ಅಗತ್ಯ ವಸ್ತುಗಳ ಅಭಾವ ಸೃಷ್ಟಿಸಿದರೆ ಕ್ರಿಮಿನಲ್ ಕೇಸ್
ಚಾಮರಾಜನಗರ

ಅಗತ್ಯ ವಸ್ತುಗಳ ಅಭಾವ ಸೃಷ್ಟಿಸಿದರೆ ಕ್ರಿಮಿನಲ್ ಕೇಸ್

March 23, 2020

ಚಾಮರಾಜನಗರ,ಮಾ.22-ಕೊರೊನಾ ವೈರಸ್ ಸೋಂಕು ಹರಡುವ ಸಂದರ್ಭ ವನ್ನು ದುರುಪಯೋಗ ಪಡಿಸಿಕೊಂಡು ಜಿಲ್ಲೆಯಲ್ಲಿ ಅಗತ್ಯ ವಸ್ತುಗಳ ದಾಸ್ತಾನು ಅಭಾವ ಸೃಷ್ಟಿಸುವವರ ವಿರುದ್ಧ ಕರ್ನಾ ಟಕ ಅಗತ್ಯ ವಸ್ತುಗಳ ಕಾಯ್ದೆ ಅನುಸಾರ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಎಚ್ಚರಿಕೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿಂದು ಕೊರೊನಾ ವೈರಸ್ ತಡೆ ಮುಂಜಾಗ್ರತಾ ಕ್ರಮ ಸಂದರ್ಭದಲ್ಲಿ ಉದ್ಭವಿಸÀಬಹುದಾದ ಅಗತ್ಯ ವಸ್ತುಗಳ ಪೂರೈಕೆ ಮತ್ತು ಸಂಗ್ರಹಣೆ, ವ್ಯತ್ಯಾಸ ಕುರಿತಂತೆ ಕ್ರಮ ಕೈಗೊಳ್ಳುವ ಹಿನ್ನೆಲೆಯಲ್ಲಿ ನಡೆಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಸಾರ್ವಜನಿಕರಿಗೆ ಸಕಾಲ ದಲ್ಲಿ ಅಗತ್ಯ ವಸ್ತುಗಳು ದೊರಕಬೇಕು. ಈ ನಿಟ್ಟಿನಲ್ಲಿ ಎಲ್ಲಾ ಮುಕ್ತ ಮಾರುಕಟ್ಟೆಯ ಸಗಟು ವರ್ತಕರು ಸಹಕರಿಸಬೇಕು. ಕೊರೊನಾ ವೈರಸ್ ತಡೆಗಟ್ಟುವ ಮುಂಜಾ ಗ್ರತಾ ಕ್ರಮಗಳ ಹಿನ್ನೆಲೆಯಲ್ಲಿ ಸಂದರ್ಭ ವನ್ನು ದುರುಪಯೋಗ ಪಡಿಸಿಕೊಂಡು ಅಗತ್ಯ ವಸ್ತುಗಳ ದಾಸ್ತಾನು ಬಗ್ಗೆ ಅಭಾವ ಸೃಷ್ಟಿಸಬಾರದು. ಒಂದು ವೇಳೆ ಇಂತಹ ಅಭಾವ ಉಂಟುಮಾಡಿದಲ್ಲಿ ಕರ್ನಾಟಕ ಅಗತ್ಯ ವಸ್ತುಗಳ ಆದೇಶ-1981ರ ಪ್ರಕಾರ ಕಾನೂನುರೀತ್ಯಾ ಕ್ರಮ ತೆಗೆದುಕೊಳ್ಳಲಾಗು ತ್ತದೆ ಎಂದು ಜಿಲ್ಲಾಧಿಕಾರಿ ಎಚ್ಚರಿಸಿದರು.

