ಮಡಿಕೇರಿ-ಸಂಪಾಜೆ, ಮಡಿಕೇರಿ-ಸೋಮವಾರಪೇಟೆ ರಸ್ತೆ ಸರಿಪಡಿಸುವ ಬಗ್ಗೆ ಡಿಸಿ ಸಮಾಲೋಚನೆ
ಕೊಡಗು

ಮಡಿಕೇರಿ-ಸಂಪಾಜೆ, ಮಡಿಕೇರಿ-ಸೋಮವಾರಪೇಟೆ ರಸ್ತೆ ಸರಿಪಡಿಸುವ ಬಗ್ಗೆ ಡಿಸಿ ಸಮಾಲೋಚನೆ

September 1, 2018

ಮಡಿಕೇರಿ: ಮಡಿಕೇರಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಹಾಗೂ ಮಡಿಕೇರಿ-ಸೋಮವಾರಪೇಟೆ ರಾಜ್ಯ ಹೆದ್ದಾರಿ ಮಾರ್ಗದ ರಸ್ತೆ ಸರಿಪಡಿಸುವ ನಿಟ್ಟಿನಲ್ಲಿ ಗಡಿ ರಸ್ತೆ ಪ್ರಾಧಿಕಾರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಲೋಕೋಪಯೋಗಿ ಇಲಾಖೆ ಎಂಜಿ ನಿಯರ್‍ಗಳೊಂದಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಚರ್ಚೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರ ವಾರ ಸಮಾಲೋಚನೆ ನಡೆಸಿದ ಜಿಲ್ಲಾಧಿ ಕಾರಿ ಅವರು ಮಡಿಕೇರಿ-ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಹಾಗೂ ಮಡಿಕೇರಿ-ಸೋಮ ವಾರಪೇಟೆ ರಾಜ್ಯ ಹೆದ್ದಾರಿ ಮಾರ್ಗದ ರಸ್ತೆ ಯಲ್ಲಿ ವಾಹನಗಳ ಓಡಾಟಕ್ಕೆ ಉತ್ತಮ ರಸ್ತೆ ನಿರ್ಮಾಣ ಮಾಡುವ ಬಗ್ಗೆ ಸಂಬಂಧಪಟ್ಟ ಎಂಜಿನಿಯರ್‍ಗಳಿಂದ ಮಾಹಿತಿ ಪಡೆದರು.

ಮಡಿಕೇರಿ-ಸಂಪಾಜೆ ಮಾರ್ಗದ ರಸ್ತೆ ಯಲ್ಲಿ ಭೂಕುಸಿತ ಉಂಟಾಗಿ ರಸ್ತೆಯಲ್ಲಿನ ಮಣ್ಣು ತೆಗೆದರೂ ಸಹ ಮತ್ತೆ ಮಣ್ಣು ಕುಸಿಯುತ್ತಿದೆ. ಆದ್ದರಿಂದ ಯಾವ ರೀತಿ ರಸ್ತೆ ನಿರ್ಮಾಣ ಮಾಡಬೇಕು. ಹಾಗೆಯೇ ಮಡಿಕೇರಿ-ಸೋಮವಾರಪೇಟೆ ರಸ್ತೆ ಭೂಕುಸಿತ ಉಂಟಾಗಿದೆ. ಆದ್ದರಿಂದ ಈ ಮಾರ್ಗದಲ್ಲಿ ಯಾವ ರೀತಿ ರಸ್ತೆ ನಿರ್ಮಾಣ ಮಾಡಬೇಕು ಎಂಬ ಬಗ್ಗೆ ಸುದೀರ್ಘ ಚರ್ಚೆ ನಡೆಯಿತು.
ಸದ್ಯ ತಾತ್ಕಾಲಿಕವಾಗಿ ಸಾರ್ವಜನಿಕರಿಗೆ ಓಡಾಡಲು ಅನುಕೂಲ ಮಾಡುವ ನಿಟ್ಟಿ ನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕಿದ್ದು, ಈ ಸಂಬಂಧ ಸಮಗ್ರ ವರದಿ ನಿಡುವಂತೆ ಸಂಬಂಧಪಟ್ಟ ಎಂಜಿನಿಯರ್‍ಗಳಿಗೆ ಜಿಲ್ಲಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ನಿರ್ದೇಶನ ನೀಡಿದರು. ಗಡಿ ರಸ್ತೆ ಪ್ರಾಧಿ ಕಾರದ ಸೂಪರಿಡೆಂಟ್ ಎಂಜಿನಿಯರ್ ಆರ್.ಎಸ್.ರಾವ್ ಅವರು ಉತ್ತರಾಖಂಡ ರಾಜ್ಯದಲ್ಲಿನ ಅತಿ ಎತ್ತರದ ಬೆಟ್ಟಗುಡ್ಡ ಪ್ರದೇಶದಲ್ಲಿ ರಸ್ತೆ ನಿರ್ಮಾಣ ಮಾಡಿರುವ ಬಗ್ಗೆ ಮಾಹಿತಿ ನೀಡಿದರು. ಐಎಎಸ್ ಅಧಿಕಾರಿ ಚಾರುಲತ ಸೋಮಲ್, ಗಡಿ ರಸ್ತೆ ಪ್ರಾಧಿಕಾರದ ಮನೀಶ್ ಕುಮಾರ್, ಲೋಕೋಪಯೋಗಿ ಇಲಾಖೆಯ ಇಇ ಇಬ್ರಾಹಿಂ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಾಯಕ ಎಂಜಿನಿಯರ್ ರಮೇಶ್ ಇತರರು ಇದ್ದರು.

Translate »