ಮೈಸೂರು,ಸೆ.12-ಫ್ರಂಟ್‍ಲೈನ್ ವರ್ಕರ್ಸ್ ಗಳಾಗಿ ಕಾರ್ಯನಿರ್ವಹಿಸಲು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಅಲ್ಪಾವಧಿ ಕೌಶಲ ತರಬೇತಿ ನೀಡುವ ಕಾರ್ಯಕ್ರಮವನ್ನು ಯಶಸ್ವಿ ಮಾಡಲು ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದೊಂ ದಿಗೆ ಕೆಲಸ ಮಾಡುವಂತೆ ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಸಲಹೆ ನೀಡಿದರು.
ಕೋವಿಡ್-19 ಫ್ರಂಟ್‍ಲೈನ್ ವರ್ಕರ್ ಗಳಾಗಿ ಕಾರ್ಯನಿರ್ವಹಿಸಲು ಆಸಕ್ತಿಯುಳ್ಳ ಅಭ್ಯರ್ಥಿಗಳಿಗೆ ಅಲ್ಪಾವಧಿ ಕೌಶಲ ತರಬೇತಿ ಗಳನ್ನು ಆಯೋಜಿಸುವ ಕುರಿತು ಡಿಸಿ ಕಚೇರಿಯಲ್ಲಿ ನಡೆದ ವಿಶೇಷ ಸಮಿತಿಯ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತ ನಾಡಿದರು. ಕಾರ್ಯಕ್ರಮದ ರೂಪರೇಷೆಗೆ ಕೇವಲ ಸಭೆಗಳನ್ನು ಮಾಡಿದರೆ ಸಾಲದು, ಜಿಲ್ಲಾ ಮಟ್ಟದ ಅಧಿಕಾರಿಗಳು ಪರಸ್ಪರ ಸಮಾಲೋಚಿಸಿ, ಅಂತಿಮ ರೂಪರೇಷೆಗಳ ಬಗ್ಗೆ ಡಿಎಚ್‍ಓ ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಮ ನ್ವಯ ಸಾಧಿಸಿ ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಸೂಚಿಸಿದರು.
ಅಲ್ಪಾವಧಿ ಕೌಶಲ ತರಬೇತಿ ನೀಡುವ ಯೋಜನೆಯ ಅನುಷ್ಠಾನಕ್ಕಾಗಿ ಡಿಸಿ ಅಧ್ಯ ಕ್ಷತೆಯಲ್ಲಿ ಮೈಸೂರು ವೈದ್ಯಕೀಯ ಮಹಾ ವಿದ್ಯಾಲಯದ ನಿರ್ದೇಶಕರು, ಜಿಲ್ಲಾ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಗಳು, ಜಿಲ್ಲಾಸ್ಪತ್ರೆ ಜಿಲ್ಲಾ ಶಸ್ತ್ರಚಿಕಿತ್ಸಕರು, ಪ್ರಾದೇ ಶಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ಪ್ರಾಂಶುಪಾಲರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರ್ರದ ಪ್ರಾಂಶುಪಾಲರು, ಜಿಲ್ಲಾ ಕೌಶಲಾ ಭಿವೃದ್ಧಿ ಅಧಿಕಾರಿಗಳ ಸದಸ್ಯರನ್ನೊಳಗೊಂಡ ವಿಶೇಷ ಸಮಿತಿ ರಚಿಸಲಾಗಿದೆ ಎಂದರು.
ಹೆಚ್ಚಿನ ಮಾಹಿತಿಗಾಗಿ ಪ್ರಾದೇಶಿಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ದೂ.ಸಂ: 0821-2413896, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ದೂ.ಸಂ: 0821-2414462, ಜಿಲ್ಲಾ ಕೌಶಲಾಭಿವೃದ್ಧಿ ಕಚೇರಿ ದೂ.ಸಂ. 0821-2970815 ಹಾಗೂ ಇ-ಮೇಲ್: ಜsಜo mಥಿsoಡಿe@gmಚಿiಟ.ಛಿomಗೆ ಸಂಪರ್ಕಿಸಬಹುದು ಎಂದು ತಿಳಿಸಿದರು.
ಸಭೆಯಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಹಾಗೂ ಜೀವನೋಪಾಯ ಇಲಾಖೆ ಸಹಾಯಕ ನಿರ್ದೇಶಕ ಸಿ.ಎಸ್.ಸುದ ರ್ಶನ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಸಿ.ಜಗನ್ನಾಥ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದ ಪ್ರಿನ್ಸಿಪಾಲ್ ಡಾ.ಸುವರ್ಣ ಹಾಜರಿದ್ದರು.