ಅ.೭ರಿಂದ ೧೩ರವರೆಗೆ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮ
ಮೈಸೂರು

ಅ.೭ರಿಂದ ೧೩ರವರೆಗೆ ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮ

October 2, 2021

ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಕನ್ನಡ-ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಇತರ ಗಣ್ಯರಿಂದ ಪೋಸ್ಟರ್ ಬಿಡುಗಡೆ

ಮೈಸೂರು, ಅ.೧(ಆರ್‌ಕೆ)- ಅಕ್ಟೋಬರ್ ೭ ರಿಂದ ೧೩ ರವರೆಗೆ ಮೈಸೂರು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.
ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರು ಶುಕ್ರವಾರ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಪೋಸ್ಟರ್ ಬಿಡುಗಡೆ ಮಾಡಿದರು. ಅಕ್ಟೋಬರ್ ೭ರಂದು ಸಂಜೆ ೬ ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಲಿದ್ದು, ಅಂದೇ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡುವರು ಎಂದು ಸಚಿವ ಸುನಿಲ್ ಕುಮಾರ್ ತಿಳಿಸಿದರು. ಅರಮನೆ ಆವರಣ ದಲ್ಲಿ ಪ್ರತೀ ದಿನ ಸಂಜೆ ೬ ರಿಂದ ೯ ಗಂಟೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು,ಕಲಾವಿದರನ್ನು ಆಯ್ಕೆ ಮಾಡಲಾಗಿದೆ. ಅಕ್ಟೋಬರ್ ೭ ರಂದು ಸಂಜೆ ೭.೩೦ ಗಂಟೆಗೆ ಬೆಂಗಳೂರಿನ ಪ್ರಭಾತ್ ಕಲಾವಿದರಿಂದ `ಕರ್ನಾಟಕ ವೈಭವ’ ನೃತ್ಯ ರೂಪಕ ಆಯೋಜಿಸಲಾಗಿದೆ. ಅ.೮ರಂದು ಶಿವಮೊಗ್ಗದ ಹೊಸಹಳ್ಳಿ ವೆಂಕಟರಾಮು ಮತ್ತು ತಂಡದಿAದ ವಯೋಲಿನ್, ವೈ.ಕೆ. ಮುದ್ದುಕೃಷ್ಣರಿಂದ ಕನ್ನಡ ಡಿಂಡಿಮ, ಅ.೯ರಂದು ಮೈಸೂರಿನ ಹೆಚ್.ಎನ್. ಭಾಸ್ಕರ್ ಮತ್ತು ತಂಡದಿAದ ಸಂಗೀತ ದರ್ಬಾರ್, ಹಂಸಲೇಖ ಮತ್ತು ತಂಡದಿAದ ದೇಸೀ ಸಂಸ್ಕೃತಿ ಹಬ್ಬ, ಅ.೧೦ರಂದು ಬೆಂಗಳೂರಿನ ಅಮೋಘವರ್ಷ ಡ್ರಮ್ಸ್ ಕಲೆಕ್ಟಿವ್‌ರಿಂದ ಮಿಶ್ರವಾದ್ಯ ಗಾಯನ, ಮೈಸೂರಿನ ಶಾಂತಲವಟ್ಟA ಮತ್ತು ತಂಡದಿAದ ನೃತ್ಯರೂಪಕವನ್ನು ಆಯೋಜಿಸಲಾಗಿದೆ.

