ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ರಘು ಮೈಸೂರು ಜಿಲ್ಲಾ ಪ್ರವಾಸ
ಮೈಸೂರು

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ರಘು ಮೈಸೂರು ಜಿಲ್ಲಾ ಪ್ರವಾಸ

December 25, 2020

ಮೈಸೂರು,ಡಿ.24- ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ ಆರ್.ರಘು ಕೌಟಿಲ್ಯ ನಾಳೆ(ಡಿ.25) ಮೈಸೂರು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಶುಕ್ರವಾರ ಬೆಳಗ್ಗೆ 9.30ಕ್ಕೆ ಹುಣಸೂರಿಗೆ ಭೇಟಿ ನೀಡಿ, ಡಿ.ದೇವರಾಜ ಅರಸು ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ, ಬೆಳಗ್ಗೆ 10.30ಕ್ಕೆ ಅರಸು ಅವರ ಹುಟ್ಟೂರಾದ ಕಲ್ಲಹಳ್ಳಿಗೆ ತೆರಳಿ ಅವರ ಸಮಾಧಿಗೆ ಪುಷ್ಪನಮನ ಸಲ್ಲಿಸಲಿದ್ದಾರೆ. ಬೆಳಗ್ಗೆ 11.30ಕ್ಕೆ ಪಿರಿಯಾಪಟ್ಟಣ ಬಿಜೆಪಿ ಕಚೇರಿ ಯಲ್ಲಿ ಆಯೋಜಿಸಿರುವ ಮಾಜಿ ಪ್ರಧಾನಿ ದಿವಂಗತ ವಾಜಪೇಯಿ ಅವರ ಜನ್ಮ ದಿನಾಚರಣೆಯಲ್ಲಿ ಪಾಲ್ಗೊಂಡ ಬಳಿಕ ನಿಗಮದ ಕಾರ್ಯಕ್ರಮ ಕುರಿತು ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಹುಣಸೂರಿನಲ್ಲಿ ಹಿಂದುಳಿದ ವರ್ಗಗಳ ಮುಖಂಡರೊಂದಿಗೆ ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡು ಕೇಂದ್ರ ಸ್ಥಾನ ಬೆಂಗಳೂರಿಗೆ ವಾಪಸ್ಸಾಗಲಿದ್ದಾರೆ. ಡಿ.26 ಹಾಗೂ 27ರಂದು ಅವರು ಮೈಸೂರಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

 

 

Translate »