ದಸರಾ ಕನ್ನಡ ಪುಸ್ತಕ ಮೇಳ: ಮಳಿಗೆಗೆ ಅರ್ಜಿ ಆಹ್ವಾನ
ಮೈಸೂರು

ದಸರಾ ಕನ್ನಡ ಪುಸ್ತಕ ಮೇಳ: ಮಳಿಗೆಗೆ ಅರ್ಜಿ ಆಹ್ವಾನ

September 29, 2018

ಮೈಸೂರು: ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮೈಸೂರು ದಸರಾ ಉತ್ಸವ ಸಮಿತಿ ಸಂಯುಕ್ತಾಶ್ರಯದಲ್ಲಿ ಅಕ್ಟೋಬರ್ 10ರಿಂದ 19ವರೆಗೆ ಮೈಸೂರಿನಲ್ಲಿ ದಸರಾ ಕನ್ನಡ ಪುಸ್ತಕ ಮೇಳವನ್ನು ಕಾಡಾ ಮೈದಾನ ಇಲ್ಲಿ ನಡೆಯಲಿದೆ. ಈ ಪುಸ್ತಕ ಮೇಳದಲ್ಲಿ ಪ್ರಕಾಶನ ಸಂಸ್ಥೆ /ಪ್ರದರ್ಶಕರು ಭಾಗವಹಿಸಬಹುದಾಗಿದ್ದು, 50 ಮಳಿಗೆಗಳನ್ನು ಹಂಚಿಕೆ ಮಾಡಲಾಗುವುದು. ನಿಗದಿತ ಅರ್ಜಿಯನ್ನು ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಅಥವಾ ಆಯಾ ಜಿಲ್ಲೆಯ ಸಹಾಯಕ ನಿರ್ದೇಶಕರು, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಅಥವಾ ವೆಬ್‍ಸೈಟ್ www.kannada pustaka pradhikara.com ಪಡೆದು ಮಳಿಗೆಯೊಂದಕ್ಕೆ ರೂ.2,000/-ಬಾಡಿಗೆ ಹಾಗೂ ರೂ.1,000/- ಭದ್ರತಾ ಠೇವಣಿ ಡಿಡಿಯನ್ನು ಪ್ರತ್ಯೇಕವಾಗಿ ಆಡಳಿತಾಧಿಕಾರಿ ಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಬೆಂಗಳೂರು ಇವರ ಹೆಸರಿನಲ್ಲಿ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಡಿ.ಡಿ.ಯೊಂದಿಗೆ ಅ.6ರಂದು ಸಂಜೆ 5 ಗಂಟೆಗೆ ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು -560002 ಇಲ್ಲಿಗೆ ಸಲ್ಲಿಸಬಹುದು. ಮಾಹಿತಿಗೆ ದೂ:080-22484516/22107704 ಸಂಪರ್ಕಿಸಿ.

Translate »