ಕೇಂದ್ರ-ರಾಜ್ಯ ಸರ್ಕಾರದ ಕೋವಿಡ್-19 ಮಾರ್ಗಸೂಚಿಗೆ ಅನುಗುಣವಾಗಿ ದಸರಾ ಆಚರಣೆ: ಸಚಿವ ಎಸ್‍ಟಿಎಸ್
ಮೈಸೂರು

ಕೇಂದ್ರ-ರಾಜ್ಯ ಸರ್ಕಾರದ ಕೋವಿಡ್-19 ಮಾರ್ಗಸೂಚಿಗೆ ಅನುಗುಣವಾಗಿ ದಸರಾ ಆಚರಣೆ: ಸಚಿವ ಎಸ್‍ಟಿಎಸ್

October 16, 2020

ಮೈಸೂರು, ಅ.15(ಎಂಟಿವೈ)- ದಸರಾ ಮಹೋತ್ಸವವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಕೋವಿಡ್-19 ಮಾರ್ಗಸೂಚಿ ಅನುಸಾರವಾಗಿಯೇ ಆಚರಿಸಲಾಗು ತ್ತಿದ್ದು, ತಜ್ಞರ ಸಮಿತಿ ಶಿಫಾರಸಿನ ಮೇರೆಗೆ ಅಗತ್ಯ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ಮೈಸೂರಲ್ಲಿ ಪತ್ರಕರ್ತರೊಂದಿಗೆ ಮಾತ ನಾಡಿದ ಅವರು, ಕೊರೊನಾ ಸೋಂಕು ಹರಡುವು ದನ್ನು ತಡೆಯುವ ನಿಟ್ಟಿನಲ್ಲಿ ಈ ಬಾರಿ ದಸರಾ ಮಹೋತ್ಸವ ವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಸಾಂಸ್ಕøತಿಕ ಕಾರ್ಯಕ್ರಮಕ್ಕೆ 50, ಉದ್ಘಾಟನಾ ಕಾರ್ಯಕ್ರಮಕ್ಕೆ 200 ಮಂದಿ ಹಾಗೂ ಜಂಬೂ ಸವಾರಿ ವೀಕ್ಷಣೆಗೆ 300 ಮಂದಿಗಷ್ಟೇ ಅವಕಾಶ ನೀಡಲಾಗಿದೆ. ತಜ್ಞರ ಸಮಿತಿಯು ಪರಿಶೀಲನೆ ನಂತರ ನೀಡಿದ ಸಲಹೆ ಗಳಿಗೆ ಅನುಸಾರವಾಗಿಯೇ ಅಗತ್ಯ ಸಿದ್ಧತೆಗಳನ್ನು ಮಾಡಿ ಕೊಳ್ಳಲಾಗುತ್ತಿದೆ. ಅರಮನೆ, ಚಾಮುಂಡಿಬೆಟ್ಟದಲ್ಲಿ ಸಿದ್ಧತೆ ಪೂರ್ಣಗೊಂಡಿದೆ ಎಂದು ವಿವರಿಸಿದರು.

ದಸರಾ ಮಹೋತ್ಸವ ಸಂದರ್ಭ ಹೆಚ್ಚು ಜನರು ಮೈಸೂರಿಗೆ ಬರುವುದರಿಂದ ಕೊರೊನಾ ಸೋಂಕು ಹರಡಬಾರದೆಂಬ ಮುನ್ನೆಚ್ಚರಿಕೆಯಿಂದ ಜಿಲ್ಲಾಡಳಿತ ಕೆಲವು ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಿದೆ. ಮೈಸೂರು ಮೃಗಾಲಯ, ಚಾಮುಂಡಿ ಬೆಟ್ಟ, ನಂಜನಗೂಡು, ಕೆಆರ್‍ಎಸ್‍ಗೆ ಹೆಚ್ಚಿನ ಜನರು ಭೇಟಿ ನೀಡುತ್ತಾರೆ ಎಂಬ ಮಾಹಿತಿ ಮೇರೆಗೆ ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸುವ ತೀರ್ಮಾನ ಕೈಗೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ಕೋವಿಡ್ -19 ಮಾರ್ಗಸೂಚಿಗೆ ಧಕ್ಕೆಯಾಗದಂತೆ, ಎಲ್ಲಾ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡ ಬೇಕಿದೆ. ಕೊರೊನಾ ಸೋಂಕು ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ನಿರ್ಬಂಧ ಅನಿವಾರ್ಯ ಎಂದರು.

