ಕೋವಿಡ್: ಭಾರತಕ್ಕೆ ಅಮೆರಿಕದಿಂದ ನೆರವಿನ ಹಸ್ತ
News

ಕೋವಿಡ್: ಭಾರತಕ್ಕೆ ಅಮೆರಿಕದಿಂದ ನೆರವಿನ ಹಸ್ತ

April 26, 2021

ಚೆನ್ನೈ,ಏ.25-ದೇಶದಲ್ಲಿ 2ನೇ ಅಲೆಯ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸು ತ್ತಿದೆ. ಕೊರೊನಾ ಸೋಂಕು ಹರಡುವಿಕೆ ಶರವೇಗ ವನ್ನು ಪಡೆದುಕೊಂಡಿದೆ. ಹಲವು ನಿರ್ಬಂಧಗಳ ನಡುವೆಯೂ ದೊಡ್ಡ ಪ್ರಮಾಣದಲ್ಲಿ ಕೊರೊನಾ ಸೋಂಕಿತರು ಪತ್ತೆ ಆಗುತ್ತಿದ್ದಾರೆ. ಕೊರೊನಾ ಸೋಂಕಿ ತರಿಗೆ ಆಮ್ಲಜನಕ ಸೇರಿದಂತೆ ಸೂಕ್ತ ಸೌಲಭ್ಯವನ್ನು ನೀಡುವುದು ಸರ್ಕಾರದಿಂದ ಸಾಧ್ಯವಾಗುತ್ತಿಲ್ಲ. ಹೀಗಾಗಿ ತಾವು ಭಾರತದ ಸ್ನೇಹಿತರ ನೆರವಿಗೆ ನಿಲ್ಲುತ್ತೇವೆ ಎಂದು ಹೇಳುವ ಮೂಲಕ ಅಮೆರಿಕ ಭಾರತಕ್ಕೆ ಕೋವಿಡ್ ಪರಿಸ್ಥಿತಿಯನ್ನು ನಿಭಾಯಿಸಲು ಸಹಾಯ ಹಸ್ತ ಚಾಚಲು ಮುಂದಾಗಿದೆ. ಚೆನ್ನೈನಲ್ಲಿರುವ ಅಮೆರಿಕ ರಾಯಭಾರಿ ಕಚೇರಿ

ಈ ಸಂಬಂಧ ಇಂದು ಟ್ವೀಟ್ ಮೂಲಕ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಭಾರತದಲ್ಲಿ ಕೊರೋನಾ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಭಾರತ ಈ ಸಾಂಕ್ರಾಮಿಕ ರೋಗವನ್ನು ಧೈರ್ಯದಿಂದ ಎದುರಿಸಬೇಕಿದೆ. ಭಾರತದ ಸ್ನೇಹಿತರಿಗೆ ಅಗತ್ಯ ವಸ್ತುಗಳನ್ನು ಸರಬರಾಜು ಮಾಡುವ ಮೂಲಕ ಸಹಾಯ ಹಸ್ತ ಚಾಚಲು ಅಮೆರಿಕ ಸಿದ್ದವಾಗಿದೆ ಎಂದು ತಿಳಿಸಲಾಗಿದೆ.

ಅಮೆರಿಕದ ಅಧಿಕಾರಿ ಜೇಕ್ ಸುಲ್ಲಿವಾನ್ ಈ ಬಗ್ಗೆ ಟ್ವೀಟ್ ಮಾಡಿದ್ದು, ಭಾರತದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಬಗ್ಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರೊಂದಿಗೆ ಇಂದು ಮಾತನಾಡಿದ್ದೇವೆ ಮತ್ತು ಮುಂಬರುವ ದಿನಗಳಲ್ಲಿ ನಿಕಟ ಸಂಪರ್ಕದಲ್ಲಿರಲು ನಾವು ಒಪ್ಪಿದ್ದೇವೆ. ಯುನೈಟೆಡ್ ಸ್ಟೇಟ್ಸ್ ಭಾರತದ ಜನರೊಂದಿಗೆ ಒಗ್ಗಟ್ಟಿನಲ್ಲಿ ನಿಂತಿದೆ ಮತ್ತು ನಾವು ಹೆಚ್ಚಿನ ಸರಬರಾಜು ಮತ್ತು ಸಂಪನ್ಮೂಲಗಳನ್ನು ಭಾರತಕ್ಕೆ ನಿಯೋಜಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

Translate »