ಸೆ.12ರಂದು ಮೈಸೂರಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ
ಮೈಸೂರು

ಸೆ.12ರಂದು ಮೈಸೂರಲ್ಲಿ ದಸರಾ ಕಾರ್ಯಕಾರಿ ಸಮಿತಿ ಸಭೆ

September 10, 2020

ಮೈಸೂರು, ಸೆ.9(ಆರ್‍ಕೆ)-ಸೆಪ್ಟೆಂಬರ್ 12ರಂದು ಸಂಜೆ 4 ಗಂಟೆಗೆ ಮೈಸೂರಿನ ಅರಮನೆ ಆವರಣದಲ್ಲಿ ರುವ ಅರಮನೆ ಮಂಡಳಿ ಕಚೇರಿ ಸಭಾಂಗಣದಲ್ಲಿ ದಸರಾ ಕಾರ್ಯಕಾರಿ ಸಮಿತಿಯ ಮೊದಲ ಸಭೆ ನಡೆಯಲಿದೆ.

ದಸರಾ ಕಾರ್ಯಕಾರಿ ಸಮಿತಿ ಅಧ್ಯಕ್ಷರಾದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯಲ್ಲಿ ಈ ಬಾರಿಯ ದಸರಾ ಮಹೋತ್ಸವದ ಬಗ್ಗೆ ರೂಪು-ರೇಷೆಗಳ ಕುರಿತಂತೆ ಚರ್ಚೆ ನಡೆಯಲಿದ್ದು, ಕೈಗೊಂಡಿರುವ ಸಿದ್ಧತೆಯ ಪ್ರಗತಿಯನ್ನು ಪರಿಶೀಲಿಸಲಾಗುವುದು.

ಮೆರವಣಿಗೆಯಲ್ಲಿ ಭಾಗವಹಿಸುವ ಆನೆಗಳನ್ನು ಶಿಬಿರ ಗಳಿಂದ ಕರೆತರುವುದು, ಅರಮನೆಗೆ ಬರಮಾಡಿಕೊಳ್ಳು ವುದು, ತಾಲೀಮು, ಅರಮನೆ ಆವರಣದಲ್ಲೇ ಜಂಬೂ ಸವಾರಿ ಮೆರವಣಿಗೆ ನಡೆಸಲು ಮಾಡಿಕೊಳ್ಳಬೇಕಾದ ಸಿದ್ಧತೆ ಕುರಿತಂತೆ ಜಿಲ್ಲಾ ಉಸ್ತುವಾರಿ ಸಚಿವರು ಅಧಿಕಾರಿ ಗಳಿಗೆ ಸಲಹೆ ನೀಡಲಿದ್ದಾರೆ. ಮೇಯರ ತಸ್ನೀಂ, ಜಿಲ್ಲಾ ಪಂಚಾಯ್ತಿ ಅಧ್ಯಕ್ಷೆ ಪರಿಮಳಾ ಶ್ಯಾಂ, ಸಂಸದ ಪ್ರತಾಪ್ ಸಿಂಹ, ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳ ಜನಪ್ರತಿನಿಧಿಗಳು, ಮೈಸೂರು ಜಿಲ್ಲಾಧಿಕಾರಿ ಬಿ.ಶರತ್, ಎಡಿಸಿ ಮಂಜುನಾಥಸ್ವಾಮಿ, ನಗರ ಪೊಲೀಸ್ ಕಮೀ ಷ್ನರ್ ಡಾ.ಚಂದ್ರಗುಪ್ತ, ಎಸ್ಪಿ ಸಿ.ಬಿ.ರಿಷ್ಯಂತ್, ನಗರ ಪಾಲಿಕೆ ಕಮೀಷ್ನರ್ ಗುರುದತ್ ಹೆಗ್ಗಡೆ, ಮುಡಾ ಕಮೀಷ್ನರ್ ಡಿ.ಬಿ.ನಟೇಶ ಸೇರಿದಂತೆ ದಸರಾ ಕಾರ್ಯಕಾರಿ ಸಮಿ ತಿಯ ಎಲ್ಲಾ ಸದಸ್ಯರು ಸಭೆಯಲ್ಲಿ ಭಾಗವಹಿಸುವರು.