ಅ.೧೧ರಂದು ಬಾಗಲಕೋಟೆಯ ಶ್ರೇಯಾ ಪ್ರಹ್ಲಾದ್ ಕುಲಕಣ ð ಅವರ ನೃತ್ಯರೂಪಕ, ಪೊಲೀಸ್ ಬ್ಯಾಂಡ್ ಹಾಗೂ ರಾಯಚೂರು ಶೇಷಗಿರಿದಾಸ್ ಮತ್ತು ತಂಡದಿAದ ದಾಸವಾಣ , ಅ.೧೨ರಂದು ಅದಿತಿ ಪ್ರಹ್ಲಾದ್‌ರಿಂದ ಸುಗಮ ಸಂಗೀತ, ಮುದ್ದುಮೋಹನ ತಂಡದ ಹಿಂದೂಸ್ಥಾನಿ ಸಂಗೀತ, ಪಂಡಿತ್ ಪ್ರವೀಣ್ ಗೋಡ್ಖಿಂಡಿ ಮತ್ತು ಷಡಜ ಗೋಡ್ಖಿಂಡಿ ಅವರ ಕೊಳಲು ವಾದನ ಜುಗಲ್ ಬಂದಿ, ಅ.೧೩ ರಂದು ಪಂಡಿತ್ ಜಯತೀರ್ಥ ಮೇವುಂಡಿ ಅವರ ಹಿಂದೂಸ್ಥಾನಿ ಗಾಯನ, ಬೆಂಗಳೂರಿನ ಬಿ. ಜಯಶ್ರೀ ಮತ್ತು ತಂಡದ ರಂಗ ಗೀತೆಗಳು ಹಾಗೂ ಮೈಸೂರಿನ ಶ್ರೀಧರ ಜೈನ್ ಮತ್ತು ತಂಡದ ನೃತ್ಯರೂಪಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಚಿವ ಸುನೀಲ್ ಕುಮಾರ್ ತಿಳಿಸಿದರು. ಅ. ೧೦ ರಂದು ಸೂರ್ಯೋದಯದಿಂದ ಸೂರ್ಯಾ ಸ್ತದವರೆಗೆ ಕಲಾ ಮಂದಿರದ ಆವರಣದಲ್ಲಿ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಅ.೧೧ ಮತ್ತು ೧೨ ರಂದು ಕಲಾಮಂದಿರದಲ್ಲಿ ಸಂಜೆ ೫ ಗಂಟೆಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಈ ವರ್ಷ ವಿಶೇಷವಾಗಿ ನಂಜನಗೂಡಿನ ಶ್ರೀ ನಂಜುAಡೇಶ್ವರ ದೇವಸ್ಥಾನದಲ್ಲಿ ಅ.೭ರಿಂದ ೧೩ರವರೆಗೆ ಸಂಜೆ ೭ ರಿಂದ ರಾತ್ರಿ ೯ ಗಂಟೆಯವರೆಗೆ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದರು. ಸಂಸದ ಪ್ರತಾಪ್ ಸಿಂಹ, ಶಾಸಕ ಬಿ.ಹರ್ಷವರ್ಧನ್, ಮುಡಾ ಅಧ್ಯಕ್ಷ ಹೆಚ್.ವಿ.ರಾಜೀವ್, ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಅಡಿಷನಲ್ ಡಿಸಿ ಬಿ.ಎಸ್.ಮಂಜುನಾಥಸ್ವಾಮಿ, ನಗರ ಪೊಲೀಸ್ ಆಯುಕ್ತ ಡಾ. ಚಂದ್ರಗುಪ್ತ, ಅಡಿಷನಲ್ ಎಸ್ಪಿ ಆರ್.ಶಿವಕುಮಾರ್, ಮುಡಾ ಆಯುಕ್ತ ಡಾ. ಡಿ.ಬಿ.ನಟೇಶ್, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎ.ಎಂ.ಯೋಗೀಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಂಟಿ ನಿರ್ದೇಶಕ ಮಲ್ಲಿಕಾರ್ಜುನಸ್ವಾಮಿ, ಸಹಾಯಕ ನಿರ್ದೇಶಕ ಎ.ಚೆನ್ನಪ್ಪ, ವಾರ್ತಾ ಮತ್ತು ಪ್ರಚಾರ ಇಲಾಖೆ ಸಹಾಯಕ ನಿರ್ದೇಶಕ ಆರ್.ರಾಜು ಹಾಗೂ ಇತರರು ಈ ಸಂದರ್ಭ ಉಪಸ್ಥಿತರಿದ್ದರು.

ಮೈಸೂರು ದಸರಾ ವೆಬ್‌ಸೈಟ್ ಉದ್ಘಾಟನೆ ನಾಡಹಬ್ಬ ನೋಡಲಿಕ್ಕೆ ಭೇಟಿ ನೀಡಿ: www.mysoredasara.gov.in

ಮೈಸೂರು, ಅ.೧- ವಿಶ್ವವಿಖ್ಯಾತ ಮೈಸೂರು ದಸರಾ-೨೦೨೧ರ ವೆಬ್‌ಸೈಟ್ ಅನ್ನು ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಇಂದು ಬೆಳಗ್ಗೆ ಮೈಸೂರು ಅರಮನೆ ಆಡಳಿತ ಮಂಡಳಿಯಲ್ಲಿ ಉದ್ಘಾಟಿಸಿದರು.

