ನಟರಾಜ ಮಹಿಳಾ ಕಾಲೇಜಿನಲ್ಲಿ ಅಪರಾಧ ತಡೆ ಮಾಸಾಚರಣೆ

ಮೈಸೂರು,ಡಿ.22-ಖಿಲ್ಲೆ ಮೊಹಲ್ಲಾದ ಶ್ರೀ ನಟರಾಜ ಮಹಿಳಾ ಪದವಿಪೂರ್ವ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕ ಮತ್ತು ಕೆ.ಆರ್.ಪೊಲೀಸ್ ಠಾಣೆ ಸಂಯುಕ್ತಾಶ್ರಯ ದಲ್ಲಿ `ಅಪರಾಧ ತಡೆ ಮಾಸಾಚರಣೆ’ ಕಾರ್ಯ ಕ್ರಮವನ್ನು ಆಯೋಜಿಸ ಲಾಗಿತ್ತು. ಕೆ.ಆರ್.ಪೊಲೀಸ್ ಠಾಣೆ ಇನ್ಸ್‍ಪೆಕ್ಟರ್ ಶ್ರೀನಿವಾಸ್ ಮಾತನಾಡಿ, ಅಪರಾಧಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಯುವ ಸಮೂಹ ಹೆಚ್ಚು ಅಪರಾಧಗಳನ್ನು ಮಾಡುತ್ತಿರುವುದು ಕಳವಳಕಾರಿ. ಮಹಿಳೆಯರು ಮತ್ತು ವಿದ್ಯಾರ್ಥಿನಿಯರು ಶೋಷಣೆಗೆ ಒಳಗಾಗುತ್ತಿದ್ದು, ಮುಂಜಾಗ್ರತ ಕ್ರಮಗಳನ್ನು ವಹಿಸಬೇಕಿದೆ. ಯುವಸಮೂಹ ಅಪರಾಧ ಕೃತ್ಯಗಳಿಂದ ದೂರವಿರಬೇಕು. ಅಪರಾಧ ಪ್ರಕರಣಗಳು ಕಂಡುಬಂದಲ್ಲಿ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಇದೇ ಸಂದರ್ಭ ಪ್ರಬಂಧ ಸ್ಪರ್ಧೆ ವಿಜೇತ ವಿದ್ಯಾರ್ಥಿನಿಯರಿಗೆ ಬಹುಮಾನ ವಿತರಿಸಲಾಯಿತು. ಶ್ರೀ ನಟರಾಜ ಪ್ರತಿಷ್ಠಾನದ ಸಂಯೋಜನಾಧಿಕಾರಿ ಶಿವಕುಮಾರ್, ಕೌಶಲಾಭಿವೃದ್ಧಿ ಅಧಿಕಾರಿ ಆನಂದ್, ಪೊಲೀಸ್ ಅಧಿಕಾರಿಗಳಾದ ಸುರೇಶ್, ರಮೇಶ್, ಅನಿಲ್, ವಿಷಕಂಠಯ್ಯ, ವಿಶ್ವನಾಥ್, ಕಾಲೇಜು ಪ್ರಾಂಶುಪಾಲ ವಿ.ಪ್ರದೀಪ್ ಮತ್ತಿತರರು ಉಪಸ್ಥಿತರಿದ್ದರು.