ಕೋವಿಡ್ ಲಸಿಕೆ: ಕೆ.ಆರ್.ನಗರÀ ಪ್ರಥಮ, ಪಿ.ಪಟ್ಟಣ ದ್ವಿತೀಯ

ಪಿರಿಯಾಪಟ್ಟಣ, ಏ.28(ವೀರೇಶ್)-ಜಿಲ್ಲೆಯಲ್ಲಿ ಕೊರೊನಾ ವ್ಯಾಕ್ಸಿನ್ ನೀಡಿಕೆಯಲ್ಲಿ ಕೆ.ಆರ್.ನಗರ ತಾಲೂಕು ಪ್ರಥಮ ಸ್ಥಾನದಲ್ಲಿದ್ದು, ಪಿರಿಯಾಪಟ್ಟಣ ಎರಡನೇ ಸ್ಥಾನದಲ್ಲಿದೆ. ಮಾಹಿತಿ ಪ್ರಕಾರ ತಾಲೂಕಿನಲ್ಲಿ ಶೇ.80ರಷ್ಟು ವ್ಯಾಕ್ಸಿನ್ ನೀಡಿ ರುವುದು ಪ್ರಶಂಸನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹರ್ಷ ವ್ಯಕ್ತಪಡಿಸಿದರು.

ಪಟ್ಟಣದ ತಾಪಂ ಸಭಾಂಗಣದಲ್ಲಿ ಅಧಿಕಾರಿಗಳ ಸಭೆಯನ್ನು ದ್ದೇಶಿಸಿ ಮಾತನಾಡಿದ ಅವರು, ಮೇ 1ರಿಂದ 18 ವರ್ಷದ ಮೇಲ್ಪಟ್ಟ ಎಲ್ಲರಿಗೂ ವ್ಯಾಕ್ಸಿನ್ ಉಚಿತವಾಗಿ ನೀಡಲಿದ್ದು, ಇದಕ್ಕಾಗಿ ಜಿಲ್ಲಾ ದ್ಯಂತ ಭರದ ಸಿದ್ಧತೆ ನಡೆದಿದೆ. ರಾಜ್ಯ 2,600 ಕೋಟಿ ರೂ. ಇದಕ್ಕಾಗಿ ವೆಚ್ಚ ಮಾಡಲಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ವ್ಯಾಕ್ಸಿನ್ ಪಡೆಯಲು ಹೆಚ್ಚಿನ ಒತ್ತಡ ಹಾಗೂ ಜನ ನಿಯಂತ್ರಣಕ್ಕಾಗಿ ಸರ್ಕಾರ ಖಾಸಗಿ ಆಸ್ಪತ್ರೆಗಳಲ್ಲಿಯೂ ವ್ಯವಸ್ಥಿತವಾಗಿ ಲಸಿಕೆ ವಿತರಿಸುವ ಉದ್ದೇಶ ಹೊಂದಿದೆ. ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ ಡಳಿತ ಅಗತ್ಯ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು ಭಯಪಡು ವುದು ಬೇಡ. ಆದರೆ ಎಚ್ಚರ ಇರಲಿ ಎಂದು ಮನವಿ ಮಾಡಿದರು.