ಉಪ ಚುನಾವಣೆಯಲ್ಲಿ ಗೆಲುವು ನಮ್ಮದೇ: ಮುಂದಿನ ತಿಂಗಳು ನಡೆಯಲಿರುವ ಉಪ ಚುನಾವಣೆಯಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ನಗರ ಹಾಗೂ ಶಿರಾದಲ್ಲಿ ಬಿಜೆಪಿ ಅಭ್ಯರ್ಥಿ ಗಳ ಗೆಲುವು ಕಟ್ಟಿಟ್ಟಬುತ್ತಿ. ನನಗೆ ಆರ್‍ಆರ್ ಕ್ಷೇತ್ರದ ಉಸ್ತುವಾರಿ ನೀಡಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಮುನಿರತ್ನ ಅವರೊಂದಿ ಗಿದ್ದೆ. ದಸರಾ ಹಿನ್ನೆಲೆಯಲ್ಲಿ ಈಗ ಮೈಸೂರಿಗೆ ಬಂದಿದ್ದೇನೆ. ಈ ಕಾರ್ಯಕ್ರಮ ಮುಗಿಸಿ ಬೆಂಗಳೂರಿಗೆ ವಾಪಸಾಗುತ್ತೇನೆ. ಚುನಾವಣೆ ಪ್ರಚಾರದಲ್ಲಿ ತೊಡಗುತ್ತೇನೆ. ನಮ್ಮ ಅಭ್ಯರ್ಥಿ ಮುನಿರತ್ನ 30-40 ಸಾವಿರ ಮತಗಳ ಅಂತರದಿಂದ ಗೆಲವು ಸಾಧಿಸುತ್ತಾರೆ. ನಾನು ಮತ್ತು ಮುನಿರತ್ನ ಬೆಂಗಳೂರಲ್ಲಿಸತತ ಗೆಲುವು ಸಾಧಿಸುತ್ತಾ ಬಂದಿದ್ದೇವೆ. ಜನರ ಅಭಿಲಾಶೆ ನಮಗೆ ತಿಳಿದಿದೆ. ಆರ್‍ಆರ್ ನಗರದಲ್ಲಿ 9 ವಾರ್ಡ್‍ಗಳಿದ್ದು, ಮುನಿರತ್ನ ಈ ಮೊದಲೇ ಎಲ್ಲಾ ವಾರ್ಡ್‍ಗಳಲ್ಲೂ ಶೇ.80 ರಷ್ಟು ಅಭಿವೃದ್ಧಿ ಕಾರ್ಯ ಕೈಗೊಂಡಿದ್ದಾರೆ. ಅಭಿವೃದ್ಧಿ ಕಾರ್ಯ ಆಧರಿಸಿ ಗೆಲುವು ಸಾಧಿಸ ಲಿದ್ದಾರೆ. ಶಿರಾ ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿ ಗೆಲುವು ನಿಶ್ಚಿತ. ಎರಡೂ ಕ್ಷೇತ್ರ ಗಳಲ್ಲೂ ಗೆಲುವು ಬಿಜೆಪಿಯದ್ದೇ ಆಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜೆಡಿಎಸ್-ಬಿಜೆಪಿ ನಡುವೆ ಒಳಒಪ್ಪಂದವಾಗಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ಯಾವ ಒಳ ಒಪ್ಪಂದವೂ ಇಲ್ಲ, ಅದರ ಅವಶ್ಯಕತೆಯೂ ನಮಗಿಲ್ಲ ಎಂದರು. ನಾನು ಮತ್ತು ವಿಶ್ವನಾಥ್ ಇಬ್ಬರೂ ಚೆನ್ನಾಗಿz್ದÉೀವೆ. ಬಾಂಬೆಯಲ್ಲೂ ಜತೆಗಿದ್ದೆವು. ನಮ್ಮಿಬ್ಬರಲ್ಲಿ ವೈಮನಸ್ಸು ಇಲ್ಲ. ಅವರಿಗೆ ಸಚಿವ ಸ್ಥಾನ ಕೊಡೋದು ಸಿಎಂ ಅವರ ಪರಮಾಧಿಕಾರ. ವಿಶ್ವನಾಥ್ ಅವರಿಗೆ ವಿಧಾನಪರಿಷತ್ ಸದಸ್ಯ ಸ್ಥಾನ ನೀಡುವಂತೆ ಹೆಚ್ಚು ಒತ್ತಡ ಹಾಕಿದ್ದವರಲ್ಲಿ ನಾನೂ ಒಬ್ಬ ಎಂಬುದು ಎಲ್ಲರಿಗೂ ತಿಳಿದ ವಿಚಾರ ಎಂದು ಪ್ರತಿಕ್ರಿಯಿಸಿದರು.

Translate »