶ್ರಮಿಸಿದೆ. ಅಗತ್ಯ ಉಂಟಾದರೆ ಈ ಅಭಿಯಾನವನ್ನು ಇನ್ನು 2 ದಿನಗಳಿಗೆ ವಿಸ್ತ ರಿಸಿಕೊಳ್ಳುವಂತೆ ಸಚಿವ ಎಸ್.ಟಿ.ಸೋಮ ಶೇಖರ್ ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಎಸ್.ಎ. ರಾಮದಾಸ್, ಪ್ರಭಾರ ಮೇಯರ್ ಅನ್ವರ್ ಬೇಗ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ಜಿಪಂ ಸಿಇಓ ಎ.ಎಂ.ಯೋಗೀಶ್, ನಗರ ಪಾಲಿಕೆ ಆಯುಕ್ತ ಜಿ.ಲಕ್ಷ್ಮೀಕಾಂತ ರೆಡ್ಡಿ, ಉಪ ವಿಭಾಗಾಧಿಕಾರಿ ಡಾ.ಎನ್.ಸಿ.ವೆಂಕಟರಾಜು, ಡಿಹೆಚ್‍ಓ ಡಾ.ಟಿ.ಅಮರನಾಥ್, ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜು, ಡಿಸಿಪಿ ಗೀತಾ ಪ್ರಸನ್ನ, ಬಿಜೆಪಿ ನಗರಾಧ್ಯಕ್ಷ ಟಿ.ಎಸ್. ಶ್ರೀವತ್ಸ ಮತ್ತಿತರರು ಹಾಜರಿದ್ದರು.

Translate »