ಕೋವಿಡ್ ಹಿನ್ನೆಲೆಯಲ್ಲಿ ಈ ಬಾರಿಯೂ ಸರಳ ಹಾಗೂ ಸಾಂಪ್ರದಾಯಿಕ ದಸರಾ ಆಚರಣೆ ಮಾಡಲಾಗುತ್ತಿದೆ. ದಸರಾ ಕಾರ್ಯಕ್ರಮಗಳು ವರ್ಚುವಲ್ ಆಗಿ ಪ್ರಸಾರವಾಗಲಿದೆ. ವೆಬ್ ಸೈಟ್, ಯೂಟ್ಯೂಬ್, ಫೇಸ್‌ಬುಕ್‌ನಲ್ಲಿ ಕಾರ್ಯಕ್ರಮ ಗಳು ನೇರ ಪ್ರಸಾರವಾಗಲಿದೆ ಎಂದು ಹೇಳಿದರು. ಜಂಬೂ ಸವಾರಿ, ಮೆರವಣ ಗೆ, ದಸರಾ ಉದ್ಘಾಟನೆ, ಅರಮನೆ ಆವರಣ ದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿಯನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಮೈಸೂರು ಅರಮನೆ, ಮೃಗಾಲಯ ನಡೆದು ಬಂದ ಹಾದಿ ಸೇರಿದಂತೆ ಸಂಪೂರ್ಣ ವಿವರಗಳು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಲಭ್ಯ ವಾಗಲಿದೆ. ಎನ್.ಐ.ಸಿ.ಯ ಡೊಮೇನ್‌ನಲ್ಲಿ ಈ ವೆಬ್‌ಸೈಟ್ ಅಭಿವೃದ್ಧಿ ಪಡಿಸಲಾಗಿದೆ. ದಸರಾ ಹಿನ್ನೆಲೆ, ಉದ್ಘಾಟಕರ ಪರಿಚಯ, ಉಪಸಮಿತಿಗಳ ವಿವರ, ಕಾರ್ಯಕ್ರಮಗಳ ಪಟ್ಟಿ, ಹಿಂದಿನ ದಸರಾ ಮಹೋತ್ಸವದ ಫೋಟೋ, ಪ್ರವಾಸಿ ತಾಣಗಳ ಸಂಪೂರ್ಣ ಮಾಹಿತಿಯನ್ನು ಒಳಗೊಂಡಿರಲಿದೆ. ದೇಶಿ-ವಿದೇಶಿಗರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಇಂಗ್ಲಿಷ್ ನಲ್ಲಿ ಕೂಡ ಮಾಹಿತಿ ಪ್ರಕಟಿಸಲಾಗಿದೆ ಎಂದು ತಿಳಿಸಿದರು. ಕೋವಿಡ್ ಮೂರನೇ ಅಲೆ ಹಾಗೂ ಮೈಸೂರು ಜನತೆಯ ಹಿತದೃಷ್ಟಿಯಿಂದ ಸರಳ ಮತ್ತುಸಾಂಪ್ರದಾಯಿಕವಾಗಿ ದಸರಾ ಆಚರಣೆ ಮಾಡಲಾಗುತ್ತದೆ. ಎಲ್ಲೂ ಕೂಡ ಕೋವಿಡ್ ನಿಯಮಗಳನ್ನು ಮೀರದಂತೆ ಸುರಕ್ಷಿತವಾಗಿ ದಸರಾ ಆಚರಣೆ ಮಾಡಲಾಗುತ್ತದೆ ಎಂದರು. ಕಾರ್ಯಕ್ರಮದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಮುಡಾ ಅಧ್ಯಕ್ಷರಾದ ಹೆಚ್.ವಿ.ರಾಜೀವ್, ಅರಗು ಮತ್ತು ಬಣ್ಣದ ಕಾರ್ಖಾನೆಯ ಅಧ್ಯಕ್ಷ ಫಣ Ãಶ್, ರಾಜ್ಯ ಸಫಾಯಿ ಕರ್ಮಚಾರಿ ಆಯೋಗದ ಅಧ್ಯಕ್ಷರಾದ ಎಂ.ಶಿವಣ್ಣ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪಂಚಾಯತ್ ಸಿಇಒ ಎ.ಎಂ.ಯೋಗೀಶ್, ಅಪರ ಜಿಲ್ಲಾಧಿಕಾರಿ ಡಾ.ಬಿ.ಎಸ್. ಮಂಜುನಾಥಸ್ವಾಮಿ, ಡಿಸಿಪಿ ಪ್ರದೀಪ್ ಗುಂಟಿ, ಹೆಚ್ಚುವರಿ ಜಿಲ್ಲಾ ಪೊಲೀಸ್ ಅಧೀಕ್ಷಕ ಶಿವಕುಮಾರ್, ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ, ವೆಬ್‌ಸೈಟ್ ನೊಡೆಲ್ ಅಧಿಕಾರಿ ಆರ್.ರಾಜು, ಜಿಲ್ಲಾ ಎನ್.ಐ.ಸಿ ಅಧಿಕಾರಿ ಸುದರ್ಶನ್, ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ ಸೇರಿದಂತೆ ಇನ್ನಿತರ ಉಪಸ್ಥಿತರಿದ್ದರು.

Translate »