ಡಿ.ದೇವರಾಜ ಅರಸು 104ನೇ ಜನ್ಮ ದಿನಾಚರಣೆ
ಮೈಸೂರು

ಡಿ.ದೇವರಾಜ ಅರಸು 104ನೇ ಜನ್ಮ ದಿನಾಚರಣೆ

August 19, 2019

ಮೈಸೂರು ಆ.18- ಜಿಲ್ಲಾ ಅಧಿಕಾರಿಗಳ ಕಾರ್ಯಾಲಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಡಿ.ದೇವರಾಜ ಅರಸು ಅವರ 104ನೇ ಜನ್ಮ ದಿನಾಚರಣೆಯನ್ನು ಆ.20ರಂದು ಬೆಳಿಗ್ಗೆ 11 ಗಂಟೆಗೆ ಕರ್ನಾಟಕ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ. ಮೇಯರ್ ಪುಷ್ಪಲತಾ ಜಗನ್ನಾಥ್ ಕಾರ್ಯಕ್ರಮವನ್ನು ಉದ್ಘಾ ಟಿಸಲಿದ್ದು, ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಭಾಷಣವನ್ನು ಖ್ಯಾತ ಸಾಹಿತಿ, ವಿಮರ್ಶಕ, ನಿವೃತ್ತ ಕನ್ನಡ ಪ್ರಾಧ್ಯಾಪಕ ಮಳಲಿ ವಸಂತಕುಮಾರ್ ಮಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿಪಂ ಅಧ್ಯಕ್ಷೆ ಪರಿಮಳ ಶ್ಯಾಂ, ಸಂಸದರಾದ ಪ್ರತಾಪಸಿಂಹ, ವಿ.ಶ್ರೀನಿವಾಸ್ ಪ್ರಸಾದ್, ಸುಮಲತಾ ಅಂಬರೀಷ್, ಶಾಸಕರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ತನ್ವೀರ್ ಸೇಠ್, ಕೆ.ಮಹದೇವ್, ಡಾ.ಯತೀಂದ್ರ, ಹರ್ಷವರ್ಧನ್, ಅಶ್ವಿನ್‍ಕುಮಾರ್, ಎಸ್.ಎ.ರಾಮದಾಸ್, ಅನಿಲ್‍ಕುಮಾರ್, ಎಂಎಲ್‍ಸಿಗಳಾದ ಮರಿತಿಬ್ಬೇಗೌಡ, ಎಸ್.ನಾಗ ರಾಜು, ಆರ್.ಧರ್ಮಸೇನ, ಕೆ.ವಿ.ನಾರಾಯಣಸ್ವಾಮಿ, ಕೆ.ಟಿ.ಶ್ರೀಕಂಠೇಗೌಡ, ಉಪ ಮೇಯರ್ ಶಫೀ ಅಹಮದ್, ಜಿಪಂ ಉಪಾಧ್ಯಕ್ಷೆ ಗೌರಮ್ಮ ಸೋಮಶೇಖರ್, ತಾಪಂ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಉಪಾಧ್ಯಕ್ಷ ಎನ್.ಬಿ.ಮಂಜು, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಸಾ.ರಾ.ನಂದೀಶ್ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

Translate »