ಕೋವಿಡ್ ನಿಯಮ ಉಲ್ಲಂಘನೆ: ಕಲ್ಯಾಣ ಮಂಟಪ ಮಾಲೀಕರ ವಿರುದ್ಧ ಎಫ್‍ಐಆರ್
ಕೊಡಗು

ಕೋವಿಡ್ ನಿಯಮ ಉಲ್ಲಂಘನೆ: ಕಲ್ಯಾಣ ಮಂಟಪ ಮಾಲೀಕರ ವಿರುದ್ಧ ಎಫ್‍ಐಆರ್

April 24, 2021

ಹನೂರು, ಏ.23(ಸೋಮು)-ಕೋವಿಡ್-19 ಮಾರ್ಗಸೂಚಿ ಉಲ್ಲಂಘಿಸಿ ವಿವಾಹ ನಡೆಸುತ್ತಿದ್ದ ಕಲ್ಯಾಣ ಮಂಟಪಗಳ ಮೇಲೆ ವೃತ್ತನಿರೀಕ್ಷಕ ಸಂತೋಷ್ ಕಶ್ಯಪ್ ದಾಳಿ ನಡೆಸಿ, ಪ್ರಕರಣ ದಾಖಲಿಸಿದ್ದಾರೆ. ಕಲ್ಯಾಣ ಮಂಟಪದ ಮಾಲೀಕರು ಪೂರ್ವಾನುಮತಿ ಪಡೆಯದೆ ಹಾಗೂ ಕೋವಿಡ್ ನಿಯಮಗಳನ್ನು ಗಾಳಿಗೆ ತೂರಿ ಸಾವಿರಾರು ಜನರು ಸೇರಿ ಕೊಂಡು ವಿವಾಹ ನಡೆಸುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಹನೂರು ಪಟ್ಟಣ ಠಾಣೆಯ ವೃತ್ತನಿರೀಕ್ಷಕ ಸಂತೋಷ ಕಶ್ಯಪ್ ನೇತೃತ್ವ ತಂಡ ಇಂದು ಕಾರ್ಯಾಚರಣೆ ನಡೆಸಿತು.

ಈ ವೇಳೆ ನಿಯಮ ಉಲ್ಲಂಘಿಸಿದ ಪಟ್ಟಣದ ವಾಸವಿ ಮಹಲ್ ಕಲ್ಯಾಣ ಮಂಟಪದ ವ್ಯವಸ್ಥಾಪಕರು, ಶ್ರೀ ಬೆಟ್ಟಳ್ಳಿ ಮಾರಮ್ಮ ಕಲ್ಯಾಣ ಮಂಟಪದ ವ್ಯವಸ್ಥಾಪಕರು ಸೇರಿದಂತೆ ಪಟ್ಟಣದ ಮುಖ್ಯರಸ್ತೆಯ ಕೃಷ್ಣ ಬೇಕರಿ ಮಾಲೀಕ ಮಲ್ಲಿಕಾರ್ಜುನ್ ವಿರುದ್ಧ ರಾಷ್ಟ್ರೀಯ ವಿಪತ್ತು ನಿರ್ವಹಣಾ ಕಾಯ್ದೆ-2005ರ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಮುಂದಿನ ಕ್ರಮ ಕೈಗೊಳ್ಳಲಾಗಿದೆ.

Translate »