ಈಗಾಗಲೇ ಜಿಲ್ಲೆಗೆ 100 ವೆಂಟಿಲೇಟರ್‍ಗಳು ಹಾಗೂ 20 ಆಕ್ಸಿಜನ್ ಸಿಲಿಂಡರ್‍ಗಳು ಬಂದಿದ್ದು, ತಾಲೂಕು ಕೇಂದ್ರಗಳಲ್ಲಿ ಆಕ್ಸಿಜನ್ ಹಾಗೂ ವೆಂಟಿಲೇಟರ್‍ಗಳ ಕೊರತೆ ಇದ್ದಲ್ಲಿ ಮಾಹಿತಿ ನೀಡುವಂತೆ ಸಲಹೆ ನೀಡಿದರು. ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆಯಲ್ಲೂ ಕೋವಿಡ್ ಸೋಕಿಂತರಿಗಾಗಿ ಬೆಡ್‍ಗಳಿಗೆ ಬೇಡಿಕೆ ಇಟ್ಟಿದ್ದು, ಖಾಸಗಿ ಆಸ್ಪತ್ರೆಯಲ್ಲಿ 50ರಷ್ಟು ಬೆಡ್‍ಗಳನ್ನು ಮೀಸಲಿಡಲು ಸರ್ಕಾರ ತೀರ್ಮಾನಿಸಿದೆ. ಇದಕ್ಕೆ ಅನುಮೋದನೆ ಸಿಕ್ಕಿದೆ ಎಂದರಲ್ಲದೆ, ಅಧಿಕಾರಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಕೆಲಸ ನಿರ್ವಹಿಸುವಂತೆ ತಹಸೀಲ್ದಾರ್‍ಗೆ ಆದೇಶಿಸಿದರು.

ಶಾಸಕ ಕೆ.ಮಹದೇವ್ ಮಾತನಾಡಿ, ಕೋವಿಡ್ ತಡೆ ನಿಟ್ಟಿನಲ್ಲಿ ಸರ್ಕಾರದ ಆದೇಶಗಳನ್ನು ಪೆÇಲೀಸ್ ಅಧಿಕಾರಿಗಳು ಹಾಗೂ ಆಸ್ಪತ್ರೆಯ ಸಿಬ್ಬಂದಿ ಎಚ್ಚರ ವಹಿಸಿ ಪಾಲಿಸಬೇಕು. ತರಕಾರಿ ಮಾರುಕಟ್ಟೆಗಳಲ್ಲಿ ಆದಷ್ಟೂ ಜನಸಂದಣಿಯಾಗದಂತೆ ನೋಡಿ ಕೊಳ್ಳಬೇಕು ಎಂದು ನಿರ್ದೇಶನ ನೀಡಿದರು. ರೈತರು ಗೊಬ್ಬರ ಇತ್ಯಾದಿಗಳನ್ನು ಹಳ್ಳಿಗಳಿಗೆ ಸಾಗಿಸುವ ಸಂದರ್ಭದಲ್ಲಿ ಪೆÇಲೀಸ್ ಅಧಿಕಾರಿಗಳು ಅವರಿಗೆ ತೊಂದರೆ ನೀಡದಂತೆ ಕ್ರಮ ಕೈಗೊಳ್ಳ ಬೇಕೆಂದು ಇದೇ ವೇಳೆ ಶಾಸಕರು ಮನವಿ ಮಾಡಿದರು.

ಟಿಎಚ್‍ಓ ಶರತ್ ಹಾಗೂ ಪಟ್ಟಣ ಆಸ್ಪತ್ರೆ ಆಡಳಿತಾಧಿಕಾರಿ ಶ್ರೀನಿವಾಸ್ ಸಚಿವರಿಗೆ ಅಗತ್ಯ ಮಾಹಿತಿ ನೀಡಿದರು. ಸಭೆಯಲ್ಲಿ ಸಂಸದ ಪ್ರತಾಪ್‍ಸಿಂಹ, ಜಿಪಂ ಸಿಇಓ ಮಂಜುನಾಥ್, ಜಿಪಂ ಯೋಜ ನಾಧಿಕಾರಿ ಶ್ರುತಿ, ತಹಸೀಲ್ದಾರ್ ಚಂದ್ರಮೌಳಿ, ತಾಪಂ ಇಓ ಕೃಷ್ಣಕುಮಾರ್, ಹುಣಸೂರು ವಿಭಾಗದ ವೃತ್ತ ನಿರೀಕ್ಷಕರಾದ ಪ್ರದೀಪ್, ಜಗದೀಶ್, ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ತಿಪ್ಪಾರೆಡ್ಡಿ ಸೇರಿದಂತೆ ತಾಲೂಕಿನ ವಿವಿಧ ಇಲಾಖೆ ಅಧಿಕಾರಿಗಳಿದ್ದರು.