ಅಗತ್ಯ ವಸ್ತುಗಳ ಕಾಯ್ದೆಯಡಿ ಮುಕ್ತ ಮಾರುಕಟ್ಟೆಯಲ್ಲಿ ಆಹಾರ ಧಾನ್ಯ ಮಾರಾಟ ಮಾಡಲು ಸಗಟು ಪರವಾನಗಿ ಹೊಂದಿ ರುವ ವ್ಯಾಪಾರಸ್ಥರು ಸರ್ಕಾರ ನಿಗದಿಪಡಿ ಸಿದ ದರದಂತೆ ಆಹಾರ ಧಾನ್ಯ ವಿತರಣೆ ಮಾಡಬೇಕು. ಆಹಾರಧಾನ್ಯ ವಿತರಣೆ ಮಾಡಲು ಲೋಪ ಎಸಗುವುದು, ಕೃತಕ ಅಭಾವ ಸೃಷ್ಟಿಸುವುದು ಕಂಡುಬಂದಲ್ಲಿ ಕರ್ನಾಟಕ ಅಗತ್ಯ ವಸ್ತುಗಳ ಪರವಾನಗಿ ಆದೇಶ ಪ್ರಕಾರ ಮಾರಾಟಗಾರರ ವಿರುದ್ಧ ಮೊಕದ್ದಮೆ ದಾಖಲಿಸಲಾಗುತ್ತದೆ. ಅಲ್ಲದೆ ಸರ್ಕಾರದ ನಿಯಮದಂತೆ ಮಳಿಗೆಯಲ್ಲಿ ರುವ ಎಲ್ಲಾ ಸಾಮಗ್ರಿ ದಾಸ್ತಾನುಗಳನ್ನು ವಶಕ್ಕೆ ಪಡೆಯಲಾಗುತ್ತದೆ ಎಂದರು.

ಅಗತ್ಯ ವಸ್ತುಗಳ ಕಾಯ್ದೆ ಬಗ್ಗೆ ನಿರ್ಲಕ್ಷ್ಯ ವಹಿಸಿ ಸಾರ್ವಜನಿಕರಿಗೆ ಅನಗತ್ಯವಾಗಿ ತೊಂದರೆ ಉಂಟುಮಾಡಬಾರದು. ಗೋದಾಮಿನಲ್ಲಿ ಸಾಕಷ್ಟು ಪ್ರಮಾಣದಲ್ಲಿ ಆಹಾರಧಾನ್ಯ ದಾಸ್ತಾನು ಇಟ್ಟುಕೊಂಡು ಸಾರ್ವಜನಿಕರಿಗೆ ದಾಸ್ತಾನು ಇಲ್ಲವೆಂದು ಅಲೆದಾಡಿಸುವ ಪ್ರಕರಣವನ್ನು ಗಂಭೀರ ವಾಗಿ ಪರಿಗಣಿಸಿ ಕಾಳಸಂತೆ ನಿರ್ಮೂಲನೆ ಮತ್ತು ಅಗತ್ಯ ವಸ್ತುಗಳ ಪೂರೈಕೆ ನಿರ್ವಹಣೆ ಕಾಯ್ದೆ ಪ್ರಕಾರ ಕಠಿಣ ಕ್ರಮ ಜರುಗಿಸಲಾಗುತ್ತದೆ. ಇದಕ್ಕೆ ಅವಕಾಶ ನೀಡದೇ ಜಿಲ್ಲೆಯ ಗ್ರಾಹಕರಿಗೆ ಅಗತ್ಯಕ್ಕೆ ತಕ್ಕಂತೆ ಆಹಾರಧಾನ್ಯ ಸಾಮಗ್ರಿಗಳ ವಿತರಣೆಗೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ನಿರ್ದೇಶನ ನೀಡಿದರು.

ಆಹಾರ ಕಾರ್ಯ ನಿರ್ವಾಹಕ ಅಧಿಕಾರಿ, ಸಿಬ್ದಂದಿ ಪ್ರತಿದಿನ ಮುಕ್ತ ಮಾರುಕಟ್ಟೆಯ ಸಗಟು ಮತ್ತು ಚಿಲ್ಲರೆ ಮಾರಾಟ ಮಳಿಗೆಗಳಿಗೆ ಭೇಟಿ ನೀಡಿ ಆಹಾರಧಾನ್ಯ ವಿತರಣೆ ಬಗ್ಗೆ ಪರಿಶೀಲಿ ಸಬೇಕು. ವರ್ತಕರು ನಿಗದಿಪಡಿಸಿರುವ ದರ ದಾಸ್ತಾನು ವಿವರವನ್ನು ಸಹ ಪರಿಶೀಲನೆ ಮಾಡಬೇಕು. ಈ ಸಂಬಂಧ ಆಯಾ ದಿನವೇ ವರದಿ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಆದೇಶಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹರ್ಷಲ್ ಬೋಯರ್ ನಾರಾಯಣರಾವ್, ಹೆಚ್ಚುವರಿ ಜಿಲ್ಲಾ ಧಿಕಾರಿ ಸಿ.ಎಲ್. ಆನಂದ್, ಉಪವಿ ಭಾಗಾಧಿಕಾರಿ ನಿಖಿತಾ ಎಂ. ಚಿನ್ನಸ್ವಾಮಿ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಆರ್. ರಾಚಪ್ಪ ಇತರರು ಸಭೆಯಲ್ಲಿ ಹಾಜರಿದ್ದರು.

Translate »