ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಡಿಸಿ ಕಚೇರಿ ಎದುರು ಸಿಪಿಐ ಪ್ರತಿಭಟನೆ
ಹಾಸನ

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಡಿಸಿ ಕಚೇರಿ ಎದುರು ಸಿಪಿಐ ಪ್ರತಿಭಟನೆ

June 21, 2018

ಹಾಸನ: ಪೆಟ್ರೋಲ್-ಡಿಸೇಲ್ ಬೆಲೆ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ)ದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಕೇಂದ್ರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 2014ರಲ್ಲೇ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆಯು ಪಾತಾಳಕ್ಕೆ ಕುಸಿಯಿತು. ಬ್ಯಾರಲಿಗೆ 130 ಡಾಲರ್ ಇದ್ದ ಕಚ್ಚಾ ತೈಲದ ಬೆಲೆ 45 ಡಾಲರ್‍ಗೆ ಕುಸಿದಿದೆ. ಆದರೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‍ಡಿಎ ಸರ್ಕಾರ ತೈಲ ಬೆಲೆ ಇಳಿಕೆ ಮಾಡಿಲ್ಲ ಎಂದು ಕಿಡಿಕಾರಿದರು.

ಅಂತರಾಷ್ಟ್ರೀಯ ಮಟ್ಟದಲ್ಲಿ ಮೊದ ಲಿದ್ದ ಬೆಲೆಯ ಶೇ.25ರ ಬೆಲೆಗೆ ಕಚ್ಚಾ ತೈಲ ಲಭ್ಯವಿದ್ದರೂ ಸಹ ಕೇಂದ್ರ ಸರ್ಕಾರವು ಪ್ರತಿದಿನ ಪೆಟ್ರೋಲ್-ಡಿಸೇಲ್ ಬೆಲೆ ಏರಿಳಿತದ ಕುತಂತ್ರ ಮಾಡಿ, ನಿತ್ಯ ಸುಲಿಗೆ ಮೂಲಕ ಜನ ವಿರೋಧಿ ನೀತಿ ಅನು ಸರಿಸುತ್ತಿದೆ ಎಂದು ಆರೋಪಿಸಿದರು.

ಪೆಟ್ರೋಲ್-ಡಿಸೇಲ್ ಬೆಲೆಯ ಹೆಚ್ಚಳವು ಸಾಗಾಟದ ಖರ್ಚನ್ನು ಹೆಚ್ಚಿಸುತ್ತದೆ. ಹಾಗೂ ಎಲ್ಲಾ ವಸ್ತುಗಳ ಬೆಲೆಯಲ್ಲೂ ಏರಿಕೆಯಾಗು ತ್ತಿದೆ ಎಂದು ಆತಂಕ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ರಾಜಕಾರಸ್ಕೃಗಳು ಸುಳ್ಳು ಹೇಳುತ್ತಿದ್ದರು ಆದರೆ ಈಗ ಸರ್ಕಾರವೇ ಸುಳ್ಳು ಹೇಳುತ್ತಿದೆ. ಕೂಡಲೇ ತೈಲಬೆಲೆಯನ್ನು ಕಡಿಮೆ ಮಾಡಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಸಿಪಿಐ ಜಿಲ್ಲಾ ಮಂಡಳಿ ಕಾರ್ಯದರ್ಶಿ ಎಂ.ಸಿ. ಡೋಂಗ್ರೆ, ಜಿಲ್ಲಾ ರೈತ ಸಂಘದ ಅಧ್ಯಕ್ಷ ಕೊಟ್ಟೂರು ಶ್ರೀನಿವಾಸ್ ಇತರರಿದ್ದರು.

Translate »