ಡಿ.ಕೆ.ಶಿವಕುಮಾರ್ ಆಸ್ತಿ ಪರಿಶೀಲಿಸಿದ ಸಿಬಿಐ
ಮೈಸೂರು

ಡಿ.ಕೆ.ಶಿವಕುಮಾರ್ ಆಸ್ತಿ ಪರಿಶೀಲಿಸಿದ ಸಿಬಿಐ

September 29, 2022

ರಾಮನಗರ,ಸೆ.೨೮-ಎಂಟು ಸಿಬಿಐ ಅಧಿ ಕಾರಿಗಳ ತಂಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರ ಕನಕಪುರ, ದೊಡ್ಡ ಆಲಹಳ್ಳಿ, ಸಂತೆ ಕೋಡಿಹಳ್ಳಿ ನಿವಾಸ ಗಳಿಗೆ ಭೇಟಿ ನೀಡಿದೆ. ಅಧಿಕಾರಿ ಗಳು ಡಿಕೆಶಿ ಅವರ ಆಸ್ತಿ ಬಗ್ಗೆ ಮಾಹಿತಿ ಪಡೆದಿದ್ದಾರೆ. ಸುಮಾರು ೧ ಗಂಟೆ ಕಾಲ ಡಿಕೆ ಶಿವಕುಮಾರ್ ನಿವಾಸದಲ್ಲಿದ್ದು, ನಂತರ ಮನೆ, ಜಮೀನು ಮತ್ತಿತರ ಸ್ಥಳಗಳಿಗೆ ತೆರಳಿ ಪರಿಶೀಲನೆ ಮಾಡಿ ದ್ದಾರೆ. ಈ ವೇಳೆ ಕನಕಪುರ ತಹಶೀಲ್ದಾರ್ ವಿಶ್ವನಾಥ್, ಪೊಲೀಸರು ಸ್ಥಳದಲ್ಲಿದ್ದರು.

ಪ್ರಕರಣದ ಹಿನ್ನೆಲೆ: ಎರಡು ವರ್ಷಗಳ ಹಿಂದೆ, ಅಂದರೆ ಅಕ್ಟೋಬರ್ ೨೦೨೦ರಲ್ಲಿ ಡಿಕೆಶಿ ವಿರುದ್ಧ ಸಿಬಿಐ ಆದಾಯ ಮೀರಿದ ಆಸ್ತಿಗಳಿಕೆ ಪ್ರಕರಣ ದಾಖಲಿಸಿತ್ತು. ಡಿ.ಕೆ.ಶಿವಕುಮಾರ್ ಮತ್ತು ಅವರ ಕುಟುಂಬದ ಸದಸ್ಯರು
ರೂ. ೭೪.೯೩ ಕೋಟಿ ಮೊತ್ತದ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆ ಎನ್ನುವುದು ಸಿಬಿಐ ಆರೋಪವಾಗಿತ್ತು. ಮಾರ್ಚ್ ೨೦೨೦ರಿಂದ ಪ್ರಕರಣದ ತನಿಖೆ ನಡೆಸುತ್ತಿದ್ದ ಸಿಬಿಐ ಅಕ್ಟೋಬರ್ ೫, ೨೦೨೦ರಲ್ಲಿ ದೆಹಲಿ, ಮುಂಬೈ ಸೇರಿದಂತೆ ೧೪ ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿ, ಕಂಪ್ಯೂಟರ್ ಹಾರ್ಡ್ಡಿಸ್ಕ್, ರೂ. ೫೭ ಲಕ್ಷ ನಗದು ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಂಡಿತ್ತು. ನಂತರದ ದಿನಗಳಲ್ಲಿ ಜಾರಿ ನಿರ್ದೇಶನಾಲಯವು ಡಿ.ಕೆ.ಶಿವಕುಮಾರ್ ಆಸ್ತಿ ಗಳಿಕೆ ಮತ್ತು ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ಆರಂಭಿಸಿತು. ಪ್ರಕರಣಕ್ಕೆ ಸಂಬAಧಿಸಿದAತೆ ಹಲವು ಬಾರಿ ದೆಹಲಿಯ ಇಡಿ ಕಚೇರಿಯಲ್ಲಿ ಡಿ.ಕೆ.ಶಿವಕುಮಾರ್ ವಿಚಾರಣೆ ಎದುರಿಸಿದ್ದರು. ಜೈಲಿಗೂ ಹೋಗಿದ್ದರು. ಪ್ರಸ್ತುತ ದೆಹಲಿಯ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಏಪ್ರಿಲ್ ೨೦೧೩ರಿಂದ ಏಪ್ರಿಲ್ ೨೦೧೮ರ ಅವಧಿಯಲ್ಲಿ ಮಂತ್ರಿಯಾಗಿದ್ದಾಗ ಡಿ.ಕೆ.ಶಿವಕುಮಾರ್ ಮತ್ತು ಕುಟುಂಬ ಸದಸ್ಯರು ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಮಾಡಿದ್ದಾರೆ ಎನ್ನುವ ಆರೋಪ ಎದುರಿಸುತ್ತಿದ್ದಾರೆ. ಸಿಬಿಐ ದಾಖಲಿಸಿರುವ ಎಫ್‌ಐಆರ್ ಆಧಾರದಲ್ಲಿಯೇ ಇಡಿ ಸಹ ತನಿಖೆ ನಡೆಸುತ್ತಿದೆ.

Translate »