ಮೂಲ ಸೌಕರ್ಯ ಒದಗಿಸಲು ಡಿಸಿ ಸೂಚನೆ
ಕೊಡಗು

ಮೂಲ ಸೌಕರ್ಯ ಒದಗಿಸಲು ಡಿಸಿ ಸೂಚನೆ

June 26, 2018

ಮಡಿಕೇರಿ:  ಸೋಮವಾರ ಪೇಟೆ ತಾಲೂಕಿನ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುವ ಗಿರಿಜನ ಕಟುಂಬಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಆದಷ್ಟು ಬೇಗನೆ ಕಲ್ಪಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಸವನಹಳ್ಳಿ ಮತ್ತು ಬ್ಯಾಡ ಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ವಾಸವಿರುವ ಗಿರಿಜನರ ಕುಟುಂಬಗಳಿಗೆ ಒದಗಿಸಲಾಗುತ್ತಿರುವ ಮೂಲಭೂತ ಸೌಕರ್ಯಗಳ ಪ್ರಗತಿ ಪರಿಶೀಲನಾ ಸಭೆ ಯಲ್ಲಿ ಅವರು ಮಾತನಾಡಿದರು.

ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನ ರ್ವಸತಿ ಕೇಂದ್ರಗಳಲ್ಲಿ ತಾತ್ಕಾಲಿಕ ಶೌಚಾ ಲಯಕ್ಕೆ ನಿರ್ಮಿಸಿರುವ ಪಿಟ್‍ಗುಂಡಿಗಳು ಮಳೆಯ ನೀರಿನಿಂದ ಬೇಗನೆ ತುಂಬು ತ್ತಿದ್ದು, ಇದರಿಂದ ಸಾಂಕ್ರಾಮಿಕ ರೋಗ ಗಳು ಹರಡುವ ಮುಂಚೆಯೇ ಅವುಗ ಳನ್ನು ಪ್ರತಿ 5 ದಿನಗಳಿಗೊಮ್ಮೆ ಗುಂಡಿ ಗಳನ್ನು ಸ್ವಚ್ಚಗೊಳಿಸಲು ಕ್ರಮ ಕೈಗೊಳ್ಳು ವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಬಸವನಹಳ್ಳಿಯ 101 ಮತ್ತು ಬ್ಯಾಡ ಗೊಟ್ಟದ 99 ಮನೆಗಳ ಕಾಮಗಾರಿ ಪೂರ್ಣ ಗೊಳ್ಳುವ ಹಂತದಲ್ಲಿದ್ದು, ಅವುಗಳನ್ನು ಒಂದು ತಿಂಗಳ ಅವಧಿಯೊಳಗೆ ಮುಕ್ತಾಯ ಗೊಳಿಸುವಂತೆ ಜಿಲ್ಲಾಧಿಕಾರಿ ಅವರು ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು. ಪುನರ್ವಸತಿ ಕೇಂದ್ರಗಳಲ್ಲಿ ವಾಸಿಸುವ ಕುಟುಂಬಗಳಿಗೆ ಆಧಾರ್ ಕಾರ್ಡ್, ಪಡಿ ತರ ಚೀಟಿ, ಚುನಾವಣಾ ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ತ್ವರಿತಗತಿಯಲ್ಲಿ ಮಾಡಿಕೊಡುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅವರು ಸೂಚಿಸಿದರು.

ಜಿಪಂ ಸಿಇಒ ಪ್ರಶಾಂತಕುಮಾರ್ ಮಿಶ್ರ ಮಾತನಾಡಿ, ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಸ್ವ ಉದ್ಯೋಗ ಪಡೆಯು ವಂತಾಗಲು ಅಲ್ಲಿ ವಾಸಿಸುವ ಕುಟುಂಬ ಸದಸ್ಯರ ಹೆಸರು ನೋಂದಾಯಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಐಟಿಡಿಪಿ ಇಲಾಖೆ ಅಧಿಕಾರಿಗಳಿಗೆ ಸಲಹೆ ಮಾಡಿ ದರು. ಪುನರ್ವಸತಿ ಕೇಂದ್ರಗಳ ಮೂಲ ಸೌಕರ್ಯಕ್ಕೆ ಸಂಬಂಧಿಸಿದಂತೆ ಉಪ ವಿಭಾಗಾಧಿಕಾರಿ ರಮೇಶ್ ಪಿ.ಕೋನರೆಡ್ಡಿ, ಐಟಿಡಿಪಿ ಇಲಾಖೆ ಅಧಿಕಾರಿ ಶಿವಕುಮಾರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇ ಶಕ ಸಚಿನ್ ಹಲವು ಮಾಹಿತಿಯನ್ನು ನೀಡಿ ದರು. ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಪುಟ್ಟಸ್ವಾಮಿ, ಸೆಸ್ಕ್ ಎಂಜಿನಿಯರ್ ಸೋಮ ಶೇಖರ್, ಕುಶಾಲನಗರ ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ಶ್ರೀಧರ್, ಪಂಚಾಯಿತಿ ಅಭಿ ವೃದ್ಧಿ ಅಧಿಕಾರಿಗಳು ಇತರರು ಇದ್ದರು.

Translate »