ಇಂದಿನಿಂದ ಯುವ ಸಂಭ್ರಮ
ಮೈಸೂರು

ಇಂದಿನಿಂದ ಯುವ ಸಂಭ್ರಮ

September 30, 2018

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2018 ಸೆ.30ರಿಂದ ಅ.7ರವರೆಗೆ ಸಂಜೆ 6ರಿಂದ 10 ಗಂಟೆಯವರೆಗೆ ಯುವ ಸಂಭ್ರಮ ಮೈಸೂರು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ನಡೆಯಲಿದೆ.

ಸೆ.30ರಂದು ಸಂಜೆ 6 ಗಂಟೆಗೆ ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡರು ಕಾರ್ಯಕ್ರಮ ಉದ್ಘಾಟಿಸುವರು.

ಶಾಸಕ ಎಲ್.ನಾಗೇಂದ್ರ ಅಧ್ಯಕ್ಷತೆ ವಹಿಸುವರು. ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಜಯಮಾಲ, ಜಿಪಂ ಅಧ್ಯಕ್ಷೆ ನಯಿಮಾ ಸುಲ್ತಾನ ನಜಿûೀರ್ ಅಹಮದ್, ಸಂಸದರಾದ ಪ್ರತಾಪ್ ಸಿಂಹ, ಆರ್.ಧ್ರುವನಾರಾಯಣ್, ಶಾಸಕರಾದ ಎ.ಹೆಚ್.ವಿಶ್ವನಾಥ್, ಎಸ್.ಎ.ರಾಮದಾಸ್, ಮರಿತಿಬ್ಬೇಗೌಡ, ತನ್ವೀರ್ ಸೇಠ್, ಕೆ.ಟಿ.ಶ್ರೀಕಂಠೇಗೌಡ, ಎಸ್.ನಾಗ ರಾಜು, ಆರ್.ಧರ್ಮಸೇನ, ಕೆ.ವಿ.ನಾರಾಯಣ ಸ್ವಾಮಿ, ಕೆ. ಮಹದೇವ, ಎಲ್.ನಾಗೇಂದ್ರ, ಬಿ.ಹರ್ಷವರ್ಧನ್, ಡಾ.ಯತೀಂದ್ರ, ಅಶ್ವಿನ್‍ಕುಮಾರ್, ಅನಿಲ್ ಕುಮಾರ್, ಜಿಪಂ ಉಪಾಧ್ಯಕ್ಷ ಜಿ.ನಟರಾಜ್, ತಾಪಂ ಅಧ್ಯಕ್ಷೆ ಕಾಳಮ್ಮ ಕೆಂಪರಾಮಯ್ಯ, ಉಪಾಧ್ಯಕ್ಷ ಎನ್.ಬಿ.ಮಂಜು ಹಾಗೂ ಇನ್ನಿತರ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

Translate »