ಏ.8ರಂದು ಸಿಪಿಕೆ 80ರ ಸಂಭ್ರಮ
ಮೈಸೂರು

ಏ.8ರಂದು ಸಿಪಿಕೆ 80ರ ಸಂಭ್ರಮ

April 2, 2019

ಮೈಸೂರು: ಮೈಸೂರಿನ ಅರಸು ಜಾಗೃತಿ ಅಕಾಡೆಮಿ ಮತ್ತು ನೃಪತುಂಗ ಚಾರಿಟಬಲ್ ಟ್ರಸ್ಟ್ ಸಂಯುಕ್ತ ಆಶ್ರಯದಲ್ಲಿ ಹಿರಿಯ ಸಾಹಿತಿ ಡಾ. ಸಿ.ಪಿ.ಕೆ. ಅವರ 80ನೇ ಹುಟ್ಟುಹಬ್ಬ ವನ್ನು ಏ.8ರಂದು ಸಂಜೆ 4 ಗಂಟೆಗೆ ಜೆಎಲ್‍ಬಿ ರಸ್ತೆ ಯಲ್ಲಿರುವ ನಾದಬ್ರಹ್ಮ ಸಂಗೀತ ಸಭಾ ಭವನದಲ್ಲಿ ಏರ್ಪಡಿಸಲಾಗಿದೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಸಾನಿಧ್ಯ ವಹಿಸುವರು. ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಅವರು ಸಿಪಿಕೆ ಚುಟುಕು ತೋರಣ ಮತ್ತು ಕಾವ್ಯಕ್ಕೆ ಗುರು ಕೃತಿಗಳನ್ನು ಲೋಕಾರ್ಪಣೆ ಮಾಡುವರು. ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 9 ಸಾಧಕರಿಗೆ ಧ್ವನಿ ಕೊಟ್ಟ ಧಣಿ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು.

Translate »