ಬೆಂಗಳೂರು, ನ.4-ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆ ಮುಗಿಯುತ್ತಿದ್ದಂತೆಯೇ ಬಿ.ಎಸ್.ಯಡಿ ಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಜನತೆಗೆ ಕರೆಂಟ್ ಶಾಕ್ ನೀಡಿದ್ದು, ಯೂನಿಟ್‍ಗೆ 40 ಪೈಸೆ ವಿದ್ಯುತ್ ದರ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳು ದರ ಹೆಚ್ಚಳ ಮಾಡುವಂತೆ ಕಳೆದ ಫೆಬ್ರವರಿಯಲ್ಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದವು. ಆದರೆ ಕೊರೊನಾ ಹಿನ್ನೆಲೆಯಲ್ಲಿ ಆ ಪ್ರಸ್ತಾವನೆ ಯನ್ನು ಪರಿಗಣಿಸಿರಲಿಲ್ಲ. ಈಗ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವು ವಿದ್ಯುತ್ ಸರಬರಾಜು ಕಂಪನಿಗಳ ಪ್ರಸ್ತಾವನೆ ಮೇರೆಗೆ ಪ್ರತಿ ಯೂನಿಟ್‍ಗೆ 40 ಪೈಸೆ ಹೆಚ್ಚಿಸಿದ್ದು, ಈ ಪರಿಷ್ಕøತ ದರವು ನವಂಬರ್ 1 ಅಥವಾ ನಂತರ ಮೊದಲ ಬಾರಿಗೆ ಮೀಟರ್ ಓದುವ ದಿನಾಂಕ ದಿಂದ ಅನ್ವಯವಾಗುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಈ ವರ್ಷ ಮಾರ್ಚ್ 1ರಿಂದ 2021ರ ಮಾರ್ಚ್‍ವರೆಗಿನ ಅವಧಿಗೆ ವಿದ್ಯುತ್ ದರ ಪರಿಷ್ಕರಣೆ ಮಾಡಬೇಕಾಗಿತ್ತು. ಆದರೆ, ಲಾಕ್‍ಡೌನ್ ವಿಧಿಸಿದ್ದ ಹಿನ್ನೆಲೆಯಲ್ಲಿ ಆರ್ಥಿಕತೆ ಮೇಲೆ ತೀವ್ರ ಪರಿಣಾಮ ಉಂಟಾ ಗಿತ್ತು. ಅಲ್ಲದೇ, ಶಿರಾ ಮತ್ತು ರಾಜರಾಜೇಶ್ವರಿನಗರ ಉಪ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ವಿದ್ಯುತ್ ದರ ಪರಿಷ್ಕರಣೆ ಮಾಡಿರಲಿಲ್ಲ ಎಂದು ಆದೇಶದಲ್ಲಿ ತಿಳಿಸ ಲಾಗಿದೆ. 2021ರ ಆರ್ಥಿಕ ವರ್ಷದಲ್ಲಿ ವಿದ್ಯುತ್ ಸರಬರಾಜು ಕಂಪನಿಗಳಿಂದ ಕೆಪಿಟಿಸಿಎಲ್‍ಗೆ ವಸೂಲಿ ಮಾಡಬೇಕಾದ ದರವನ್ನೂ ನಿರ್ಧರಿಸಲಾಗಿದೆ ಎಂದು ಆದೇಶದಲ್ಲಿ ಹೇಳಲಾಗಿದ್ದು, ಹೊಸ ಉಷ್ಣ ವಿದ್ಯುತ್ ತಯಾರಿಕಾ ಮೂಲಗಳಿಂದ ಮತ್ತು ನವೀಕರಿಸ ಬಹುದಾದ ಇಂಧನದ ಮೂಲಗಳಿಂದ ವಿದ್ಯುತ್ ಖರೀದಿ ಮಾಡುತ್ತಿರುವು ದರಿಂದ ಖರೀದಿ ವೆಚ್ಚವು ವರ್ಷದಿಂದ ವರ್ಷಕ್ಕೆ ಹೆಚ್ಚಳವಾಗುತ್ತಿದೆ. ಅಲ್ಲದೇ ಕಾರ್ಯ ಹಾಗೂ ನಿರ್ವಹಣೆ ವೆಚ್ಚಕ್ಕಾಗಿ ಪಡೆಯುವ ಸಾಲವೂ ಹೆಚ್ಚಾಗುತ್ತಿದೆ. ಇದರಿಂದಾಗಿ ಅನಿವಾರ್ಯವಾಗಿ ವಿದ್ಯುತ್ ದರ ಹೆಚ್ಚಳ ಮಾಡಬೇಕಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.