ಮೈಸೂರು, ಸೆ.19- ಮೈಸೂರು ಜಿಲ್ಲಾ ಪಂಚಾಯಿತಿ ನೂತನ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾಗಿ ಡಿ.ಭಾರತಿ ಅವರು ಶನಿವಾರ ಅಧಿಕಾರ ವಹಿಸಿಕೊಂಡರು. ಇವರು ಹುಣಸೂರು ತಾಲೂಕಿನ ರಾಮಪಟ್ಟಣದವರಾಗಿದ್ದು, ಮಂಡ್ಯ ಜಿಲ್ಲೆಯಲ್ಲಿ ತಹಸೀಲ್ದಾರರಾಗಿ, ಮೈಸೂರಿನಲ್ಲಿ ಉಪವಿಭಾಗಾಧಿಕಾರಿಯಾಗಿ, ಚಾಮರಾಜನಗರದಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ, ಮೈಸೂರು ವಿಶ್ವವಿದ್ಯಾ ನಿಲಯದ ಕುಲಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಕಳೆದ ಕೆಲ ದಿನಗಳಿಂದ ಬೆಂಗಳೂರಿನಲ್ಲಿ ರಾಜ್ಯ ಚುನಾವಣಾ ಆಯೋಗದ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.