ಪೂರ್ವಭಾವಿ ಸಭೆ: ಸೆ.12ರಂದು ದಸರಾ ಕಾರ್ಯಕಾರಿ ಸಭೆ ನಡೆಯುವುದರಿಂದ ಜಿಲ್ಲಾಧಿಕಾರಿ ಬಿ.ಶರತ್ ಅವರು ತಮ್ಮ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿ, ಮಂಗಳವಾರ ಬೆಂಗಳೂರಿನಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯಮಂತ್ರಿಗಳು ನೀಡಿರುವ ಸೂಚನೆಯಂತೆ ದಸರಾ ಕಾರ್ಯಕ್ರಮಗಳನ್ನು ಏರ್ಪಡಿಸುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಜಂಬೂ ಸವಾರಿ ಆನೆಗಳನ್ನು ಕರೆತರುವುದು, ಅವುಗಳ ಪೋಷಣೆ, ತಾಲೀಮು, ಅರಮನೆ ಆವರಣದಲ್ಲಿ ಸಿದ್ಧತೆ, ಧಾರ್ಮಿಕ ಕಾರ್ಯಕ್ರಮಗಳು, ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಸ್ಥಾನದ ಎದುರು ದಸರಾ ಮಹೋತ್ಸವ ಉದ್ಘಾಟನೆಗೆ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಳ್ಳುವ ಬಗ್ಗೆಯೂ ಜಿಲ್ಲಾಧಿಕಾರಿಗಳು ಅಧೀನಾ ಧಿಕಾರಿಗಳೊಂದಿಗೆ ಚರ್ಚಿಸಿದರು.

ಕಾರ್ಯಕಾರಿ ಸಮಿತಿ ಸಭೆಗೆ ನಡಾವಳಿ ಸಿದ್ಧಪಡಿಸು ವಂತೆ ಸೂಚನೆ ನೀಡಿದ ಅವರು, ಜಿಲ್ಲಾಡಳಿತ ಕೈಗೊಂಡಿ ರುವ ಪೂರ್ವ ಸಿದ್ಧತೆ ಕುರಿತಂತೆ ಪರಿಶೀಲನೆ ನಡೆಸಿ ಜಿಲ್ಲಾ ಉಸ್ತುವಾರಿ ಸಚಿವರಿಗೆ ವಿವರಿಸಲು ಲಿಖಿತ ಟಿಪ್ಪಣಿ ತಯಾರಿಸುವಂತೆ ನಿರ್ದೇಶನ ನೀಡಿದರು.

ಸ್ಥಳ ಪರಿಶೀಲನೆ: ಇಂದು ಸಂಜೆ ಹೆಚ್ಚುವರಿ ಜಿಲ್ಲಾಧಿಕಾರಿ ಮಂಜುನಾಥಸ್ವಾಮಿ ಅವರು ಧಾರ್ಮಿಕ ದತ್ತಿ ಇಲಾಖೆ, ಅರಣ್ಯ ಇಲಾಖೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಸಹಾಯಕ ನಿರ್ದೇಶಕ, ದೇವರಾಜ ಉಪ ವಿಭಾಗದ ಎಸಿಪಿ, ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್. ಸುಬ್ರಮಣ್ಯ, ಅರಮನೆ ಭದ್ರತಾ ಮಂಡಳಿ ಎಸಿಪಿ ಹಾಗೂ ಇತರ ಅಧಿಕಾರಿಗಳೊಂದಿಗೆ ಅರಮನೆಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ವಿಜಯ ದಶಮಿಯಂದು ಅರಮನೆ ಮುಂಭಾಗ ನಡೆಯುವ ಕಾರ್ಯಕ್ರಮಗಳ ಬಗ್ಗೆ ನಕ್ಷೆ ತಯಾರಿಸಲು ಅಗತ್ಯ ಮಾಹಿತಿ ಕಲೆ ಹಾಕಿರುವ ಎಡಿಸಿ ಮಂಜುನಾಥ ಸ್ವಾಮಿ ಅವರು, ಜಿಲ್ಲಾಧಿಕಾರಿಗಳಿಗೆ ವಿವರಣೆ ನೀಡಿದ್ದಾರೆ.

 

 

Translate »