ಡಿ.26, 27 ಸರ್ಕಾರಿ ನೌಕರರ ಕ್ರೀಡಾಕೂಟ
ಮೈಸೂರು

ಡಿ.26, 27 ಸರ್ಕಾರಿ ನೌಕರರ ಕ್ರೀಡಾಕೂಟ

December 24, 2018

ಮೈಸೂರು: ಮೈಸೂರಿನ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಡಿ.26 ಮತ್ತು 27ರಂದು ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಕೆ.ಸುರೇಶ್ ತಿಳಿಸಿದ್ದಾರೆ.

ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಅವರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಸಂಯುಕ್ತಾಶ್ರಯದಲ್ಲಿ ಈ ಕ್ರೀಡಾಕೂಟ ನಡೆಯಲಿದ್ದು, ವಿವಿಧ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಸರ್ಕಾರಿ ನೌಕರರು ಸಕ್ರಿಯವಾಗಿ ಪಾಲ್ಗೊ ಳ್ಳಲಿದ್ದಾರೆ. ಡಿ.26ರಂದು ಬೆಳಗ್ಗೆ ಸಚಿವ ಜಿ.ಟಿ.ದೇವೇಗೌಡ ಉದ್ಘಾಟಿಸಲಿದ್ದು, ಸಚಿವ ಸಾ.ರಾ. ಮಹೇಶ್ ಕ್ರೀಡಾ ಜ್ಯೋತಿ ಹಸ್ತಾಂತರಿಸಲಿದ್ದಾರೆ. ಸಂಘದ ಅಧ್ಯಕ್ಷ ಹೆಚ್.ಕೆ. ರಾಮು ಧ್ವಜಾರೋಹಣ ನೆರವೇರಿಸಿದರೆ, ಶಾಸಕ ತನ್ವೀರ್‍ಸೇಠ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಡಿ.27ರಂದು 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದುದ, ಮೇಯರ್ ಪುಷ್ಪಲತ ಜಗನ್ನಾಥ್ ಸಮಾರೋಪ ಭಾಷಣ ಮಾಡುವರು, ನಯಿಮಾ ಸುಲ್ತಾನ ಬಹುಮಾನ ವಿತರಿಸುವರು, ಎಚ್.ಕೆ. ರಾಮು ಅಧ್ಯಕ್ಷತೆ ವಹಿಸುವರು. ಚಾಮುಂಡಿ ವಿಹಾರ ಕ್ರೀಡಾಂಗಣ, ಮೈಸೂರು ವಿವಿ ಕ್ರೀಡಾಂಗಣ, ಮಾನಸ ಗಂಗೋತ್ರಿ ಒಳಾಂಗಣ ಕ್ರೀಡಾಂಗಣ, ರಾಜ್ಯ ಸರ್ಕಾರಿ ನೌಕರರ ಸಂಘದ ಕಟ್ಟಡ, ಚಾಮ ರಾಜಪುರಂ ಮೈಸೂರು ಟೆನ್ನಿಸ್ ಕ್ಲಬ್‍ಗಳಲ್ಲಿ ವಿವಿಧ ಕ್ರೀಡೆಗಳು ನಡೆಯಲಿವೆ. ಜೊತೆಗೆ ಸಾಂಸ್ಕøತಿಕ ಸ್ಪರ್ಧೆಗಳನ್ನೂ ಆಯೋಜಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು. ಸುದ್ದಿಗೋಷ್ಠಿ ಯಲ್ಲಿ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಹೆಚ್.ಕೆ.ರಾಮು, ಪದಾಧಿಕಾರಿಗಳಾದ ಅನಂದ್, ಗೋವಿಂದರಾಜು, ನಾಗೇಶ್ ಉಪಸ್ಥಿತರಿದ್ದರು.

Translate »