ಹಾಸನದಲ್ಲಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಹಾಸನ: ಎಸ್‍ಸಿ/ಎಸ್‍ಟಿ ವಿದ್ಯಾ ರ್ಥಿಗಳಿಗೆ ಮಾರಕವಾಗಿರುವ ಸರ್ಕಾ ರದ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.ನಗರದ ಜಿಲ್ಲಾಡಳಿತದ ಆವರಣದಲ್ಲ ಜಮಾಯಿಸಿದ ಪ್ರತಿಭಟನಾಕಾರರು, ಘೋಷಣೆ ಕೂಗುವ ಮೂಲಕ ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.

ಸರ್ಕಾರ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿ ವೃದ್ಧಿಗಾಗಿ ಸಮಾಜ ಕಲ್ಯಾಣ ಇಲಾಖೆ ಯಿಂದ ರಾಜ್ಯಾದ್ಯಂತ ತೆರೆದಿರುವ ಮೆಟ್ರಿಕ್ ಪೂರ್ವ ಹಾಗೂ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಪ್ರವೇಶ ಬಯಸಿ ಬರುವ ಎಲ್ಲಾ ವಿದ್ಯಾರ್ಥಿಗಳಿಗೂ ಪ್ರವೇಶ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದ್ದು, ಶೋಷಿತ ಜನಾಂಗದ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಲಿದೆ. ಕೂಡಲೇ ಸರ್ಕಾರ ಈ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರಲ್ಲದೆ, ಬೇಡಿಕೆ ಈಡೇ ರದಿದ್ದರೆ ಉಗ್ರ ಹೋರಾಟ ಮಾಡು ವುದಾಗಿ ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಸಮಿತಿ ಜಿಲ್ಲಾ ಸಂಚಾಲಕ ಕೃಷ್ಣದಾಸ್, ಜಿಲ್ಲಾ ಸಂಘ ಟನಾ ಸಂಚಾಲಕ ಅರಸೀಕೆರೆ ಜಿ.ರಾಮು, ರಾಜು, ವೀರರಾಜು, ಮುನಿಸ್ವಾಮಿ, ಹೆಚ್. ಕೆ.ಸಂದೇಶ್, ಮರಿಜೋಸೇಫ್ ಇತರರಿದ್ದರು.