ಮೈಸೂರು ಉಸ್ತುವಾರಿ ಸಚಿವ ಸೋಮಶೇಖರ್ ಸ್ಪಷ್ಟನೆ
ಬೆಂಗಳೂರು,ಅ.12(ಕೆಎಂಶಿ)-ದಸರಾ ಕಾರ್ಯಕ್ರಮಗಳಲ್ಲಿ ಎಷ್ಟು ಜನರಿಗೆ ಪ್ರವೇಶಕ್ಕೆ ಅನುಮತಿ ನೀಡಬೇಕೆಂಬ ತೀರ್ಮಾನವನ್ನು ಜಿಲ್ಲಾಧಿಕಾರಿಯವರೇ ತೆಗೆದುಕೊಳ್ಳಲಿ ದ್ದಾರೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ. ದಸರಾ ಮಹೋತ್ಸವ ಉದ್ಘಾಟನೆಗೆ ಡಾ.ಮಂಜುನಾಥ್ ಅವರಿಗೆ ಆಹ್ವಾನ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಸರಾ ಉನ್ನತ ಮಟ್ಟದ ಸಮಿತಿಯಲ್ಲಿ ಆರು ಮಂದಿ ಕೊರೊನಾ ವಾರಿಯರ್ಸ್‍ನಿಂದ ಉದ್ಘಾಟಿಸುವ ತೀರ್ಮಾನಕ್ಕೆ ಬರಲಾಗಿತ್ತು. ಬಳಿಕ ಒಬ್ಬರಿಂದ ಉದ್ಘಾಟಿಸಿ, ಉಳಿದವರಿಗೆ ಸನ್ಮಾನಿಸುವ ತೀರ್ಮಾನವನ್ನು ತೆಗೆದುಕೊಂಡು ಅಂತಿಮವಾಗಿ ಮುಖ್ಯಮಂತ್ರಿಗಳು ಡಾ. ಮಂಜು ನಾಥ್ ಅವರನ್ನು ಆಯ್ಕೆ ಮಾಡಿದ್ದಾಗಿ, ದೂರವಾಣಿ ಕರೆ ಮಾಡಿ ನನಗೆ ತಿಳಿಸಿದರು. ಆನಂತರ ಮೈಸೂರಿನಲ್ಲೇ ಮಾಧ್ಯಮದ ಮುಖಾಂತರ ಮಂಜುನಾಥ್ ಅವರ ಹೆಸ ರನ್ನು ಪ್ರಕಟಿಸಿದೆ. ಇದೀಗ ಅವರಿಗೆ ಅಧಿಕೃತ ಆಹ್ವಾನವನ್ನು ನೀಡಿದ್ದೇವೆ ಎಂದರು. ಈ ಬಾರಿ ಕೋವಿಡ್-19 ಇರುವ ಹಿನ್ನೆಲೆಯಲ್ಲಿ ಸರಳ, ಸಾಂಪ್ರ ದಾಯಿಕ ದಸರಾಕ್ಕೆ ಮಾತ್ರ ಒತ್ತುಕೊಡುತ್ತಿದ್ದು, ಚಾಮುಂಡಿಬೆಟ್ಟದಲ್ಲಿನ ಕಾರ್ಯಕ್ರಮಕ್ಕೆ 200 ಮಂದಿ, ಸಾಂಸ್ಕøತಿಕ ಕಾರ್ಯಕ್ರಮಕ್ಕೆ 50 ಹಾಗೂ ಜಂಬೂ ಸವಾರಿಗೆ 300 ಜನರಿಗೆ ಅವಕಾಶ ಕಲ್ಪಿಸಲು ತೀರ್ಮಾನಿಸಲಾಗಿದೆ. ಇಲ್ಲಿ ಜನಪ್ರತಿನಿಧಿಗಳೂ, ಅಧಿಕಾ ರಿಗಳು, ಮಾಧ್ಯಮದವರು ಹಾಗೂ ಸಾರ್ವಜನಿಕರಿಗೆ ಎಷ್ಟು ಪ್ರಮಾಣದಲ್ಲಿ ಪ್ರವೇಶಕ್ಕೆ ಅನುಮತಿ ನೀಡಬೇಕೆಂಬುದನ್ನು ಜಿಲ್ಲಾಧಿಕಾರಿಗಳು ನಿರ್ಧಾರ ಮಾಡುತ್ತಾರೆ ಎಂದರು. ಸಾರ್ವಜನಿಕರೂ ಸೇರಿದಂತೆ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದರು.
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಹ್ವಾನ ಪತ್ರಿಕೆ, ಅರಮನೆಯ ಚಿತ್ರಕಲಾಕೃತಿಯ ಹೊತ್ತಿಗೆ, ಹಾಗೂ ಫಲ ತಾಂಬೂಲಗಳನ್ನು ನೀಡಿ, ಆಹ್ವಾನಿಸಿರುವುದಾಗಿ ತಿಳಿಸಿದ ಅವರು, ದಸರಾ ಸಂಬಂಧ ಸಾಕಷ್ಟು ಮುತುವರ್ಜಿ ವಹಿಸಿ, ಅನುದಾನಗಳನ್ನು ಬಿಡುಗಡೆ ಮಾಡಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಮೈಸೂರು ಜಿಲ್ಲೆಯಲ್ಲಿ ಸದ್ಯದ ಕೋವಿಡ್-19 ಪರಿಸ್ಥಿತಿ ಹಾಗೂ ತೆಗೆದುಕೊಳ್ಳಲಾಗುತ್ತಿರುವ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮುಖ್ಯಮಂತ್ರಿಯವರಿಗೆ ಮಾಹಿತಿ ನೀಡಿರುವುದಾಗಿ ತಿಳಿಸಿದರು.